< Дії 15 >

1 І, поприходивши деякі з Юдеї, навчали братів: що коли не обріжетесь по звичаю Мойсейовому, не можете спасти ся.
ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
2 Як же почав ся спір і немале змаганнє Павла та Варнави з ними, то постановили, щоб Павел та Варнава і деякі инші з них пійшли до апостолів та старших у Єрусалим ради сього питання.
ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
3 Вони ж, послані від церкви, проходили Финикию та Самарию, оповідуючи про наверненнє поган; і зробили великі радощі всїм братам.
ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
4 Прийшовши ж у Єрусалим, прийняті були від церкви і апостолів і старших, і сповістили про все, що Бог з ними зробив.
ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
5 Устали ж деякі з єресї Фарисейської, що увірували, кажучи, що треба обрізати їх та наказати, щоб хоронили закон Мойсеїв.
ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.
6 І зібрались апостоли та старші вглянути в сю річ.
ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;
7 Як же постало велике змаганнє, вставши Петр, рече до них: Мужі брати, ви знаєте, що з давніх днїв Бог між нами вибрав мене, щоб через мої уста погане чули слово благовістя, та й увірували.
“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.
8 І Бог, що знав серця, сьвідкував їм, давши їм Духа сьвятого, як нам,
ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
9 і не розріжнив нічого між нами й ними, вірою очистивши серця їх.
ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
10 Тепер же чого спокутуєте Бога, щоб наложив ярмо на шию ученикам, котрого нї батьки наші, ні ми не здолїли носити.
೧೦ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
11 Нї віруємо, що благодаттю Господа Ісуса Христа спасемось, яко ж і вони.
೧೧ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.
12 Умовкла ж уся громада, й слухала, як Варнава та Павел оповідували про ознаки та чудеса, що зробив Бог через них між поганами.
೧೨ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
13 Як же вмовкли вони, озвав ся Яков, говорячи: Мужі брати, вислухайте мене.
೧೩ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;
14 Симон оповів, як Бог перше зглянув ся, щоб з поган прийняти людей в імя своє.
೧೪“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15 З сим сходять ся слова пророчі, яко ж писано:
೧೫ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;
16 Після сього знов верну ся, і збудую намет Давидів, що впав, і руїни його збудую знов і поставлю його,
೧೬“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.
17 щоб остальні з людей шукали Господа, і всї народи, на котрих призвано імя моє, глаголе Господь, що робить оце все.
೧೭ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು
18 Звісні од віку Богові всі діла Його. (aiōn g165)
೧೮ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ. (aiōn g165)
19 То ж суджу, що не треба тим докучати, которі від поган обернулись до Бога;
೧೯“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
20 а написати їм, нехай удержують ся від ідолських гидот, та блуду, та давленого, та крови.
೨೦ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
21 Мойсей бо від стародавніх родів має проповідуючих його по городах, і читаний по школах що-суботи.
೨೧ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.
22 Зводили тодї апостоли і старші і вся церква вибраних мужів з між себе післати в Антиохию з Павлом та Варнавою: Юду, названого Варсавою, та Силу, мужів-проводирів мізк братами,
೨೨ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
23 написавши через руки їх так: Апостоли та старші і брати - братам з поган, що в Антиохиї, і Сириї і Киликиї, радуйте ся.
೨೩ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
24 Яко ж чули ми, що деякі з між нас вийшовши, потрівожили вас словами і захитали душі ваші, говорячи, щоб обрізувались та хоронили закон, чого ми їм не наказували;
೨೪“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
25 то зводилось нам, зібравшим ся однодушне вибраних мужів післати до вас з любими нашими Варнавою та Павлом,
೨೫ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,
26 людьми, що віддавали душі свої за імя Господа нашого Ісуса Христа.
೨೬ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.
27 Післали ми оце Юду та Силу, котрі й самі розкажуть про те словом.
೨೭ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
28 Зводилось бо сьвятому Духу та й нам, ніякої тяготи більш не накладувати вам, опріч сього конечного:
೨೮ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
29 щоб удержувались від жертів ідолам, та крови, та давленого, та блуду. Від чого оберегаючи себе, добре робити мете. Бувайте здорові.
೨೯ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
30 Послані ж прийшли в Антиохию і, зібравши громаду, подали посланнє.
೩೦ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
31 Прочитавши ж (ті), зраділи від сього потїшення.
೩೧ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
32 Юда ж та Сила, будучи самі пророками, многими словами втїшали братів і утверджували.
೩೨ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
33 Пробувши ж (там якийсь) час, відпущені були з упокоєм од братів до апостолів.
೩೩ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
34 Зводив же Сила зостатись там.
೩೪ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.
35 Павел же та Варнава пробували в Антиохиї, навчаючи та благовіствуючи слово Господнє з многими иншими.
೩೫ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
36 По кількох же днях рече Павел до Варнави: Вернувшись одвідаємо братів наших по всіх городах, де проповідували ми слово Господнє, як вони мають ся.
೩೬ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
37 Варнава ж раяв узяти з собою Йоана, званого Марком.
೩೭ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು
38 Павло ж не удостоїв брати з собою того, хто одлучивсь од них з Памфилиї, і не пійшов з ними на діло.
೩೮ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.
39 Постала ж ріжниця, так, що вони розлучились між собою; і Варнава, взявши Марка, поплив у Кипр,
೩೯ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
40 Павел же, вибравши Силу, пійшов, переданий благодатї Божій від братів,
೪೦ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ
41 і проходив Сирию і Киликию, утверджаючи церкви.
೪೧ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.

< Дії 15 >