< Књига пророка Језекиља 38 >

1 Опет ми дође реч Господња говорећи:
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 Сине човечји, окрени лице своје према Гогу у земљи Магогу, кнезу и глави у Месеху и Тувалу, и пророкуј на њ;
“ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ,
3 И реци: Овако вели Господ Господ: ево ме на тебе, Гоже, кнеже и главо Месеху и Тувалу;
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ.
4 И вратићу те натраг, и метнућу ти жвале у чељусти, и извешћу тебе и сву војску твоју, коње и коњике, све добро одевене, збор велики са штитовима и штитићима, све који мачем машу,
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.
5 С њима Персијанце, Етиопљане и Путеје, све са штитовима и под шлемовима,
ಅವರೊಂದಿಗೆ ಪಾರಸಿಯರು, ಕೂಷ್ಯರು, ಪೂಟ್ಯರು ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
6 Гомера и све чете његове, дом Тогармин са северног краја и све чете његове, многе народе с тобом.
ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗೋಮೆರ್ ಮತ್ತು ಸೈನ್ಯದವರನ್ನೂ, ತೋಗರ್ಮದವರನ್ನು ಮತ್ತು ಅನೇಕ ಜನರನ್ನು ನಿನ್ನೊಂದಿಗೆ ಬರಮಾಡುವೆನು.
7 Приправи све и спреми се ти и све људство твоје, што се сабрало код тебе, и буди им стражар.
“‘ಸಿದ್ಧವಾಗಿರು! ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವರ ದಂಡ ನಾಯಕನಾಗಿರು.
8 После много времена бићеш похођен, и последњих година доћи ћеш у земљу избављену од мача и сабрану из многих народа, у горе Израиљеве, које беху једнако пусте, а они ће изведени из народа сви живети без страха.
ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.
9 И подигнућеш се, и доћи ћеш као бура, бићеш као облак да покријеш земљу ти и све чете твоје и многи народи с тобом.
ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”
10 Овако вели Господ Господ: и тада ће ти доћи у срце ствари, и смишљаћеш зле мисли.
೧೦ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.
11 И рећи ћеш: Идем на земљу где су села, и ударићу на мирни народ који живи без страха, који сви живе у местима без зидова и немају ни преворница ни врата,
೧೧ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.
12 Да наплениш плена и награбиш грабежа, да посегнеш руком својом на пустиње насељене и на народ сабрани из народа, који се бави стоком и имањем, и живи усред земље.
೧೨ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.
13 Сава и Дедан и трговци тарсиски и сви лавићи његови казаће ти: Јеси ли дошао да плениш плен? Јеси ли скупио људство своје да грабиш грабеж? Да однесеш сребро и злато, да узмеш стоку и трг, да наплениш много плена?
೧೩ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.
14 Зато пророкуј, сине човечји, и реци Гогу: Овако вели Господ Господ: У оно време, кад ће мој народ Израиљ живети без страха, нећеш ли знати?
೧೪ಹೀಗಿರಲು, “ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು.
15 И доћи ћеш из свог места, са северног краја, ти и многи народи с тобом, сви јашући на коњима, мноштво велико и војска велика.
೧೫ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪು ಕೂಡಿದ ಅನೇಕ ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವಿ.
16 И подигнућеш се на мој народ Израиља као облак да покријеш земљу, у последње време довешћу те на земљу своју да ме познаду народи кад се посветим у теби пред њима, Гоже!
೧೬ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”
17 Овако вели Господ Господ: Ниси ли ти онај о коме говорих у старо време преко слуга својих, пророка Израиљевих, који пророковаше у оно време годинама да ћу те довести на њих.
೧೭ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು” ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.
18 А кад дође Гог на земљу Израиљеву, говори Господ Господ, онда ће се подигнути јарост моја у гневу мом.
೧೮ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.
19 И у ревности својој, у огњу гнева свог говорићу: доиста, тада ће бити дрхат велики у земљи Израиљевој.
೧೯ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.
20 И рибе морске и птице небеске и звери пољске и све што гамиже по земљи, и сви људи по земљи задрхтаће од мене, и горе ће се развалити и врлети попадати, и сви ће зидови попадати на земљу.
೨೦ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’”
21 И дозваћу на њ мач по свим горама својим, говори Господ Господ: Мач ће се сваког обратити на брата његовог.
೨೧ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.
22 И судићу му помором и крвљу; и пустићу на њ и на чете његове и на многе народе, који буду с њим, силан дажд, камење од града, огањ и сумпор.
೨೨ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.
23 И прославићу се и посветићу се и бићу познат пред многим народима, и познаће да сам ја Господ.
೨೩ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”

< Књига пророка Језекиља 38 >