< اعداد 36 >

و روسای خاندان آبای قبیله بنی جلعادبن ماکیربن منسی که از قبایل بنی یوسف بودند نزدیک آمده به حضور موسی وبه حضور سروران و روسای خاندان آبای بنی‌اسرائیل عرض کرده، ۱ 1
ಆಗ ಯೋಸೇಫನ ಪುತ್ರರ ಕುಟುಂಬದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬಗಳ ಮುಖ್ಯಸ್ಥರು ಮೋಶೆ ಹಾಗೂ ಇಸ್ರಾಯೇಲರ ಕುಲನಾಯಕರ ಸಮೀಪಕ್ಕೆ ಬಂದು ಮಾತನಾಡಿ,
گفتند: «خداوند، آقای ما را امر فرمود که زمین را به قرعه تقسیم کرده، به بنی‌اسرائیل بدهد، و آقای ما از جانب خداوند مامور شده است که نصیب برادر ماصلفحاد را به دخترانش بدهد. ۲ 2
“ಚೀಟುಹಾಕಿ ನಾಡನ್ನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವುದಕ್ಕೆ ಯೆಹೋವ ದೇವರು ನಮ್ಮ ಒಡೆಯನಾದ ನಿನಗೆ ಆಜ್ಞಾಪಿಸಿದರು. ನಮ್ಮ ಸಹೋದರನಾದ ಚಲ್ಪಹಾದನ ಸೊತ್ತನ್ನು ಅವನ ಪುತ್ರಿಯರಿಗೆ ಕೊಡಬೇಕೆಂದು ದೇವರಿಂದ ಅಪ್ಪಣೆಯಾಗಿತ್ತು.
پس اگر ایشان به یکی از پسران سایر اسباط بنی‌اسرائیل منکوحه شوند، ارث ما از میراث پدران ما قطع شده، به میراث سبطی که ایشان به آن داخل شوند، اضافه خواهد شد، و از بهره میراث ما قطع خواهد شد. ۳ 3
ಆದರೆ ಅವರು ಇಸ್ರಾಯೇಲರ ಬೇರೆ ಗೋತ್ರದವರಿಗೆ ಮದುವೆಯಾದರೆ, ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಸೊತ್ತಿನಿಂದ ಅವರನ್ನು ಮದುವೆಮಾಡಿಕೊಂಡ ಗೋತ್ರದವರಿಗೆ ಸೊತ್ತು ಹೋಗುತ್ತದೆ. ಇದರಿಂದ ನಮ್ಮ ಸೊತ್ತಿನ ಭಾಗ ಕಡಿಮೆಯಾಗಿ ಹೋಗುವುದು.
و چون یوبیل بنی‌اسرائیل بشود ملک ایشان به ملک سبطی که به آن داخل شوند اضافه خواهدشد، و ملک ایشان از ملک پدران ما قطع خواهدشد.» ۴ 4
ಇಸ್ರಾಯೇಲರಿಗೆ ಜೂಬಿಲಿ ವರ್ಷ ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಗೋತ್ರಕ್ಕೆ ಸೇರಿಕೊಳ್ಳುತ್ತದೆ. ಹೀಗೆ ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಗೋತ್ರದ ಸೊತ್ತಿನಿಂದ ತೆಗೆಯಲಾಗುವುದು.”
پس موسی بنی‌اسرائیل را برحسب قول خداوند امر فرموده، گفت: «سبط بنی یوسف راست گفتند. ۵ 5
ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಇಸ್ರಾಯೇಲರಿಗೆ ಆಜ್ಞಾಪಿಸಿ, “ಯೋಸೇಫನ ಪುತ್ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.
این است آنچه خداوند درباره دختران صلفحاد امر فرموده، گفته است: به هر‌که در نظر ایشان پسند آید، به زنی داده شوند، لیکن در قبیله سبط پدران خود فقط به نکاح داده شوند. ۶ 6
ಯೆಹೋವ ದೇವರು ಚಲ್ಪಹಾದನ ಪುತ್ರಿಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನೆಂದರೆ: ಅವರು ತಮ್ಮ ಮನಸ್ಸು ಬಂದವರೊಂದಿಗೆ ಮದುವೆಮಾಡಿಕೊಳ್ಳಲಿ, ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದವರಿಗೆ ಮಾತ್ರ ಮದುವೆ ಮಾಡಿಕೊಳ್ಳಬಹುದು.
پس میراث بنی‌اسرائیل از سبط به سبط منتقل نشود، بلکه هر یکی از بنی‌اسرائیل به میراث سبطپدران خود ملصق باشند. ۷ 7
ಇಸ್ರಾಯೇಲರ ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರದ ಕೈಗೆ ಹೋಗಬಾರದು. ಏಕೆಂದರೆ ಇಸ್ರಾಯೇಲರು, ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸೊತ್ತನ್ನು ತಾನೇ ಹೊಂದಿರಬೇಕು.
و هر دختری که وارث ملکی از اسباط بنی‌اسرائیل بشود، به کسی از قبیله سبط پدر خود به زنی داده شود، تا هریکی از بنی‌اسرائیل وارث ملک آبای خود گردند. ۸ 8
ಇದಕ್ಕಾಗಿ ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸೊತ್ತನ್ನು ಸ್ವಾಧೀನ ಮಾಡಿಕೊಳ್ಳುವಂತೆ ಇಸ್ರಾಯೇಲರ ಗೋತ್ರಗಳೊಳಗೆ ಸೊತ್ತನ್ನು ಹೊಂದಿರುವ ಒಬ್ಬೊಬ್ಬ ಪುತ್ರಿಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿರುವವನೊಂದಿಗೇ ಮದುವೆ ಮಾಡಿಕೊಳ್ಳಬೇಕು.
و ملک از یک سبط به سبط دیگر منتقل نشود، بلکه هرکس از اسباط بنی‌اسرائیل به میراث خودملصق باشند.» ۹ 9
ಒಂದು ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಹಸ್ತಾಂತರಗೊಳ್ಳಬಾರದು ಆದರೆ ಇಸ್ರಾಯೇಲರ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸೊತ್ತಿಗೆ ತಾನೇ ಹೊಂದಿಕೊಳ್ಳಬೇಕು,” ಎಂದನು.
پس چنانکه خداوند موسی را امر فرمود، دختران صلفحاد چنان کردند. ۱۰ 10
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾದನ ಪುತ್ರಿಯರು ಮಾಡಿದರು.
و دختران صلفحاد، محله و ترصه و حجله و ملکه و نوعه به پسران عموهای خود به زنی داده شدند. ۱۱ 11
ಚಲ್ಪಹಾದನ ಪುತ್ರಿಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ, ತಮ್ಮ ಚಿಕ್ಕಪ್ಪಂದಿರ ಪುತ್ರರನ್ನು ಮದುವೆಯಾದರು.
درقبایل بنی منسی ابن یوسف منکوحه شدند وملک ایشان در سبط قبیله پدر ایشان باقی ماند. ۱۲ 12
ಯೋಸೇಫನ ಮಗನಾದ ಮನಸ್ಸೆಯ ಪುತ್ರರ ಕುಟುಂಬದವರೊಡನೆ ಮದುವೆಯಾದರು. ಈ ಪ್ರಕಾರ ಅವರ ಸೊತ್ತು ತಮ್ಮ ಪಿತೃವಿನ ಗೋತ್ರದಲ್ಲಿಯೇ ಉಳಿಯಿತು.
این است اوامر و احکامی که خداوند به واسطه موسی در عربات موآب نزد اردن در مقابل اریحا به بنی‌اسرائیل امر فرمود. ۱۳ 13
ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರಿಗೆ ಆಜ್ಞಾಪಿಸಿದ ಆಜ್ಞೆಗಳೂ, ನ್ಯಾಯಗಳೂ ಇವೇ.

< اعداد 36 >