< 1 Књига Самуилова 9 >

1 А беше један човек од племена Венијаминовог, коме име беше Кис, син Авила, сина Серора, сина Вехората, сина Афије, сина једног човека од племена Венијаминовог, храбар јунак.
ಬೆನ್ಯಾಮೀನ್ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.
2 Он имаше сина по имену Саула, који беше млад и леп да не беше лепшег од њега међу синовима Израиљевим, а главом беше виши од свега народа.
ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು.
3 А Кису, оцу Сауловом несташе магарице, па рече Кис Саулу сину свом: Узми са собом једног момка, па устани и иди те тражи магарице.
ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು.
4 И он прође гору Јефремову, и прође земљу салиску; али не нађоше; па прођоше и земљу салимску, и не беше их; па прођоше и земљу Венијаминову, и не нађоше.
ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.
5 А кад дођоше у земљу суфску, рече Саул момку свом који беше с њим: Хајде да се вратимо, да се не би отац оканио магарица и забринуо се за нас.
ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು
6 А он му рече: Ево, у овом граду има човек Божји, ког веома поштују; шта год каже све се збива; хајдемо к њему, може бити да ће нас упутити куда бисмо ишли.
ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು.
7 А Саул рече момку свом: Хајде да идемо; али шта ћемо однети човеку? Јер нам је хлеба нестало у торбама, а дар немамо да однесемо човеку Божијем. Шта имамо?
ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು
8 А момак опет одговарајући рече Саулу: Ето у мене четврт сикла сребра; то да дам човеку Божијем да нас упути.
ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು” ಎಂದು ಉತ್ತರಕೊಟ್ಟನು.
9 А у старо време ко би ишао да пита Бога говораше: Хајде да идемо к видеоцу. Јер ко се сада зове пророк у старо се време зваше виделац.
(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)
10 И Саул рече момку свом: Добро велиш; хајде да идемо. И пођоше у град где беше човек Божји.
೧೦ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು.
11 И кад иђаху уз брдо градско, сретоше девојке које излажаху да захватају воду, па им рекоше: Је ли ту виделац?
೧೧ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;
12 А оне одговарајући рекоше: Јесте, ето пред тобом; похитај, јер је данас дошао у град, јер данас народ има жртву на гори.
೧೨ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.
13 Како уђете у град, наћи ћете га пре него пође на гору да једе; јер народ неће јести докле он не дође, јер он треба да благослови жртву, па онда ће званице јести; зато идите, јер ћете га сада наћи.
೧೩ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.
14 И отидоше у град; а кад дођоше усред града, гле Самуило полазећи на гору срете их.
೧೪ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವುದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು.
15 А Господ беше објавио Самуилу дан пре него дође Саул, рекавши:
೧೫ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ,
16 Сутра у ово доба послаћу к теби једног човека из земље Венијаминове, њега помажи да буде вођ народу мом Израиљу, и он ће избавити мој народ из руку филистејских. Јер погледах на народ свој, јер вика његова дође до мене.
೧೬“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.
17 И кад Самуило угледа Саула, рече му Господ: Ето човека за ког ти рекох; тај ће владати мојим народом.
೧೭ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು.
18 И Саул приступи к Самуилу на вратима, и рече: Кажи ми, где је кућа видеочева?
೧೮ಊರಬಾಗಿಲಿಗೆ ಬಂದ ಸೌಲನು ತನ್ನ ಎದುರಿನಲ್ಲಿ ಸಮುವೇಲನನ್ನು ನೋಡಿ, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿಯೋ?” ಎನ್ನಲು ಸಮುವೇಲನು, “ನಾನೇ ಆ ದರ್ಶಿ.
19 А Самуило одговори Саулу и рече: Ја сам виделац. Хајде преда мном на гору, и данас ћете са мном јести; а сутра ћу те отпустити, и шта ти је год у срцу, казаћу ти.
೧೯ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.
20 А за магарице, којих ти је нестало пре три дана, не брини се; јер су се нашле. И чије ће бити све што је најбоље у Израиљу? Еда ли не твоје и свега дома оца твог?
೨೦ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು.
21 А Саул одговори и рече: Нисам ли од племена Венијаминовог, најмањег племена Израиљевог, и дом мој најмањи између свих домова племена Венијаминовог? Што ми дакле говориш тако?
೨೧ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು.
22 А Самуило узе Саула и његовог момка, и одведе их у собу, и посади их у зачеље међу званицама којих беше до тридесет људи.
೨೨ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,
23 И Самуило рече кувару: Донеси део који ти дадох и за који ти рекох: Остави га код себе.
೨೩“ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು” ಅಂದನು.
24 Тада донесе кувар плеће и шта беше на њему; а Самуило га метну пред Саула, и рече: Ево шта је остало, узми преда се, те једи, јер је сачувано пре за тебе, кад рекох: Позвао сам народ. Тако једе Саул са Самуилом онај дан.
೨೪ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.
25 Потом сиђоше с горе у град, и Самуило се разговара са Саулом на крову.
೨೫ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.
26 А ујутру уранише, и кад свиташе, зовну Самуило Саула на кров, и рече му: Дигни се, да те отпустим. И кад се диже Саул, изиђоше обојица, он и Самуило.
೨೬ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ
27 И кад дођоше на крај града, рече Самуило Саулу: Реци момку нека иде напред (и он прође напред), а ти стани мало да ти јавим реч Божију.
೨೭ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು.

< 1 Књига Самуилова 9 >