< 2 Utasalonika 2 >

1 Nene ti din fe minu achara, linuana nbelen ndak Ncikilari bite Yesu Kristi nin zuru bite kitime,
ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,
2 na imomon cingilin wa zunlun nibinei mine sa ti nana nayi, nyan funu, ligbulan sa iyert nnuzu kitibi-iyinin lirin Cikilari nmi dak.
ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
3 Yenje umon wa rusuzu minu. Na li ba dak ba, se udieu daa, inin durso unan dinon, gono na iba molu.
ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.
4 Amere ulenge na gnanti litime kitine ni le imon na idin yi chu Kutelle sa idin tumzun inin kitin, a sosin nya kutii kulau Kutelle adin yenju litime nofo Kutelle.
ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
5 Na ina lizin kubi nan wa di nan gninu nwa belin minu imon ilele?
ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?
6 Nene iyiru ile imon na iwantin gne, iba dursu gne kubi kuchine.
ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.
7 Ungneshinu nnan dinon di kataa, uwaru gnari nwantin gne nene se ikala libau we.
ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.
8 Iba nin dursu unan dinon, ulenge na Cikilari isa ba molu nin fieu nnuu me anin ti gne alawa imon ba asa adaa.
ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.
9 Udak nnan dinon ba yitu bara kataan shetan nin na kara me vat, udursu nin puzunu tinuu kinuu,
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
10 nin vat kinuu ndinon na lenge na idin kuzu, bara na ina nari useru nsuu kiden bara inan seh utuchu.
೧೦ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
11 Bara nene Kutelle ba tuu nani nin ilataa ka nanzan bara iyinin nin kinuu,
೧೧ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.
12 bara isu nani usharaa vat alenge na iyinna nin kiden inanin yira mmang ndinon.
೧೨ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.
13 Arik ba godu Kutelle bara anuu ko ki shii, linuana na Cikilari dinin suu mine, bara na Kutelle na fere minu nonon infunu anan tucha nya kataa kalau nfunu nin yinnu kiden.
೧೩ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
14 Na ana yichila minu nya kadu ra bite kamang ise uzazinu Cikilari bite Yesu Kristi.
೧೪ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
15 Bara nani, linuana, yisinan nin na kara, imin atanda ale na ina dursu minu, sa ligbulang sa niyert.
೧೫ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.
16 Nene nlirari Cikilari Isa Kristi litime, nin Kutelle uchif bite na ana ti usuu bite ana aari nchan channnin nchine nyinnu nin bun nyan shew, (aiōnios g166)
೧೬ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, (aiōnios g166)
17 nchancham nintunu ni binei mine nya vat kataa ka chine nin ligbulan.
೧೭ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.

< 2 Utasalonika 2 >