< Luka 23 >

1 Vat lipitin mine fita, ida nin Yesu nbun Bilatus.
ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,
2 I tunna nvuruzughe nliru, I woro, “Ti se unit ulele adin nanzu nmyin bite, a wantina anit uni in Kaisar ku ugandu, a din belu ame litine Kristiari, Ugo.”
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
3 Bilatus tiringhe, a woro, “Fere Ugo na Yahudawa?” Yesu kawa ghe a woro, “Fere nbelle nani.”
ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.
4 Bilatus woro na didya na prieste nin lipitin nanit. “Na nse unit ulele nin taanu ba.”
ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.
5 Amma ileo ubun nin sho nati, i woro, “Adin rusuzu anit, adin dursuzu anit nan nyan Yahudiya vat, ucizunun Galili uda duru kikane.”
ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.
6 Na Bilatus nlanza nani, a tirino sa unite kunan Galiliari.
ಇದನ್ನು ಪಿಲಾತನು ಕೇಳಿ, ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ,
7 Na ayinno adi nmyin tigon Hirudus ari, a turung Yesu ku udu kitin Hirudus, ama litine wang wadin Urshalima nayiri ane.
ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.
8 Na Hirudus in yene Yesu ku, ayi poo ghe, bara na dandauna nin su nworu a yeneghe. Ana lanza ubeleng me amini din piziru ayeneghe asu imon izikiki.
ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.
9 Hirudus tirino Yesu ku uliru gbardang, amma na Yesu nkawa ghe imon ba.
ಹೆರೋದನು ಅನೇಕ ಮಾತುಗಳಿಂದ ಯೇಸುವನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.
10 Adidya na priest nin na nan ninyerte fita, nin tinana nayi nvuruzughe nliru.
೧೦ಮುಖ್ಯಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಕುರಿತು ಬಹು ತೀವ್ರವಾಗಿ ಆರೋಪಿಸುತ್ತಿದ್ದರು.
11 Hirudus nin nasoja me zognzo ghe, I kuru isu ghe liyong, inin shonghe imon icine, inin kurtuno Yesu ku udu kitin Bilatus.
೧೧ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
12 Hirudus nin Bilatus waso adondon nati lilone (amma iwa tu iyita anan nivira nati).
೧೨ಅದೇ ದಿನ ಹೆರೋದನು ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು. ಅದಕ್ಕಿಂತ ಮೊದಲು ಅವರಿಬ್ಬರೂ ವೈರಿಗಳಾಗಿದ್ದರು.
13 Bilatus tunna ayicila udya na priest, nin nagoo a ligozi nanite kiti kirum,
೧೩ತರುವಾಯ ಪಿಲಾತನು ಮುಖ್ಯಯಾಜಕರನ್ನೂ, ಅಧಿಕಾರಿಗಳನ್ನೂ, ಪ್ರಜೆಗಳನ್ನೂ ಒಟ್ಟಾಗಿ ಕರೆಯಿಸಿ,
14 a woro nani, “Ida nayi unit ulele nafo unit ulenge na adin cinu nin nait nanzang, yeneng, meng, nbun minere ntiroghe uliru, na nse ghe nin kulapi kitene nile imon na idi uvuruzughe mun ba.
೧೪ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.
15 Baba, sa ame Hirudus wang, a kurtunghe udak kiti bite, yenen, na asu imong imon ilenge na iduru nworu aku ba.
೧೫ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.
16 Bara nani mma tighe aneo, nsunghe.”
೧೬ಆದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ” ಎಂದು ಹೇಳಿದನು.
17 Amma uwa so Bilatus ju gbas a nutun a Yahudawe ku kucin kurum kilari licin kubin idi.
೧೭(ಪ್ರತಿ ಪಸ್ಕ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.)
18 Vat mine jartiza kang, I woro, “Caan nin nit ulele, I nutun nari Barabas ku!”
೧೮ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.
19 Barabas unitari wadi ulenge na iwa ceo ghe licin kitene kulapi nsali dortu nliru tigo kipine nin katwa likiri.
೧೯ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.
20 Bilatus kuru asu nani uliru tutung, nin su nworu a sun Yesu ku.
೨೦ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು.
21 Ijaritiza I woro, “Na ikotinghe kuca, na ikotinghe kuca.”
೨೧ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗುತ್ತಿದ್ದರು.
22 A woro nani tutung untat, “Iyanghari, kuyapin kulapiari unit ulele nati? Na meng see ghe nin kulapi kongo na batin ushara nkul liti me ba. Bara nani, asa nkpizoghe mma sunghe.”
೨೨ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.
23 Amma ileo ubun njartiza kang, npiru nworu ikotinghe kucha. Tiwui mine ta Bilatus yinna.
೨೩ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.
24 Bilatus yinna nani nin kuculu mine.
೨೪ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ,
25 A nutuno ulenge na inung tirino nworu inutun ule na ina ceo kilari licin kitene in fizu nay nanit a umolsu nanit. Amma ana nani Yesu ku nafo usu nibinai mine.
೨೫ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.
26 Na inya ninghe, ikifo umong Simon unit Nkirawani, awa nuzun nan nya ntene, itina ghe kuca ndi kotunue, a dortu Yesu ku.
೨೬ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
27 Ligozi nanit gbardang, nin nawani ale na iwa di tiyomme wa din dortu ghe.
೨೭ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು.
28 A gbitirno kiti mine, Yesu woro, “Nishonon Urshalima, na iwa gilu meng ku ba, ama gilan atimine nin nono mine.
೨೮ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.
29 Amma yenen, ayire din cinu na ima woru, 'Anan koliari awani are, nin naburi ale na ina maru ba, nin na yazin ale na amazina ba.'
೨೯ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.
30 Ima cizunu ubelu na kup, 'Dio nati bite,' a apara, 'Kiro nari.'
೩೦ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.
31 Iwa su ile imone a kuce dutu kushiti, Iyaghari ma se ku wa malu kotu?”
೩೧ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.
32 Iwa yiru among anit naba anan likara linanzang idi molu ligowe ninghe.
೩೨ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.
33 Na iwa dak kiti kanga na idin yicu akankan nati, kitenere iwa kotunghe kucaa ligowe nin nanan likara linanzang, unit urum ncara uline a unan be ncara ngule me.
೩೩ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.
34 Yesu woro, “Ucif, wesse nani alapi mine, bara na iyiru imon ile na idin sue ba.” I tunna idinja timo, I koso imon me.
೩೪ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
35 Anite yissina in yenju ghe a imung ago mina yita nsughe liyong, idin su, “Ana tucu among. Na atuca litine, andi amere Kristi Kutelle, unan feruwe.”
೩೫ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.
36 Inung anan likum wang sughe liyong, ida kupo me, ina ghe nmyen migbalala,
೩೬ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ,
37 idin belu, “Andi fere uga na Yahudawe, tucu litife.”
೩೭“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು.
38 I wa su imong inyerte ibana kitene litine, “ULELERE UGO NA YAHUDAWA.”
೩೮ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.
39 Unit urum nan nya na nan likara linanzanghe na iwa kotunghe kuce, belinghe lifai, a woro, “Na fere Kristeba? Tucu litife umunu arik ku.”
೩೯ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.
40 Ame unan be kawa, a kwada ghe a woro, “Na udin lanzu fiu Kutelle ba, bara na ushara fe di urume nin ghe?
೪೦ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?
41 Kiti bite udi dert, arik din seru nduk katwa bitari. Na unit ulele na su imonmong inanzang ba.”
೪೧ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,
42 A kpinaku, a woro, “Yesu, lizino nin mi asa upira kipin tigo fe.”
೪೨“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.
43 Yesu woroghe, “Kidegenere nbelin fi, uma yitu nin mi kipin tigo nighe.”
೪೩ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.
44 Kube da susut nin nikoro kutocin, nsirti tursu kutyine vat uduru ikoro kutir
೪೪ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
45 na nkanang nwii nmala. Kusakala kutyi nlira jarta kyitik kitene utolu kadas.
೪೫
46 Yesu jarta nin liwui kang ayila, a woro “Ucif, nan nya nacara fere nnakpa ulai ning.” Na a belle nani, aku.
೪೬ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
47 Na udya na nan likum akalt likure in yene imon ile isu, azazina Kutelle, a woro, “Kidegenere, ulele unan katwa kacineari nadi.”
೪೭ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
48 Na vat ligozie na iwa dak ida ti iyizi nba nimon ile na isu yene imon ile na ise, ikpilla idin fo igiri.
೪೮ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು.
49 Vat na nan yiru me, nin na wani ale na ina dofin ghe unuzun Galili, yissina pit, idin yenju ni leli imone.
೪೯ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
50 Umong unit wa diku unan lissan Yusufu, nan nya na nan kpiluzu, unit ugegeme nin katwa kacine
೫೦ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.
51 (na awa yinin nin kpiluzue nin lidu longo na isu ba), unit in Arimathiya, nkan kipin na Yahudawa, ulenge na awa di nca kipin tigoo Kutelle.
೫೧
52 Unit une do kitin Bilatus, tirino kidowon Yesu.
೫೨ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು,
53 A toltuno kinin, a jinkpilo nin malti ulau, adi nonko nan nya kissek na ina sarsu nan nya kutala, kikanga na isa nonko umong ku ba.
೫೩ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.
54 Uwui nshiriari wadi, Assabath wa dak susut npiru.
೫೪ಆ ದಿನವು ಸಿದ್ಧತೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು.
55 Awane na iwa dak nanghe unuzun Galili, dofino kidung, iyene kissekke iyene imusun nonkue kidowe non.
೫೫ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟ ರೀತಿಯನ್ನೂ ನೋಡಿ,
56 I kpilla, ida shirya nnuf kunya min tintu. Lirin Nasabbath ishino nafo ubellin duke.
೫೬ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.

< Luka 23 >