< I Kronik 16 >

1 A gdy przynieśli skrzynię Bożą, i postawili ją w pośród namiotu, który był Dawid rozbił, tedy sprawowali całopalenia i ofiary spokojne przed Bogiem.
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
2 A gdy dokończył Dawid ofiarować całopalenia, i ofiar spokojnych, błogosławił ludowi w imię Pańskie.
ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು.
3 I rozdzielił wszystkim mężom Izraelskim, od męża aż do niewiasty, każdemu po bochenku chleba, i po sztuce mięsa, i po łagiewce wina.
ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.
4 A postanowił przed skrzynią Pańską z Lewitów sługu, aby wspominali, i wyznawali, i chwalili Pana, Boga Izraelskiego.
ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
5 Asaf był przedniejszy, a wtóry po nim Zacharyjasz, Jehyjel, i Semiramot, i Jechyjel i Matytyjasz, i Elijab, i Benajasz, i Obededom, i Jechyjel; ci na instrumentach, na lutniach, na harfach, ale Asaf na cymbałach, grali.
ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.
6 Benajasz zaś i Jachazyjel kapłani z trąbami ustawiczne byli przed skrzynią przymierza Bożego.
ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.
7 Dopiero dnia onego najpierwej postanowił Dawid, aby tym psalmem chwalony był Pan przez Asafa i braci jego:
ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;
8 Wysławiajcie Pana, wzywajcie imienia jego, a opowiadajcie między narodami sprawy jego.
“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
9 Śpiewajcie mu, grajcie mu, rozmawiajcie o wszystkich cudach jego.
ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
10 Chlubcie się w imieniu świętem jego, a niech się rozraduje serce szukających Pana.
೧೦ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ.
11 Szukajcie Pana, i mocy jego; szukajcie oblicza jego zawżdy.
೧೧ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
12 Wspominajcie dziwne sprawy jego, które czynił, i cuda jego, i sądy ust jego.
೧೨ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
13 O nasienie Izraelskie, słudzy jego! O synowie Jakóbowi, wybrani jego!
೧೩ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.
14 On jest Pan, Bóg nasz; po wszystkiej ziemi sądy jego.
೧೪ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
15 Pamiętajcie aż na wieki na przymierze jego, na słowow, które przykazał do tysiącznego pokolenia;
೧೫ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.
16 Które postanowił z Abrahamem, i na przysięgę jego z Izaakiem;
೧೬ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.
17 I postanowił to Jakóbowi za prawo, a Izraelowi za przymierze wieczne,
೧೭ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.
18 Mówiąc: Tobie dam ziemię Chananejską za sznur dziedzictwa waszego.
೧೮ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ
19 Choć was była mała liczba, a przez krótki czas byliście przychodniami w niej;
೧೯ಆತನು, ‘ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು’ ಎಂದು ವಾಗ್ದಾನ ಮಾಡಿದನು.
20 I przechodzili od narodu do narodu, i od królestwa do innego ludu:
೨೦ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ
21 Nie dopuścił nikomu, aby ich uciskać miał, i karał dla nich królów,
೨೧ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,
22 Mówiąc: Nie tykajcie pomazańców moich, a prorokom moim nie czyńcie nic złego.
೨೨‘ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು’ ಎಂದು ಹೇಳಿದನು.
23 Śpiewajcie Panu wszystka ziemio; opowiadajcie ode dnia do dnia zbawienie jego.
೨೩ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ.
24 Opowiadajcie między narodami chwałę jego, i między wszystkimi ludźmi dziwne sprawy jego;
೨೪ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ.
25 Bo wielki jest Pan, i chwalebny bardzo, i straszniejszy nad wszystkich bogów;
೨೫ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.
26 Gdyż bogowie pogańscy są bałwanami; ale Pan niebiosa uczynił.
೨೬ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.
27 Sława i zacność przed nim, moc i wesele na miejscu jego.
೨೭ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.
28 Przynieście Panu pokolenia narodów, przynieście Panu chwałę i moc.
೨೮ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
29 Przynieście Panu chwałę imienia jego, przynieście dary, a przychodźcie przed obliczności jego; kłaniajcie się Panu w ozdobie świętobliwości.
೨೯ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.
30 Bójcie się oblicza jego wszystka ziemio, a będzie utwierdzony okrąg ziemi, aby się nie poruszył.
೩೦ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ,
31 Niech się rozradują niebiosa, a niech się rozweseli ziemia, a niech mówią w narodach: Pan króluje!
೩೧ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
32 Niech zaszumi morze, i ze wszystkiem, co w niem jest; niech się rozraduje pole, i wszystko, co na niem jest.
೩೨ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.
33 Tedy się rozweselą drzewa leśne przed Panem; albowiem przyszedł sądzić ziemię.
೩೩ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.
34 Wysłwiajcie Pana; albowiem dobry, bo na wieki trwa miłosierdzie jego.
೩೪ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
35 A mówcie: Zachowaj nas, Boże zbawienia naszego! i zgromadź nas, a wyrwij nas od pogan, abyśmy wielbili imię święte twoje, i chlubili się w chwale twojej.
೩೫ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
36 Błogosławiony Pan, Bóg Izraelski, od wieków aż na wieki. I rzekł wszystek lud Amen, i chwalił Pana.
೩೬ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
37 I zostawił tam Dawid przed skrzynią przymierza Pańskiego Asafa i braci jego, aby służyli przed skrzynią ustawicznie według potrzeby dnia każdego.
೩೭ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,
38 Lecz Obededoma i braci ich sześdziesiąt i ośm, Obededoma mówię, syna Jedytunowego, i Hosę, uczynił odźwiernymi.
೩೮ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು.
39 A Sadoka kapłana, i braci jego kapłanów postawił przed przybytkiem Pańskim na wyżynie, która była w Gabaon,
೩೯ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.
40 Aby ofiarowali całopalenia Panu na ołtarzu całopalenia ustawicznie rano i w wieczór, a to według wszystkiego, co napisano w zakonie Pańskim, który przykazał Izraelowi.
೪೦ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
41 A z nimi Hemana i Jedytuna, i innych na to obranych, którzy byli z imienia mianowani, aby chwalili Pana, przeto iż na wieki trwa miłosierdzie jego.
೪೧ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.
42 A między nimi Heman i Jedytun, trąbili i grali na trąbach, na cymbałach, i na innych instrumentach muzycznych Bogu; ale synów Jedytunowych postawił u wrót.
೪೨ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.
43 A tak rozszedł się wszystek lud, każdy do domu swego. Dawid się też wrócił, aby błogosławił domowi swemu.
೪೩ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.

< I Kronik 16 >