< Ukolosiya 2 >

1 Bara meng dinin su anugheiyinin ngbardang nnono mongo na dimun bara anughe nan nalenghe na idi Nlaudikiya nin ngbardan na isa yene umuro nighe nanya kidowo ba.
ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,
2 Nworu nibinai mine basennagang, nanya nworu ida vat nimon nacara na idin dasu kiti ncau kibinai nin nyinnu nimong linyeshin unere Kristi.
ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.
3 Vat najiya linyeshin nyiru nin nyinnu udi kiti mye.
ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.
4 Nna belin munu nani bara umong wa rusuzu munu nin nliru kinu.
ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.
5 Nin nani na ndi nanghinu nanya kidowo ba ndi nanghjinu nnya Nfip milau ndin nin liburi liboo nyene imon icine a likara mine nanya nyinu sa uyenu nanya Kristi.
ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.
6 Cinan nanyan Kristi Yesu Uciffe libau lirum inan sereghe.
ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.
7 Yisinan nin likara nanya mye, tutunon litino nanya mye, Yisinan nanya nyinu sa uyenu ulena iwa durso minu imonnu nin ngodiya.
ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
8 Yenen na umong nwa minu bara uyiru mye un karusuzo ba, ule na udi unit usyrne ulenge na udin cinu nin kulapi ninyulele unin na un Kristi ba.
ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
9 Bara vat ukullu nke Kutelle sosin nanya kidowo mye.
ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,
10 Nanya mye ulengana adi iti nvat ncin nin likara fere nso ukulu ne vat.
೧೦ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.
11 Nanya myere kutelle wa kala nani kucuri na imusin kalu kucuri nacra nanit ba, bara ukalukidowo nin finawa kulapi, nanya nkalu kucuri Kristi.
೧೧ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.
12 Iwa kasu minu nanya su ubabtisma. Nin yinu sa uyenu inani wa fita nin ghe nanya likara Kutelle, ulena ana fiyaghe kiti nanam nkul.
೧೨ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.
13 Nin kubi na iwa ku nanya nalapi mine nin nanya nsalin kalu kucuri kidowo, amini wwati minu ise ulai ligowenanghe nin nshawu nin nalapi mine vat.
೧೩ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
14 Amini wa wese inyerte na iwa cio nrewe bara arike, nin nbunu ndoka, aamini wa kala vat kite na iwa banaghe kutca.
೧೪ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.
15 Amini wa kala anan tigo nan na nakara a puuno nani fong, a dofino ninghinu nanya nse nlii nbun bara na iwa banaghe kutca.
೧೫ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.
16 Bara nani na umong nwa wucu kidegen kiti mine nbelle kileo nin nsonu sa ubuki npui upese, nin kitene nari na sabbar.
೧೬ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.
17 Ilele vat inshin nimon ile na iba dakari, bara icineb Kristi ari.
೧೭ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.
18 Na umong nwa bolu minu uduk mine bara usu mye unteltunu liti kinunanya ntumolunu na nan kadura Kutelle imusin nnit une. Asa amuzo nin nimon ile na ayene, aso unan nfo figiri hem nani nanya nkpilizun kidowo.
೧೮ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.
19 Na ame myin un Kristi kuba na amere di nnuzu kidowo amini myin ligowe kitene limunun kidowo kani di nkunju nafo na Kutelle nati kinin ki kunno.
೧೯ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.
20 Adi una kuu nin Kristi unuzu na dadu kulapi ani yanghari taa inalitife udu uye:
೨೦ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,
21 Na uwa myin ba, sa ulelee basa ududowa?
೨೧“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ.
22 Ulele udokari nin dursuzu nanit, kitene nimon vat na iba nanu sa katwa.
೨೨
23 Ulenge usu tidokoke ti di jijin adini liti me nin nonku liti aninu kidowo, Bara na idinin na ukan nimon ba nbelele kidowo.
೨೩ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.

< Ukolosiya 2 >