< 2 Crônicas 18 >

1 Tinha, pois, Josafá riquezas e glória em abundância, e estabeleceu parentesco com Acabe.
ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.
2 E depois de alguns anos desceu a Acabe a Samaria; por o que matou Acabe muitas ovelhas e bois para ele, e para a gente que com ele vinha: e persuadiu-lhe que fosse com ele a Ramote de Gileade.
ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.
3 E disse Acabe rei de Israel a Josafá rei de Judá: Queres vir comigo a Ramote de Gileade? E ele respondeu: Como eu, assim também tu; e como teu povo, assim também meu povo: iremos contigo à guerra.
ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.
4 Ademais disse Josafá ao rei de Israel: Rogo-te que consultes hoje a palavra do SENHOR.
ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಇಂದು ಯೆಹೋವನ ಆಲೋಚನೆಯನ್ನು ಕೇಳು” ಎಂದು ಕೇಳಿಕೊಂಡನು.
5 Então o rei de Israel juntou quatrocentos profetas, e disse-lhes: Iremos à guerra contra Ramote de Gileade, ou ficarei eu quieto? E eles disseram: Sobe, que Deus os entregará em mão do rei.
ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
6 Mas Josafá disse: Há ainda aqui algum profeta do SENHOR, para que por ele perguntemos?
ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು.
7 E o rei de Israel respondeu a Josafá: Ainda há aqui um homem pelo qual podemos preguntar ao SENHOR: mas eu lhe aborreço, porque nunca me profetiza coisa boa, a não ser sempre mal. Este é Micaías, filho de Inlá. E respondeu Josafá: Não fale assim o rei.
ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.
8 Então o rei de Israel chamou um eunuco, e disse-lhe: Faze vir logo a Micaías filho de Inlá.
ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
9 E o rei de Israel e Josafá rei de Judá, estavam sentados cada um em seu trono, vestidos de suas roupas; e estavam sentados na eira à entrada da porta de Samaria, e todos os profetas profetizavam diante deles.
ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.
10 E Zedequias filho de Quenaaná se havia feito chifres de ferro, e dizia: Assim disse o SENHOR: Com estes chifrarás aos sírios até destruí-los de todo.
೧೦ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.
11 De esta maneira profetizavam também todos os profetas, dizendo: Sobe a Ramote de Gileade, e sei próspero; porque o SENHOR a entregará em mão do rei.
೧೧ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
12 E o mensageiro que havia ido a chamar a Micaías, lhe falou, dizendo: Eis aqui as palavras dos profetas a uma boca anunciam ao rei bens; eu, pois, te rogo que tua palavra seja como a de um deles, que fales bem.
೧೨ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.
13 E disse Micaías: Vive o SENHOR, que o que meu Deus me disser, isso falarei. E veio ao rei.
೧೩ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
14 E o rei lhe disse: Micaías, iremos a lutar contra Ramote de Gileade, ou ficarei eu quieto? E ele respondeu: Subi, que sereis prosperados, que serão entregues em vossas mãos.
೧೪ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.
15 E o rei lhe disse: Até quantas vezes te conjurarei pelo nome do SENHOR que não me fales a não ser a verdade?
೧೫ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು
16 Então ele disse: Eis visto a todo Israel derramado pelos montes como ovelhas sem pastor: e disse o SENHOR: Estes não têm senhor; volte-se cada um em paz em sua casa.
೧೬ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.
17 E o rei de Israel disse a Josafá: Não te havia eu dito que não me profetizaria bem, mas sim mal?
೧೭ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
18 Então ele disse: Ouvi, pois, a palavra do SENHOR: Eu vi ao SENHOR sentado em seu trono, e todo o exército dos céus estava a sua mão direita e a sua esquerda.
೧೮ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.
19 E o SENHOR disse: Quem induzirá a Acabe rei de Israel, para que suba e caia em Ramote de Gileade? E um dizia assim, e outro dizia de outra maneira.
೧೯ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
20 Mas saiu um espírito, que se pôs diante do SENHOR, e disse: Eu lhe induzirei. E o SENHOR lhe disse: De que modo?
೨೦ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,
21 E ele disse: Sairei e serei espírito de mentira na boca de todos os profetas. E o SENHOR disse: Incita, e também prevalece: sai, e faze-o assim.
೨೧ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.
22 E eis que agora pôs o SENHOR espírito de mentira na boca destes teus profetas; mas o SENHOR decretou o mal acerca de ti.
೨೨ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
23 Então Zedequias filho de Quenaaná se chegou a ele, e feriu a Micaías na face, e disse: Por que caminho se separou de mim o espírito do SENHOR para falar a ti?
೨೩ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.
24 E Micaías respondeu: Eis aqui tu o verás aquele dia, quando te entrarás de câmara em câmara para esconder-te.
೨೪ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು.
25 Então o rei de Israel disse: Tomai a Micaías, e voltai-o a Amom governador da cidade, e a Joás filho do rei.
೨೫ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.
26 E direis: O rei disse assim: Ponde a este no cárcere, e sustentai-lhe com pão de aflição e água de angústia, até que eu volte em paz.
೨೬ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
27 E Micaías disse: Se tu voltares em paz, o SENHOR não falou por mim. Disse ademais: Ouvi o, povos todos.
೨೭ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು.
28 Subiu, pois, o rei de Israel, e Josafá rei de Judá, a Ramote de Gileade.
೨೮ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.
29 E disse o rei de Israel a Josafá: Eu me disfarçarei para entrar na batalha: mas tu veste-te tuas roupas. E disfarçou-se o rei de Israel, e entrou na batalha.
೨೯ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.
30 Havia o rei de Síria mandado aos capitães dos carros que tinha consigo, dizendo: Não luteis com pequeno nem com grande, a não ser somente com o rei de Israel.
೩೦ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.
31 E como os capitães dos carros viram a Josafá, disseram: Este é o rei de Israel. E cercaram-no para lutar; mas Josafá clamou, e ajudou-o o SENHOR, e apartou-os Deus dele:
೩೧ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.
32 Pois vendo os capitães dos carros que não era o rei de Israel, desistiram de persegui-lo.
೩೨ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂತಿರುಗಿದರು.
33 Mas disparando um o arco ao acaso, feriu ao rei de Israel entre as junturas e a armadura. Ele então disse ao condutor do carro: Volta tua mão, e tira-me do campo, porque estou gravemente ferido.
೩೩ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
34 E intensificou a batalha aquele dia, por o que esteve o rei de Israel em pé no carro em frente dos sírios até a tarde; mas morreu a pôr do sol.
೩೪ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.

< 2 Crônicas 18 >