< 1 Мојсијева 17 >

1 А кад Авраму би деведесет и девет година, јави му се Господ и рече му: Ја сам Бог Свемогући, по мојој вољи живи, и буди поштен.
ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
2 И учинићу завет између себе и тебе, и врло ћу те умножити.
ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು.
3 А Аврам паде ничице. И Господ му још говори и рече:
ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,
4 Од мене ево завет мој с тобом да ћеш бити отац многим народима.
“ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,
5 Зато се више нећеш звати Аврам него ће ти име бити Авраам, јер сам те учинио оцем многих народа;
ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.
6 Даћу ти породицу врло велику, и начинићу од тебе народе многе, и цареви ће изаћи од тебе.
ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.
7 А постављам завет свој између себе и тебе и семена твог након тебе од колена до колена, да је завет вечан, да сам Бог теби и семену твом након тебе;
ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
8 И даћу теби и семену твом након тебе земљу у којој си дошљак, сву земљу хананску у државу вечну, и бићу им Бог.
ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.
9 И рече Бог Авраму: Ти пак држи завет мој, ти и семе твоје након тебе од колена до колена.
ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.
10 А ово је завет мој између мене и вас и семена твог након тебе који ћете држати: да се обрезују између вас све мушкиње.
೧೦ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.
11 А обрезиваћете окрајак тела свог, да буде знак завета између мене и вас.
೧೧ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.
12 Свако мушко дете кад му буде осам дана да се обрезује од колена до колена, родило се у кући или било купљено за новце од којих год странаца, које не буде од семена твог.
೧೨ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ;
13 Да се обрезује које се роди у кући твојој и које се купи за новце твоје; тако ће бити завет мој на телу вашем завет вечан.
೧೩ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.
14 А необрезано мушко, коме се не обреже окрајак тела његовог, да се истреби из народа свог, јер поквари завет мој.
೧೪ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.
15 И још рече Бог Авраму: А Сару жену своју не зови је више Сара него нека јој буде име Саара.
೧೫ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು.
16 И ја ћу је благословити, и даћу ти сина од ње; благословићу је, и биће мати многим народима, и цареви народима изаћи ће од ње.
೧೬ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.
17 Тада паде Аврам ничице и насмеја се говорећи у срцу свом: Еда ће се човеку од сто година родити син? И Сари? Еда ће жена од деведесет година родити?
೧೭ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.
18 И Аврам рече Богу: Нека жив буде Исмаило пред Тобом!
೧೮ಅಬ್ರಹಾಮನು ದೇವರಿಗೆ, “ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು.
19 И рече Бог: Заиста Сара жена твоја родиће ти сина, и надећеш му име Исак; и поставићу завет свој с њим да буде завет вечан семену његовом након њега.
೧೯ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
20 А и за Исмаила услишио сам те; ево благословио сам га, и даћу му породицу велику, и умножићу га веома; и родиће дванаест кнезова, и начинићу од њега велик народ.
೨೦ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.
21 А завет свој учинићу с Исаком кад ти га роди Сара, до године у ово доба.
೨೧ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.
22 И Бог изговоривши отиде од Аврама горе.
೨೨ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು.
23 И Аврам узе Исмаила сина свог и све који се родише у дому његовом и које год беше купио за своје новце, све мушкиње од домаћих својих; и обреза окрајак тела њиховог у исти дан, као што му каза Бог.
೨೩ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.
24 А беше Авраму деведесет и девет година кад обреза окрајак тела свог.
೨೪ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು.
25 А Исмаилу сину његовом беше тринаест година кад му се обреза окрајак тела његовог.
೨೫ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು.
26 У један дан обреза се Аврам и син му Исмаило,
೨೬ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.
27 И сви домашњи његови, рођени у кући и купљени за новце од странаца, бише обрезани с њим.
೨೭ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು.

< 1 Мојсијева 17 >