< Псалми 110 >

1 Рече Господ Господу мом: Седи мени с десне стране, док положим непријатеље Твоје за подножје ногама Твојим.
ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.
2 Скиптар силе даје ти Господ са Сиона: владај сред непријатеља својих.
ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.
3 У дан рата Твог народ је Твој готов у светој красоти. Као роса зори из утробе, таква је у Тебе младост Твоја.
ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.
4 Господ се заклео, и неће се покајати: ти си свештеник довека по реду Мелхиседековом.
“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.
5 Господ је теби с десне стране. Побиће у дан гнева свог цареве;
ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.
6 Судиће народима, напуниће земљу трупова; сатрће главу на земљи широкој.
ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.
7 Из потока ће на путу пити, и зато ће подигнути главу.
ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.

< Псалми 110 >