< Псалми 58 >

1 Говорите ли заиста истину, силни, судите ли право, синови човечији?
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ದಾವೀದನ ಕಾವ್ಯ. ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
2 Та, безакоња састављате у срцу, мећете на мерила злочинства руку својих на земљи.
ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
3 Од самог рођења застранише безаконици, од утробе материне тумарају говорећи лаж.
ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
4 У њима је јед као јед змијињи, као глуве аспиде, која затискује ухо своје,
ಅವರು ಸರ್ಪದಂತೆ ವಿಷಭರಿತರು.
5 Која не чује глас бајачев, врачара вештог у врачању.
ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
6 Боже! Поломи им зубе у устима њиховим; разбиј чељусти лавовима, Господе!
ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
7 Нек се пролију као вода, и нестане их. Кад пусте стреле, нека буду као сломљене.
ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
8 Као пуж, који се рашчиња, нека ишчиле; као дете, које жена побаци, нека не виде сунца.
ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
9 Пре него котлови ваши осете топлоту од потпаљеног трња, и сирово и нагорело нека разнесе вихор.
ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
10 Обрадоваће се праведник кад види освету, опраће ноге своје у крви безбожниковој.
೧೦ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.
11 И рећи ће људи: Заиста има плода праведнику! Заиста је Бог судија на земљи!
೧೧ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

< Псалми 58 >