Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 86 https://www.AionianBible.org/Bibles/Kannada---Kannada-Bible/Psalms/86 1 ೧) ದಾವೀದನ ಕೀರ್ತನೆ. ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ. 2 ೨) ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು. 3 ೩) ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ. 4 ೪) ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. 5 ೫) ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ. 6 ೬) ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು. 7 ೭) ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು. 8 ೮) ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ. 9 ೯) ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು. 10 ೧೦) ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು. 11 ೧೧) ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು. 12 ೧೨) ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು. 13 ೧೩) ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ. (Sheol h7585) 14 ೧೪) ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ. 15 ೧೫) ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು. 16 ೧೬) ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು. 17 ೧೭) ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ. Additional comments?
Refresh Captcha
The world's first Holy Bible un-translation!