< حزقیال 7 >

و کلام خداوند بر من نازل شده، گفت: ۱ 1
ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
«وتو‌ای پسر انسان (بگو): خداوند یهوه به زمین اسرائیل چنین می‌گوید: انتهایی بر چهارگوشه زمین انتها رسیده است. ۲ 2
“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
الان انتها بر تورسیده است و من خشم خود را بر تو واردآورده‌ام و بر وفق راههایت ترا داوری نموده، تمامی رجاساتت را بر تو خواهم نهاد. ۳ 3
ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.
و چشم من برتو شفقت نخواهد کرد و رحمت نخواهم فرمود بلکه راههای تو را بر تو خواهم نهاد ورجاسات تو در میانت خواهد بود. پس خواهی دانست که من یهوه هستم.» ۴ 4
ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
خداوند یهوه چنین می‌گوید: «بلا هان بلای واحد می‌آید! ۵ 5
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!
انتهایی می‌آید، انتهایی می‌آید وبه ضد تو بیدار شده است. هان می‌آید. ۶ 6
ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
‌ای ساکن زمین اجل تو بر تو می‌آید. وقت معین می‌آید و آن روز نزدیک است. روز هنگامه خواهد شد و نه روز آواز شادمانی بر کوهها. ۷ 7
ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.
الان عنقریب غضب خود را بر تو خواهم ریخت و خشم خویش را بر تو به اتمام رسانیده، تو را موافق راههایت داوری خواهم نمود و جمیع رجاساتت را بر تو خواهم نهاد. ۸ 8
ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
و چشم من شفقت نخواهدکرد و رحمت نخواهم فرمود، بلکه مکافات راههایت را به تو خواهم رسانید و رجاسات تو درمیانت خواهد بود و خواهید دانست که زننده تو من یهوه هستم. ۹ 9
ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.
اینک آنروز هان می‌آید! اجل تو بیرون آمده و عصا شکوفه آورده و تکبر، گل کرده است. ۱۰ 10
೧೦“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
ظلم عصای شرارت گشته است. ازایشان و از جمعیت ایشان و از ازدحام ایشان چیزی باقی نیست و در میان ایشان حشمتی نمانده است. ۱۱ 11
೧೧ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.
وقت می‌آید و آنروز نزدیک است. پس مشتری شادی نکند و فروشنده ماتم نگیرد، زیرا که خشم بر تمامی جمعیت ایشان قرار گرفته است. ۱۲ 12
೧೨ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
زیرا که فروشندگان اگر‌چه در میان زندگان زنده مانند، به آنچه فروخته باشندنخواهند برگشت، چونکه غضب بر تمامی جمعیت ایشان قرار گرفته است. ایشان نخواهندبرگشت و هیچکس به گناه خویش زندگی خود راتقویت نخواهد داد. ۱۳ 13
೧೩ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.
کرنا را نواخته و همه‌چیزرا مهیا ساخته‌اند، اما کسی به جنگ نمی رود. زیراکه غضب من بر تمامی جمعیت ایشان قرار گرفته است. ۱۴ 14
೧೪ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
شمشیر در بیرون است و وبا و قحط دراندرون. آنکه در صحرا است به شمشیر می‌میرد وآنکه در شهر است قحط و وبا او را هلاک می‌سازد. ۱۵ 15
೧೫ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
و رستگاران ایشان فرار می‌کنند ومثل فاخته های دره‌ها بر کوهها می‌باشند. و هرکدام از ایشان به‌سبب گناه خود ناله می‌کنند. ۱۶ 16
೧೬ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
همه دستها سست شده و جمیع زانوها مثل آب بیتاب گردیده است. ۱۷ 17
೧೭ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
و پلاس در برمی کنند و وحشت ایشان را می‌پوشاند و بر همه چهره‌ها خجلت و بر جمیع سرها گری می‌باشد. ۱۸ 18
೧೮ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
نقره خود را در کوچه‌ها می‌ریزند و طلای ایشان مثل چیز نجس می‌باشد. نقره و طلای ایشان در روز غضب خداوند ایشان را نتواندرهانید. جانهای خود را سیر نمی کنند و بطنهای خویش را پر نمی سازند زیرا گناه ایشان سنگ مصادم آنها شده است. ۱۹ 19
೧೯ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
«و او زیبایی زینت خود را در کبریایی قرارداده بود، اما ایشان بتهای مکروهات و رجاسات خویش را در آن ساختند. بنابراین آن را برای ایشان مثل چیز نجس خواهم گردانید. ۲۰ 20
೨೦ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
و آن رابه‌دست غریبان به تاراج و به شریران جهان به غارت خواهم داد و آن را بی‌عصمت خواهندساخت. ۲۱ 21
೨೧ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.
و روی خود را از ایشان خواهم برگردانید و مکان مستور مرا بی‌عصمت خواهندنمود و ظالمان داخل آن شده، آن را بی‌عصمت خواهند ساخت. ۲۲ 22
೨೨ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
زنجیر را بساز، زیرا که زمین از جرمهای خونریزی پر است و شهر از ظلم مملو. ۲۳ 23
೨೩ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.
و اشرار امت‌ها را خواهم آورد و درخانه های ایشان تصرف خواهند نمود و تکبرزورآوران را زایل خواهم ساخت و آنهامکان های مقدس ایشان را بی‌عصمت خواهندنمود. ۲۴ 24
೨೪ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
هلاکت می‌آید و سلامتی را خواهندطلبید، اما یافت نخواهد شد. ۲۵ 25
೨೫ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.
مصیبت برمصیبت می‌آید و آوازه بر آوازه مسموع می‌شود. رویا از نبی می‌طلبند، اما شریعت از کاهنان ومشورت از مشایخ نابود شده است. ۲۶ 26
೨೬ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
پادشاه ماتم می‌گیرد و رئیس به حیرت ملبس می‌شود ودستهای اهل زمین می‌لرزد. و موافق راههای ایشان با ایشان عمل خواهم نمود و بر وفق استحقاق ایشان ایشان را داوری خواهم نمود. پس خواهند دانست که من یهوه هستم؟ ۲۷ 27
೨೭ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

< حزقیال 7 >