< 1 Књига Самуилова 27 >
1 Али Давид рече у срцу свом: Погинућу кадгод од руке Саулове; нема боље за ме него да побегнем у земљу филистејску, те ће ме се Саул оканити и неће ме више тражити по крајевима Израиљевим; тако ћу се избавити из руку његових.
೧ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.
2 Тада се подиже Давид и отиде са шест стотина људи који беху с њим к Ахису, сину Моаховом, цару гатском.
೨ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.
3 И оста Давид код Ахиса у Гату и људи његови, сваки са својом породицом, Давид са две жене своје, Ахиноамом из Језраела и Авигејом из Кармила, женом Наваловом.
೩ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.
4 И кад јавише Саулу да је Давид утекао у Гат, преста га тражити.
೪ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಹುಡುಕಲೇ ಇಲ್ಲ.
5 А Давид рече Ахису: Ако сам нашао милост пред тобом, нека ми даду место у коме граду ове земље, да седим онде, јер зашто да седи слуга твој с тобом у царском граду?
೫ಒಂದು ದಿನ ದಾವೀದನು ಆಕೀಷನಿಗೆ, “ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರು ಒಂದು ಪಟ್ಟಣದಲ್ಲಿ ನನಗೆ ಸ್ಥಳಕೊಡು. ನಾನು ಅಲ್ಲಿ ವಾಸಮಾಡುವೆನು” ಅಂದನು.
6 И даде му Ахис оног дана Сиклаг. Зато Сиклаг припада царевима Јудиним до данашњег дана.
೬ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ.
7 И оста Давид у земљи филистејској годину и четири месеца.
೭ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳೂ ವಾಸವಾಗಿದ್ದನು.
8 И излажаше Давид са својим људима, и удараше на Гесуреје и Герзеје и на Амалике; јер ти народи живљаху од старине у оној земљи од Сура па до земље мисирске.
೮ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.
9 И пустошаше Давид ону земљу не остављајући у животу ни човека ни жене, и отимаше овце и волове и магарце и камиле и рухо, и враћајући се долажаше к Ахису.
೯ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.
10 И Ахис питаше: Где сте данас ударали? А Давид говораше: На јужну страну Јудину, и на јужну страну јерамеилску, и на јужну страну кенејску.
೧೦ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.
11 Али не остављаше Давид у животу ни човека ни жене да доведе у Гат говорећи: Да нас не туже говорећи: Тако је урадио Давид. И такав му беше обичај за све време докле беше у земљи филистејској.
೧೧ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.
12 И Ахис вероваше Давиду, и говораше: Баш се омразио с народом својим Израиљем; зато ће ми бити слуга довека.
೧೨ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.