< اَلْخُرُوجُ 36 >

«فَيَعْمَلُ بَصَلْئِيلُ وَأُهُولِيآبُ وَكُلُّ إِنْسَانٍ حَكِيمِ ٱلْقَلْبِ، قَدْ جَعَلَ فِيهِ ٱلرَّبُّ حِكْمَةً وَفَهْمًا لِيَعْرِفَ أَنْ يَصْنَعَ صَنْعَةً مَّا مِنْ عَمَلِ ٱلْمَقْدِسِ، بِحَسَبِ كُلِّ مَا أَمَرَ ٱلرَّبُّ». ١ 1
ತರುವಾಯ ಬೆಚಲಯೇಲ್ ಮತ್ತು ಒಹೋಲಿಯಾಬನೂ ಯೆಹೋವ ದೇವರು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡುವರು. ಅವರು ಪರಿಶುದ್ಧಸ್ಥಳದ ಸೇವೆಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಯೆಹೋವ ದೇವರಿಂದ ಜ್ಞಾನ ವಿವೇಕಗಳನ್ನು ಹೊಂದಿದ ಇತರರೊಂದಿಗೆ ಕೆಲಸಮಾಡುವರು,” ಎಂದು ಹೇಳಿದನು.
فَدَعَا مُوسَى بَصَلْئِيلَ وَأُهُولِيآبَ وَكُلَّ رَجُلٍ حَكِيمِ ٱلْقَلْبِ، قَدْ جَعَلَ ٱلرَّبُّ حِكْمَةً فِي قَلْبِهِ، كُلَّ مَنْ أَنْهَضَهُ قَلْبُهُ أَنْ يَتَقَدَّمَ إِلَى ٱلْعَمَلِ لِيَصْنَعَهُ. ٢ 2
ಬೆಚಲಯೇಲನನ್ನು, ಒಹೋಲಿಯಾಬನನ್ನು ಮತ್ತು ಯೆಹೋವ ದೇವರು ಜ್ಞಾನಕೊಟ್ಟಿದ್ದ ಪ್ರತಿಯೊಬ್ಬ ಶಿಲ್ಪಿಯನ್ನೂ ಆ ಕೆಲಸ ಮಾಡುವುದಕ್ಕೆ ಸಿದ್ಧ ಮನಸ್ಸಿದ್ದ ಪ್ರತಿಯೊಬ್ಬನನ್ನೂ ಮೋಶೆಯು ಕರೆದನು.
فَأَخَذُوا مِنْ قُدَّامِ مُوسَى كُلَّ ٱلتَّقْدِمَةِ ٱلَّتِي جَاءَ بِهَا بَنُو إِسْرَائِيلَ لِصَنْعَةِ عَمَلِ ٱلْمَقْدِسِ لِكَيْ يَصْنَعُوهُ. وَهُمْ جَاءُوا إِلَيْهِ أَيْضًا بِشَيْءٍ تَبَرُّعًا كُلَّ صَبَاحٍ. ٣ 3
ಅವರು ಪರಿಶುದ್ಧ ಆಲಯದ ನಿರ್ಮಾಣಕ್ಕೋಸ್ಕರ ಇಸ್ರಾಯೇಲರು ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ತೆಗೆದುಕೊಂಡರು. ಇದಲ್ಲದೆ ಅವರು ಪ್ರತಿದಿನ ಬೆಳಿಗ್ಗೆ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.
فَجَاءَ كُلُّ ٱلْحُكَمَاءِ ٱلصَّانِعِينَ كُلَّ عَمَلِ ٱلْمَقْدِسِ، كُلُّ وَاحِدٍ مِنْ عَمَلِهِ ٱلَّذِي هُمْ يَصْنَعُونَهُ. ٤ 4
ಆಗ ಪರಿಶುದ್ಧಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಮ್ಮ ತಮ್ಮ ಕೆಲಸವನ್ನು ಬಿಟ್ಟು ಬಂದು,
وَكَلَّمُوا مُوسَى قَائِلِينَ: «يَجِيءُ ٱلشَّعْبُ بِكَثِيرٍ فَوْقَ حَاجَةِ ٱلْعَمَلِ لِلصَّنْعَةِ ٱلَّتِي أَمَرَ ٱلرَّبُّ بِصُنْعِهَا». ٥ 5
ಮೋಶೆಯ ಸಂಗಡ ಮಾತನಾಡಿ, “ಯೆಹೋವ ದೇವರು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ಕಾಣಿಕೆಗಳನ್ನು ಈ ಜನರು ತರುತ್ತಿದ್ದಾರೆ,” ಎಂದು ಹೇಳಿದರು.
فَأَمَرَ مُوسَى أَنْ يُنْفِذُوا صَوْتًا فِي ٱلْمَحَلَّةِ قَائِلِينَ: «لَا يَصْنَعْ رَجُلٌ أَوِ ٱمْرَأَةٌ عَمَلًا أَيْضًا لِتَقْدِمَةِ ٱلْمَقْدِسِ». فَٱمْتَنَعَ ٱلشَّعْبُ عَنِ ٱلْجَلَبِ. ٦ 6
ಆಗ ಮೋಶೆಯು, “ಇನ್ನು ಮೇಲೆ ಪರಿಶುದ್ಧಸ್ಥಳದ ಕಾಣಿಕೆಗೋಸ್ಕರ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸಬೇಕು,” ಎಂದು ಆಜ್ಞಾಪಿಸಿದನು. ಹೀಗೆ ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು.
وَٱلْمَوَادُّ كَانَتْ كِفَايَتَهُمْ لِكُلِّ ٱلْعَمَلِ لِيَصْنَعُوهُ وَأَكْثَرَ. ٧ 7
ಏಕೆಂದರೆ ಎಲ್ಲಾ ಕೆಲಸವನ್ನು ಮಾಡುವುದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಗ್ರಿಗಳು ದೊರೆತವು.
فَصَنَعُوا كُلُّ حَكِيمِ قَلْبٍ مِنْ صَانِعِي ٱلْعَمَلِ ٱلْمَسْكَنَ عَشَرَ شُقَقٍ مِنْ بُوصٍ مَبْرُومٍ وَأَسْمَانْجُونِيٍّ وَأُرْجُوانٍ وَقِرْمِزٍ بِكَرُوبِيمَ، صَنْعَةَ حَائِكٍ حَاذِقٍ صَنَعَهَا. ٨ 8
ಕೆಲಸದವರಲ್ಲಿದ್ದ ಶಿಲ್ಪಿಗಳೆಲ್ಲರೂ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿದರು.
طُولُ ٱلشُّقَّةِ ٱلْوَاحِدَةِ ثَمَانٍ وَعِشْرُونَ ذِرَاعًا، وَعَرْضُ ٱلشُّقَّةِ ٱلْوَاحِدَةِ أَرْبَعُ أَذْرُعٍ. قِيَاسًا وَاحِدًا لِجَمِيعِ ٱلشُّقَقِ. ٩ 9
ಎಲ್ಲಾ ಪರದೆಗಳೂ ಒಂದೇ ಅಳತೆಯವುಗಳಾಗಿದ್ದವು. ಪ್ರತಿಯೊಂದು ಪರದೆಯು ಸುಮಾರು ಹದಿಮೂರು ಮೀಟರ್ ಉದ್ದ ಮತ್ತು ಎರಡು ಮೀಟರ್ ಅಗಲವಿದ್ದವು.
وَوَصَلَ خَمْسًا مِنَ ٱلشُّقَقِ بَعْضَهَا بِبَعْضٍ. وَوَصَلَ خَمْسًا مِنَ ٱلشُّقَقِ بَعْضَهَا بِبَعْضٍ. ١٠ 10
ಅವರು ಐದು ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು ಮತ್ತು ಇನ್ನುಳಿದ ಐದು ಪರದೆಗಳನ್ನೂ ಒಂದಕ್ಕೊಂದು ಜೋಡಿಸಿದರು.
وَصَنَعَ عُرًى مِنْ أَسْمَانْجُونِيٍّ عَلَى حَاشِيَةِ ٱلشُّقَّةِ ٱلْوَاحِدَةِ فِي ٱلطَّرَفِ مِنَ ٱلْمُوَصَّلِ ٱلْوَاحِدِ. كَذَلِكَ صَنَعَ فِي حَاشِيَةِ ٱلشُّقَّةِ ٱلطَّرَفِيَّةِ مِنَ ٱلْمُوَصَّلِ ٱلثَّانِي. ١١ 11
ಕೊನೆಯ ಪರದೆಯ ಅಂಚಿನ ಒಂದು ಜೋಡಣೆಯ ಸ್ಥಳದಲ್ಲಿ ನೀಲಿ ದಾರಿನ ಕುಣಿಕೆಗಳನ್ನು ಮಾಡಿದ್ದಲ್ಲದೆ, ಎರಡನೆಯ ಜೋಡಣೆಯ ಕಟ್ಟಕಡೆಯ ಪರದೆಯ ಅಂಚಿನಲ್ಲಿಯೂ ಅದೇ ಪ್ರಕಾರ ಮಾಡಿದರು.
خَمْسِينَ عُرْوَةً صَنَعَ فِي ٱلشُّقَّةِ ٱلْوَاحِدَةِ، وَخَمْسِينَ عُرْوَةً صَنَعَ فِي طَرَفِ ٱلشُّقَّةِ ٱلَّذِي فِي ٱلْمُوَصَّلِ ٱلثَّانِي. مُقَابِلَةً كَانَتِ ٱلْعُرَى بَعْضُهَا لِبَعْضٍ. ١٢ 12
ಒಂದು ಪರದೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ, ಇನ್ನೊಂದು ಪರದೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದರು. ಆ ಕುಣಿಕೆಗಳು ಒಂದು ಪರದೆಯನ್ನು ಮತ್ತೊಂದು ಪರದೆಯು ಹಿಡಿದುಕೊಳ್ಳುವಂತೆ ಮಾಡಿದರು.
وَصَنَعَ خَمْسِينَ شِظَاظًا مِنْ ذَهَبٍ، وَوَصَلَ ٱلشُّقَّتَيْنِ بَعْضَهُمَا بِبَعْضٍ بِٱلْأَشِظَّةِ، فَصَارَ ٱلْمَسْكَنُ وَاحِدًا. ١٣ 13
ಅವರು ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಎರಡು ಜೋಡಣೆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು. ಹೀಗೆ ಅದು ಒಂದೇ ಗುಡಾರವಾಯಿತು.
وَصَنَعَ شُقَقًا مِنْ شَعْرِ مِعْزًى خَيْمَةً فَوْقَ ٱلْمَسْكَنِ. إِحْدَى عَشْرَةَ شُقَّةً صَنَعَهَا. ١٤ 14
ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಅವರು ಮೇಕೆಯ ಕೂದಲಿನಿಂದ ಹನ್ನೊಂದು ಪರದೆಗಳನ್ನು ಮಾಡಿದರು.
طُولُ ٱلشُّقَّةِ ٱلْوَاحِدَةِ ثَلَاثُونَ ذِرَاعًا، وَعَرْضُ ٱلشُّقَّةِ ٱلْوَاحِدَةِ أَرْبَعُ أَذْرُعٍ. قِيَاسًا وَاحِدًا لِلْإِحْدَى عَشْرَةَ شُقَّةً. ١٥ 15
ಒಂದೊಂದು ಪರದೆಯು ಸುಮಾರು ಹದಿಮೂರುವರೆ ಮೀಟರ್ ಉದ್ದ ಮತ್ತು ಒಂದುವರೆ ಮೀಟರ್ ಅಗಲ ಇರಬೇಕು. ಹನ್ನೊಂದು ಪರದೆಗಳೂ ಒಂದೇ ಅಳತೆಯಾಗಿದ್ದವು.
وَوَصَلَ خَمْسًا مِنَ ٱلشُّقَقِ وَحْدَهَا، وَسِتًّا مِنَ ٱلشُّقَقِ وَحْدَهَا. ١٦ 16
ಅವರು ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿದರು.
وَصَنَعَ خَمْسِينَ عُرْوَةً عَلَى حَاشِيَةِ ٱلشُّقَّةِ ٱلطَّرَفِيَّةِ مِنَ ٱلْمُوَصَّلِ ٱلْوَاحِدِ. وَصَنَعَ خَمْسِينَ عُرْوَةً عَلَى حَاشِيَةِ ٱلشُّقَّةِ ٱلْمُوَصَّلَةِ ٱلثَّانِيَةِ. ١٧ 17
ಅವರು ಕೊನೆಯ ಒಂದು ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು, ಜೋಡಣೆಯಲ್ಲಿರುವ ಕೊನೆಯ ಎರಡನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದರು.
وَصَنَعَ خَمْسِينَ شِظَاظًا مِنْ نُحَاسٍ لِيَصِلَ ٱلْخَيْمَةَ لِتَصِيرَ وَاحِدَةً. ١٨ 18
ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡಣೆಗೆ ಅವರು ಕಂಚಿನ ಐವತ್ತು ಕೊಂಡಿಗಳನ್ನು ಮಾಡಿದರು.
وَصَنَعَ غِطَاءً لِلْخَيْمَةِ مِنْ جُلُودِ كِبَاشٍ مُحَمَّرَةً، وَغِطَاءً مِنْ جُلُودِ تُخَسٍ مِنْ فَوْقُ. ١٩ 19
ಅದಲ್ಲದೆ ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಿದರು. ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದರು.
وَصَنَعَ ٱلْأَلْوَاحَ لِلْمَسْكَنِ مِنْ خَشَبِ ٱلسَّنْطِ قَائِمَةً. ٢٠ 20
ಗುಡಾರವು ನಿಂತುಕೊಂಡಿರುವುದಕ್ಕೆ ಅವರು ಜಾಲಿ ಮರದಿಂದ ಚೌಕಟ್ಟುಗಳನ್ನು ಮಾಡಿದರು.
طُولُ ٱللَّوْحِ عَشْرُ أَذْرُعٍ، وَعَرْضُ ٱللَّوْحِ ٱلْوَاحِدِ ذِرَاعٌ وَنِصْفٌ. ٢١ 21
ಒಂದೊಂದು ಚೌಕಟ್ಟಿನ ಉದ್ದವು ಸುಮಾರು ನಾಲ್ಕುವರೆ ಮೀಟರ್ ಮತ್ತು ಅಗಲ ಅರವತ್ತೆಂಟು ಸೆಂಟಿಮೀಟರ್ ಇತ್ತು.
وَلِلَّوْحِ ٱلْوَاحِدِ رِجْلَانِ، مَقْرُونَةٌ إِحْدَاهُمَا بِٱلْأُخْرَى. هَكَذَا صَنَعَ لِجَمِيعِ أَلْوَاحِ ٱلْمَسْكَنِ. ٢٢ 22
ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದರು. ಅದೇ ಪ್ರಕಾರ ಅವರು ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಿದರು.
وَصَنَعَ ٱلْأَلْوَاحَ لِلْمَسْكَنِ عِشْرِينَ لَوْحًا إِلَى جِهَةِ ٱلْجَنُوبِ نَحْوَ ٱلتَّيْمَنِ. ٢٣ 23
ಅವರು ಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.
وَصَنَعَ أَرْبَعِينَ قَاعِدَةً مِنْ فِضَّةٍ تَحْتَ ٱلْعِشْرِينَ لَوْحًا، تَحْتَ ٱللَّوْحِ ٱلْوَاحِدِ قَاعِدَتَانِ لِرِجْلَيْهِ، وَتَحْتَ ٱللَّوْحِ ٱلْوَاحِدِ قَاعِدَتَانِ لِرِجْلَيْهِ. ٢٤ 24
ಅವರು ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿದರು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಿದರು.
وَلِجَانِبِ ٱلْمَسْكَنِ ٱلثَّانِي إِلَى جِهَةِ ٱلشِّمَالِ صَنَعَ عِشْرِينَ لَوْحًا، ٢٥ 25
ಇನ್ನೊಂದು ಭಾಗಕ್ಕೆ ಅಂದರೆ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.
وَأَرْبَعِينَ قَاعِدَةً لَهَا مِنْ فِضَّةٍ. تَحْتَ ٱللَّوْحِ ٱلْوَاحِدِ قَاعِدَتَانِ، وَتَحْتَ ٱللَّوْحِ ٱلْوَاحِدِ قَاعِدَتَانِ. ٢٦ 26
ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಗದ್ದಿಗೇ ಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿದರು.
وَلِمُؤَخَّرِ ٱلْمَسْكَنِ نَحْوَ ٱلْغَرْبِ صَنَعَ سِتَّةَ أَلْوَاحٍ. ٢٧ 27
ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದ ಕಡೆಗೆ ಆರು ಚೌಕಟ್ಟುಗಳನ್ನು ಮಾಡಿದರು.
وَصَنَعَ لَوْحَيْنِ لِزَاوِيَتَيِ ٱلْمَسْكَنِ فِي ٱلْمُؤَخَّرِ. ٢٨ 28
ಅವರು ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು.
وَكَانَا مُزْدَوِجَيْنِ مِنْ أَسْفَلُ، وَعَلَى سَوَاءٍ كَانَا مُزْدَوِجَيْنِ إِلَى رَأْسِهِ إِلَى ٱلْحَلْقَةِ ٱلْوَاحِدَةِ. هَكَذَا صَنَعَ لِكِلْتَيْهِمَا، لِكِلْتَا ٱلزَّاوِيَتَيْنِ. ٢٩ 29
ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿದರು. ಇದೇ ರೀತಿಯಲ್ಲಿ ಅವರು ಎರಡು ಮೂಲೆಗಳಲ್ಲಿ ಎರಡಕ್ಕೂ ಮಾಡಿದರು.
فَكَانَتْ ثَمَانِيَةَ أَلْوَاحٍ وَقَوَاعِدُهَا مِنْ فِضَّةٍ سِتَّ عَشْرَةَ قَاعِدَةً. قَاعِدَتَيْنِ قَاعِدَتَيْنِ تَحْتَ ٱللَّوْحِ ٱلْوَاحِدِ. ٣٠ 30
ಇಂಥ ಎಂಟು ಚೌಕಟ್ಟುಗಳಿದ್ದವು. ಪ್ರತಿಯೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳಿದ್ದವು.
وَصَنَعَ عَوَارِضَ مِنْ خَشَبِ ٱلسَّنْطِ، خَمْسًا لِأَلْوَاحِ جَانِبِ ٱلْمَسْكَنِ ٱلْوَاحِدِ، ٣١ 31
ಅವರು ಜಾಲಿ ಮರದಿಂದ ಅಗುಳಿಗಳನ್ನು ಮಾಡಿದರು, ಗುಡಾರದ ಒಂದು ಕಡೆಯ ಚೌಕಟ್ಟುಗಳಿಗೆ ಐದು ಅಗುಳಿಗಳು,
وَخَمْسَ عَوَارِضَ لِأَلْوَاحِ جَانِبِ ٱلْمَسْكَنِ ٱلثَّانِي، وَخَمْسَ عَوَارِضَ لِأَلْوَاحِ ٱلْمَسْكَنِ فِي ٱلْمُؤَخَّرِ نَحْوَ ٱلْغَرْبِ. ٣٢ 32
ಗುಡಾರದ ಇನ್ನೊಂದು ಭಾಗದ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು, ಅದರ ಹಿಂದುಗಡೆಯ ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು ಮಾಡಿದರು.
وَصَنَعَ ٱلْعَارِضَةَ ٱلْوُسْطَى لِتَنْفُذَ فِي وَسَطِ ٱلْأَلْوَاحِ مِنَ ٱلطَّرَفِ إِلَى ٱلطَّرَفِ. ٣٣ 33
ಮಧ್ಯದ ಅಗುಳಿಯು ಚೌಕಟ್ಟುಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹಾದು ಹೋಗುವಹಾಗೆ ಮಾಡಿದರು.
وَغَشَّى ٱلْأَلْوَاحَ بِذَهَبٍ. وَصَنَعَ حَلَقَاتِهَا مِنْ ذَهَبٍ بُيُوتًا لِلْعَوَارِضِ، وَغَشَّى ٱلْعَوَارِضَ بِذَهَبٍ. ٣٤ 34
ಆ ಚೌಕಟ್ಟುಗಳನ್ನು ಬಂಗಾರದಿಂದ ಹೊದಿಸಿ, ಆ ಅಗುಳಿಗಳಿಗಾಗಿ ಬಂಗಾರದಿಂದ ಬಳೆಗಳನ್ನು ಮಾಡಿ, ಮಾಡಿದ ಅಗುಳಿಗಳನ್ನು ಬಂಗಾರದಿಂದ ಹೊದಿಸಿದರು.
وَصَنَعَ ٱلْحِجَابَ مِنْ أَسْمَانْجُونِيٍّ وَأُرْجُوَانٍ وَقِرْمِزٍ وَبُوصٍ مَبْرُومٍ. صَنْعَةَ حَائِكٍ حَاذِقٍ صَنَعَهُ بِكَرُوبِيمَ. ٣٥ 35
ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಿದರು.
وَصَنَعَ لَهُ أَرْبَعَةَ أَعْمِدَةٍ مِنْ سَنْطٍ، وَغَشَّاهَا بِذَهَبٍ. رُزَزُهَا مِنْ ذَهَبٍ. وَسَبَكَ لَهَا أَرْبَعَ قَوَاعِدَ مِنْ فِضَّةٍ. ٣٦ 36
ಅದಕ್ಕೆ ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಅವುಗಳಿಗೆ ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳನ್ನು ಎರಕ ಹೊಯ್ದರು.
وَصَنَعَ سَجْفًا لِمَدْخَلِ ٱلْخَيْمَةِ مِنْ أَسْمَانْجُونِيٍّ وَأُرْجُوَانٍ وَقِرْمِزٍ وَبُوصٍ مَبْرُومٍ صَنْعَةَ ٱلطَّرَّازِ. ٣٧ 37
ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಿದರು.
وَأَعْمِدَتَهُ خَمْسَةً وَرُزَزَهَا. وَغَشَّى رُؤُوسَهَا وَقُضْبَانَهَا بِذَهَبٍ، وَقَوَاعِدَهَا خَمْسًا مِنْ نُحَاسٍ. ٣٨ 38
ಕೊಂಡಿಯಿರುವ ಐದು ಕಂಬಗಳನ್ನು ಮಾಡಿ, ಅವುಗಳ ತಲೆಗಳನ್ನೂ ಕಂಬಗಳನ್ನೂ ಬಂಗಾರದಿಂದ ಹೊದಿಸಿದರು. ಆದರೆ ಅವುಗಳ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಮಾಡಿದರು.

< اَلْخُرُوجُ 36 >