< لُوقا 11 >

وَإِذْ كَانَ يُصَلِّي فِي مَوْضِعٍ، لَمَّا فَرَغَ، قَالَ وَاحِدٌ مِنْ تَلَامِيذِهِ: «يَارَبُّ، عَلِّمْنَا أَنْ نُصَلِّيَ كَمَا عَلَّمَ يُوحَنَّا أَيْضًا تَلَامِيذَهُ». ١ 1
ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದ ಮೇಲೆ, ಅವರ ಶಿಷ್ಯರಲ್ಲಿ ಒಬ್ಬನು ಅವರಿಗೆ, “ಕರ್ತದೇವರೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆಮಾಡುವುದಕ್ಕೆ ಕಲಿಸಿರಿ,” ಎಂದು ಕೇಳಿದನು.
فَقَالَ لَهُمْ: «مَتَى صَلَّيْتُمْ فَقُولُوا: أَبَانَا ٱلَّذِي فِي ٱلسَّمَاوَاتِ، لِيَتَقَدَّسِ ٱسْمُكَ، لِيَأْتِ مَلَكُوتُكَ، لِتَكُنْ مَشِيئَتُكَ كَمَا فِي ٱلسَّمَاءِ كَذَلِكَ عَلَى ٱلْأَرْضِ. ٢ 2
ಯೇಸು ಅವರಿಗೆ, “ನೀವು ಪ್ರಾರ್ಥನೆ ಮಾಡುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಕೆಯಾಗಿರಲಿ, ನಿಮ್ಮ ರಾಜ್ಯವು ಬರಲಿ. ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.
خُبْزَنَا كَفَافَنَا أَعْطِنَا كُلَّ يَوْمٍ، ٣ 3
ನಮ್ಮ ಅನುದಿನದ ಆಹಾರವನ್ನು ನಮಗೆ ಪ್ರತಿದಿನವೂ ದಯಪಾಲಿಸಿರಿ.
وَٱغْفِرْ لَنَا خَطَايَانَا لِأَنَّنَا نَحْنُ أَيْضًا نَغْفِرُ لِكُلِّ مَنْ يُذْنِبُ إِلَيْنَا، وَلَا تُدْخِلْنَا فِي تَجْرِبَةٍ لَكِنْ نَجِّنَا مِنَ ٱلشِّرِّيرِ». ٤ 4
ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ.”
ثُمَّ قَالَ لَهُمْ: «مَنْ مِنْكُمْ يَكُونُ لَهُ صَدِيقٌ، وَيَمْضِي إِلَيْهِ نِصْفَ ٱللَّيْلِ، وَيَقُولُ لَهُ يَا صَدِيقُ، أَقْرِضْنِي ثَلَاثَةَ أَرْغِفَةٍ، ٥ 5
ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ, ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ, ‘ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಸಾಲವಾಗಿ ಕೊಡು;
لِأَنَّ صَدِيقًا لِي جَاءَنِي مِنْ سَفَرٍ، وَلَيْسَ لِي مَا أُقَدِّمُ لَهُ. ٦ 6
ಏಕೆಂದರೆ ನನ್ನ ಒಬ್ಬ ಸ್ನೇಹಿತನು ಪ್ರಯಾಣಮಾಡಿ ನನ್ನ ಬಳಿಗೆ ಬಂದಿದ್ದಾನೆ, ಅವನಿಗೆ ಬಡಿಸುವುದಕ್ಕೆ ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು
فَيُجِيبَ ذَلِكَ مِنْ دَاخِلٍ وَيَقُولَ: لَا تُزْعِجْنِي! اَلْبَابُ مُغْلَقٌ ٱلْآنَ، وَأَوْلَادِي مَعِي فِي ٱلْفِرَاشِ. لَا أَقْدِرُ أَنْ أَقُومَ وَأُعْطِيَكَ. ٧ 7
ಅವನು ಒಳಗಿನಿಂದಲೇ ಇವನಿಗೆ ಉತ್ತರವಾಗಿ, ‘ನನ್ನನ್ನು ತೊಂದರೆಪಡಿಸಬೇಡ. ಬಾಗಿಲು ಈಗ ಮುಚ್ಚಿದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆ ಮಲಗಿದ್ದಾರೆ. ನಾನೆದ್ದು ಕೊಡಲಾರೆನು,’ ಎಂದು ಹೇಳುವನು.
أَقُولُ لَكُمْ: وَإِنْ كَانَ لَا يَقُومُ وَيُعْطِيهِ لِكَوْنِهِ صَدِيقَهُ، فَإِنَّهُ مِنْ أَجْلِ لَجَاجَتِهِ يَقُومُ وَيُعْطِيهِ قَدْرَ مَا يَحْتَاجُ. ٨ 8
ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.
وَأَنَا أَقُولُ لَكُمُ: ٱسْأَلُوا تُعْطَوْا، اُطْلُبُوا تَجِدُوا، اِقْرَعُوا يُفْتَحْ لَكُمْ. ٩ 9
“ಕೇಳಿಕೊಳ್ಳಿರಿ ನಿಮಗೆ ಕೊಡಲಾಗುವುದು; ಹುಡುಕಿರಿ ನಿಮಗೆ ಸಿಗುವುದು; ತಟ್ಟಿರಿ ನಿಮಗೆ ಬಾಗಿಲು ತೆರೆಯಲಾಗುವುದು.
لِأَنَّ كُلَّ مَنْ يَسْأَلُ يَأْخُذُ، وَمَنْ يَطْلُبُ يَجِدُ، وَمَنْ يَقْرَعُ يُفْتَحُ لَهُ. ١٠ 10
ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.
فَمَنْ مِنْكُمْ، وَهُوَ أَبٌ، يَسْأَلُهُ ٱبْنُهُ خُبْزًا، أَفَيُعْطِيهِ حَجَرًا؟ أَوْ سَمَكَةً، أَفَيُعْطِيهِ حَيَّةً بَدَلَ ٱلسَّمَكَةِ؟ ١١ 11
“ನಿಮ್ಮಲ್ಲಿ ತಂದೆಯಾಗಿರುವಾತನು, ತನ್ನ ಮಗನು ರೊಟ್ಟಿಯನ್ನು ಕೇಳಿದರೆ ಮಗನಿಗೆ ಕಲ್ಲನ್ನು ಕೊಡುವನೇ, ಮೀನನ್ನು ಕೇಳಿದರೆ, ಮೀನಿಗೆ ಬದಲಾಗಿ ಹಾವನ್ನು ಕೊಡುವನೇ?
أَوْ إِذَا سَأَلَهُ بَيْضَةً، أَفَيُعْطِيهِ عَقْرَبًا؟ ١٢ 12
ಇಲ್ಲವೆ ಮೊಟ್ಟೆಯನ್ನು ಕೇಳಿದರೆ, ಅವನಿಗೆ ಚೇಳನ್ನು ಕೊಡುವನೇ?
فَإِنْ كُنْتُمْ وَأَنْتُمْ أَشْرَارٌ تَعْرِفُونَ أَنْ تُعْطُوا أَوْلَادَكُمْ عَطَايَا جَيِّدَةً، فَكَمْ بِٱلْحَرِيِّ ٱلْآبُ ٱلَّذِي مِنَ ٱلسَّمَاءِ، يُعْطِي ٱلرُّوحَ ٱلْقُدُسَ لِلَّذِينَ يَسْأَلُونَهُ؟». ١٣ 13
ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.
وَكَانَ يُخْرِجُ شَيْطَانًا، وَكَانَ ذَلِكَ أَخْرَسَ. فَلَمَّا أُخْرِجَ ٱلشَّيْطَانُ تَكَلَّمَ ٱلْأَخْرَسُ، فَتَعَجَّبَ ٱلْجُمُوعُ. ١٤ 14
ಯೇಸು ಒಂದು ಮೂಕದೆವ್ವವನ್ನು ಹೊರಗೆ ಓಡಿಸುತ್ತಿದ್ದರು. ಆ ದೆವ್ವವು ಹೊರಟುಹೋದ ಮೇಲೆ, ಆ ಮೂಕನು ಮಾತನಾಡಿದನು. ಅದಕ್ಕೆ ಜನರು ಆಶ್ಚರ್ಯಪಟ್ಟರು.
وَأَمَّا قَوْمٌ مِنْهُمْ فَقَالُوا: «بِبَعْلَزَبُولَ رَئِيسِ ٱلشَّيَاطِينِ يُخْرِجُ ٱلشَّيَاطِينَ». ١٥ 15
ಆದರೆ ಅವರಲ್ಲಿ ಕೆಲವರು, “ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.
وَآخَرُونَ طَلَبُوا مِنْهُ آيَةً مِنَ ٱلسَّمَاءِ يُجَرِّبُونَهُ. ١٦ 16
ಇನ್ನು ಕೆಲವರು ಯೇಸುವನ್ನು ಪರೀಕ್ಷಿಸುವವರಾಗಿ ಪರಲೋಕದಿಂದ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.
فَعَلِمَ أَفْكَارَهُمْ، وَقَالَ لَهُمْ: «كُلُّ مَمْلَكَةٍ مُنْقَسِمَةٍ عَلَى ذَاتِهَا تَخْرَبُ، وَبَيْتٍ مُنْقَسِمٍ عَلَى بَيْتٍ يَسْقُطُ. ١٧ 17
ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು: “ತನಗೆ ತಾನೇ ವಿರೋಧವಾಗಿ ವಿಭಾಗಗೊಂಡರೆ ಪ್ರತಿಯೊಂದು ರಾಜ್ಯವು ನಾಶವಾಗುವುದು, ಒಂದು ಮನೆಯು ತನಗೆ ತಾನೇ ವಿರೋಧವಾಗಿ ವಿಭಾಗವಾದರೆ, ಅದು ಬಿದ್ದುಹೋಗುವುದು.
فَإِنْ كَانَ ٱلشَّيْطَانُ أَيْضًا يَنْقَسِمُ عَلَى ذَاتِهِ، فَكَيْفَ تَثْبُتُ مَمْلَكَتُهُ؟ لِأَنَّكُمْ تَقُولُونَ: إِنِّي بِبَعْلَزَبُولَ أُخْرِجُ ٱلشَّيَاطِينَ. ١٨ 18
ಸೈತಾನನು ಸಹ ತನಗೆ ತಾನೇ ವಿರೋಧವಾಗಿ ತನ್ನಲ್ಲಿ ವಿಭಾಗವಾದರೆ, ಅವನ ರಾಜ್ಯವು ನಿಲ್ಲುವುದು ಹೇಗೆ? ಏಕೆಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
فَإِنْ كُنْتُ أَنَا بِبَعْلَزَبُولَ أُخْرِجُ ٱلشَّيَاطِينَ، فَأَبْنَاؤُكُمْ بِمَنْ يُخْرِجُونَ؟ لِذَلِكَ هُمْ يَكُونُونَ قُضَاتَكُمْ! ١٩ 19
ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.
وَلَكِنْ إِنْ كُنْتُ بِأَصْبِعِ ٱللهِ أُخْرِجُ ٱلشَّيَاطِينَ، فَقَدْ أَقْبَلَ عَلَيْكُمْ مَلَكُوتُ ٱللهِ. ٢٠ 20
ನಾನು ದೇವರ ಬಲದಿಂದಲೇ ದೆವ್ವಗಳನ್ನು ಓಡಿಸುವುದಾದರೆ, ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
حِينَمَا يَحْفَظُ ٱلْقَوِيُّ دَارَهُ مُتَسَلِّحًا،تَكُونُ أَمْوَالُهُ فِي أَمَانٍ. ٢١ 21
“ಆಯುಧಗಳನ್ನು ಧರಿಸಿಕೊಂಡು, ಬಲಿಷ್ಠನಾದವನೊಬ್ಬನು ತನ್ನ ಮನೆಯನ್ನು ಕಾಯುವುದಾದರೆ ಅವನ ಸೊತ್ತು ಸುರಕ್ಷಿತವಾಗಿರುವುದು.
وَلَكِنْ مَتَى جَاءَ مَنْ هُوَ أَقْوَى مِنْهُ فَإِنَّهُ يَغْلِبُهُ، وَيَنْزِعُ سِلَاحَهُ ٱلْكَامِلَ ٱلَّذِي ٱتَّكَلَ عَلَيْهِ، وَيُوَزِّعُ غَنَائِمَهُ. ٢٢ 22
ಆದರೆ ಅವನಿಗಿಂತ ಬಲಿಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ, ಅವನು ಭರವಸೆಯಿಟ್ಟಿದ್ದ ಆಯುಧಗಳನ್ನು ಅವನಿಂದ ತೆಗೆದುಕೊಂಡು ತನ್ನ ಸುಲಿಗೆಯನ್ನೆಲ್ಲಾ ಹಂಚುವನು.
مَنْ لَيْسَ مَعِي فَهُوَ عَلَيَّ، وَمَنْ لَا يَجْمَعُ مَعِي فَهُوَ يُفَرِّقُ. ٢٣ 23
“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.
مَتَى خَرَجَ ٱلرُّوحُ ٱلنَّجِسُ مِنَ ٱلْإِنْسَانِ، يَجْتَازُ فِي أَمَاكِنَ لَيْسَ فِيهَا مَاءٌ يَطْلُبُ رَاحَةً، وَإِذْ لَا يَجِدُ يَقُولُ: أَرْجِعُ إِلَى بَيْتِي ٱلَّذِي خَرَجْتُ مِنْهُ. ٢٤ 24
“ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ, ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ ಅದು, ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು,
فَيَأْتِي وَيَجِدُهُ مَكْنُوسًا مُزَيَّنًا. ٢٥ 25
ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.
ثُمَّ يَذْهَبُ وَيَأْخُذُ سَبْعَةَ أَرْوَاحٍ أُخَرَ أَشَرَّ مِنْهُ، فَتَدْخُلُ وَتَسْكُنُ هُنَاكَ، فَتَصِيرُ أَوَاخِرُ ذَلِكَ ٱلْإِنْسَانِ أَشَرَّ مِنْ أَوَائِلِهِ!». ٢٦ 26
ಆ ಅಶುದ್ಧಾತ್ಮವು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುತ್ತವೆ. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು,” ಎಂದರು.
وَفِيمَا هُوَ يَتَكَلَّمُ بِهَذَا، رَفَعَتِ ٱمْرَأَةٌ صَوْتَهَا مِنَ ٱلْجَمْعِ وَقَالَتْ لَهُ: «طُوبَى لِلْبَطْنِ ٱلَّذِي حَمَلَكَ وَٱلثَّدْيَيْنِ ٱللَّذَيْنِ رَضِعْتَهُمَا». ٢٧ 27
ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನೆತ್ತಿ ಅವರಿಗೆ, “ನಿಮ್ಮನ್ನು ಗರ್ಭದಲ್ಲಿ ಹೊತ್ತು, ನಿಮಗೆ ಹಾಲುಣಿಸಿದ ತಾಯಿ ಧನ್ಯಳು,” ಎಂದು ಹೇಳಿದಳು.
أَمَّا هُوَ فَقَالَ: «بَلْ طُوبَى لِلَّذِينَ يَسْمَعُونَ كَلَامَ ٱللهِ وَيَحْفَظُونَهُ». ٢٨ 28
ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.
وَفِيمَا كَانَ ٱلْجُمُوعُ مُزْدَحِمِينَ، ٱبْتَدَأَ يَقُولُ: «هَذَا ٱلْجِيلُ شِرِّيرٌ. يَطْلُبُ آيَةً، وَلَا تُعْطَى لَهُ آيَةٌ إِلَّا آيَةُ يُونَانَ ٱلنَّبِيِّ. ٢٩ 29
ಜನರು ಗುಂಪುಗುಂಪಾಗಿ ಕೂಡಿಬಂದಿದ್ದಾಗ, ಯೇಸು, “ಇದು ದುಷ್ಟ ಸಂತತಿಯು. ಇದು ಸೂಚಕಕಾರ್ಯವನ್ನು ಹುಡುಕುತ್ತದೆ, ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ದೊರಕದು.
لِأَنَّهُ كَمَا كَانَ يُونَانُ آيَةً لِأَهْلِ نِينَوَى، كَذَلِكَ يَكُونُ ٱبْنُ ٱلْإِنْسَانِ أَيْضًا لِهَذَا ٱلْجِيلِ. ٣٠ 30
ಏಕೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಸೂಚನೆಯಾಗಿದ್ದಂತೆಯೇ, ಮನುಷ್ಯಪುತ್ರನಾದ ನಾನೇ ಈ ಸಂತತಿಗೆ ಸೂಚನೆಯಾಗಿರುವೆನು.
مَلِكَةُ ٱلتَّيْمَنِ سَتَقُومُ فِي ٱلدِّينِ مَعَ رِجَالِ هَذَا ٱلْجِيلِ وَتَدِينُهُمْ، لِأَنَّهَا أَتَتْ مِنْ أَقَاصِي ٱلْأَرْضِ لِتَسْمَعَ حِكْمَةَ سُلَيْمَانَ، وَهُوَذَا أَعْظَمُ مِنْ سُلَيْمَانَ هَهُنَا! ٣١ 31
ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.
رِجَالُ نِينَوَى سَيَقُومُونَ فِي ٱلدِّينِ مَعَ هَذَا ٱلْجِيلِ وَيَدِينُونَهُ، لِأَنَّهُمْ تَابُوا بِمُنَادَاةِ يُونَانَ، وَهُوَذَا أَعْظَمُ مِنْ يُونَانَ هَهُنَا! ٣٢ 32
ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ,” ಎಂದು ಹೇಳಿದರು.
«لَيْسَ أَحَدٌ يُوقِدُ سِرَاجًا وَيَضَعُهُ فِي خِفْيَةٍ، وَلَا تَحْتَ ٱلْمِكْيَالِ، بَلْ عَلَى ٱلْمَنَارَةِ، لِكَيْ يَنْظُرَ ٱلدَّاخِلُونَ ٱلنُّورَ. ٣٣ 33
“ಯಾರೂ ದೀಪವನ್ನು ಹಚ್ಚಿ ಮರೆಯಾದ ಸ್ಥಳದಲ್ಲಾಗಲಿ ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ, ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
سِرَاجُ ٱلْجَسَدِ هُوَ ٱلْعَيْنُ، فَمَتَى كَانَتْ عَيْنُكَ بَسِيطَةً فَجَسَدُكَ كُلُّهُ يَكُونُ نَيِّرًا، وَمَتَى كَانَتْ شِرِّيرَةً فَجَسَدُكَ يَكُونُ مُظْلِمًا. ٣٤ 34
ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ. ಆದ್ದರಿಂದ ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವು ಸಹ ಕತ್ತಲೆಯಾಗಿರುವುದು.
اُنْظُرْ إِذًا لِئَلَّا يَكُونَ ٱلنُّورُ ٱلَّذِي فِيكَ ظُلْمَةً. ٣٥ 35
ಆದ್ದರಿಂದ, ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ.
فَإِنْ كَانَ جَسَدُكَ كُلُّهُ نَيِّرًا لَيْسَ فِيهِ جُزْءٌ مُظْلِمٌ، يَكُونُ نَيِّرًا كُلُّهُ، كَمَا حِينَمَا يُضِيءُ لَكَ ٱلسِّرَاجُ بِلَمَعَانِهِ». ٣٦ 36
ದೇಹದ ಯಾವುದೊಂದು ಭಾಗದಲ್ಲಿಯೂ ಕತ್ತಲೆಯಾಗಿರದೆ, ನಿನ್ನ ದೇಹವೆಲ್ಲವೂ ಪೂರ್ಣವಾಗಿ ಬೆಳಕಾಗಿರುವುದಾದರೆ, ಪ್ರಕಾಶಮಾನವಾದ ದೀಪವು ನಿನಗೆ ಬೆಳಕುಕೊಡುವಂತೆ ಸಮಸ್ತವೂ ಬೆಳಕಾಗಿರುವುದು,” ಎಂದು ಹೇಳಿದರು.
وَفِيمَا هُوَ يَتَكَلَّمُ سَأَلَهُ فَرِّيسِيٌّ أَنْ يَتَغَدَّى عِنْدَهُ، فَدَخَلَ وَاتَّكَأَ. ٣٧ 37
ಯೇಸು ಮಾತನಾಡುವುದನ್ನು ಮುಗಿಸಿದಾಗ, ಒಬ್ಬ ಫರಿಸಾಯನು ತನ್ನೊಂದಿಗೆ ಊಟ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡನು, ಆಗ ಅವರು ಒಳಗೆ ಹೋಗಿ ಊಟಕ್ಕೆ ಕೂತುಕೊಂಡರು.
وَأَمَّا ٱلْفَرِّيسِيُّ فَلَمَّا رَأَى ذَلِكَ تَعَجَّبَ أَنَّهُ لَمْ يَغْتَسِلْ أَوَّلًا قَبْلَ ٱلْغَدَاءِ. ٣٨ 38
ಆದರೆ ಊಟಕ್ಕೆ ಮೊದಲು ಯೇಸು ಕೈತೊಳೆಯದೆ ಇರುವುದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
فَقَالَ لَهُ ٱلرَّبُّ: «أَنْتُمُ ٱلْآنَ أَيُّهَا ٱلْفَرِّيسِيُّونَ تُنَقُّونَ خَارِجَ ٱلْكَأْسِ وَٱلْقَصْعَةِ، وَأَمَّا بَاطِنُكُمْ فَمَمْلُوءٌ ٱخْتِطَافًا وَخُبْثًا. ٣٩ 39
ಆಗ ಕರ್ತದೇವರು ಅವನಿಗೆ, “ಫರಿಸಾಯರಾದ ನೀವು, ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.
يَا أَغْبِيَاءُ، أَلَيْسَ ٱلَّذِي صَنَعَ ٱلْخَارِجَ صَنَعَ ٱلدَّاخِلَ أَيْضًا؟ ٤٠ 40
ಮೂರ್ಖರೇ! ಹೊರಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
بَلْ أَعْطُوا مَا عِنْدَكُمْ صَدَقَةً، فَهُوَذَا كُلُّ شَيْءٍ يَكُونُ نَقِيًّا لَكُمْ. ٤١ 41
ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.
وَلَكِنْ وَيْلٌ لَكُمْ أَيُّهَا ٱلْفَرِّيسِيُّونَ! لِأَنَّكُمْ تُعَشِّرُونَ ٱلنَّعْنَعَ وَٱلسَّذَابَ وَكُلَّ بَقْلٍ، وَتَتَجَاوَزُونَ عَنِ ٱلْحَقِّ وَمَحَبَّةِ ٱللهِ. كَانَ يَنْبَغِي أَنْ تَعْمَلُوا هَذِهِ وَلَا تَتْرُكُوا تِلْكَ. ٤٢ 42
“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.
وَيْلٌ لَكُمْ أَيُّهَا ٱلْفَرِّيسِيُّونَ! لِأَنَّكُمْ تُحِبُّونَ ٱلْمَجْلِسَ ٱلْأَوَّلَ فِي ٱلْمَجَامِعِ، وَٱلتَّحِيَّاتِ فِي ٱلْأَسْوَاقِ. ٤٣ 43
“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಇಷ್ಟಪಡುತ್ತೀರಿ.
وَيْلٌ لَكُمْ أَيُّهَا ٱلْكَتَبَةُ وَٱلْفَرِّيسِيُّونَ ٱلْمُرَاؤُونَ! لِأَنَّكُمْ مِثْلُ ٱلْقُبُورِ ٱلْمُخْتَفِيَةِ، وَٱلَّذِينَ يَمْشُونَ عَلَيْهَا لَا يَعْلَمُونَ!». ٤٤ 44
“ನಿಮಗೆ ಕಷ್ಟ, ಏಕೆಂದರೆ ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ, ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು,” ಎಂದು ಹೇಳಿದರು.
فَأجَابَ وَاحِدٌ مِنَ ٱلنَّامُوسِيِّينَ وَقالَ لَهُ: «يَا مُعَلِّمُ، حِينَ تَقُولُ هَذَا تَشْتُمُنَا نَحْنُ أَيْضًا!». ٤٥ 45
ನಿಯಮ ಬೋಧಕ ಒಬ್ಬನು ಯೇಸುವಿಗೆ, “ಬೋಧಕರೇ, ನೀವು ಇವುಗಳನ್ನು ಹೇಳುವುದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀರಿ,” ಎಂದನು.
فَقَالَ: «وَوَيْلٌ لَكُمْ أَنْتُمْ أَيُّهَا ٱلنَّامُوسِيُّونَ! لِأَنَّكُمْ تُحَمِّلُونَ ٱلنَّاسَ أَحْمَالًا عَسِرَةَ ٱلْحَمْلِ وَأَنْتُمْ لَا تَمَسُّونَ ٱلْأَحْمَالَ بِإِحْدَى أَصَابِعِكُمْ. ٤٦ 46
ಅದಕ್ಕೆ ಯೇಸು, “ನಿಯಮ ಪಂಡಿತರೇ, ನಿಮಗೂ ಕಷ್ಟ, ಏಕೆಂದರೆ ಹೊರಲಾಗದ ಹೊರೆಗಳನ್ನು ಮನುಷ್ಯರ ಮೇಲೆ ಹೊರಿಸುತ್ತೀರಿ, ನೀವಾದರೋ ಈ ಹೊರೆಗಳನ್ನು ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ಮುಟ್ಟುವುದಿಲ್ಲ.
وَيْلٌ لَكُمْ! لِأَنَّكُمْ تَبْنُونَ قُبُورَ ٱلْأَنْبِيَاءِ، وَآبَاؤُكُمْ قَتَلُوهُمْ. ٤٧ 47
“ನಿಮಗೆ ಕಷ್ಟ, ಏಕೆಂದರೆ ನಿಮ್ಮ ಪಿತೃಗಳು ಪ್ರವಾದಿಗಳನ್ನು ಕೊಂದರು, ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
إِذًا تَشْهَدُونَ وَتَرْضَوْنَ بِأَعْمَالِ آبَائِكُمْ، لِأَنَّهُمْ هُمْ قَتَلُوهُمْ وَأَنْتُمْ تَبْنُونَ قُبُورَهُمْ. ٤٨ 48
ಇದರಿಂದ ನಿಜವಾಗಿಯೂ ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಒಪ್ಪಿಕೊಳ್ಳುವಂತೆ ಸಾಕ್ಷಿಕರಿಸುತ್ತೀರಿ; ಏಕೆಂದರೆ ಅವರು ನಿಜವಾಗಿಯೂ ಪ್ರವಾದಿಗಳನ್ನು ಕೊಂದರು, ನೀವೋ ಅವರ ಸಮಾಧಿಗಳನ್ನು ಕಟ್ಟುತ್ತೀರಿ.
لِذَلِكَ أَيْضًا قَالَتْ حِكْمَةُ ٱللهِ: إِنِّي أُرْسِلُ إِلَيْهِمْ أَنْبِيَاءَ وَرُسُلًا، فَيَقْتُلُونَ مِنْهُمْ وَيَطْرُدُونَ، ٤٩ 49
ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’
لِكَيْ يُطْلَبَ مِنْ هَذَا ٱلْجِيلِ دَمُ جَمِيعِ ٱلْأَنْبِيَاءِ ٱلْمُهْرَقُ مُنْذُ إِنْشَاءِ ٱلْعَالَمِ، ٥٠ 50
ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಲೆಕ್ಕ ಕೊಡಬೇಕಾಗಿರುವುದು,
مِنْ دَمِ هَابِيلَ إِلَى دَمِ زَكَرِيَّا ٱلَّذِي أُهْلِكَ بَيْنَ ٱلْمَذْبَحِ وَٱلْبَيْتِ. نَعَمْ، أَقُولُ لَكُمْ: إِنَّهُ يُطْلَبُ مِنْ هَذَا ٱلْجِيلِ! ٥١ 51
ಹೇಬೆಲನ ರಕ್ತ ಮೊದಲುಗೊಂಡು ಬಲಿಪೀಠಕ್ಕೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು. ಹೌದು, ಈ ಸಂತತಿಯವರೇ ಇದಕ್ಕೆಲ್ಲಾ ಉತ್ತರಕೊಡಬೇಕೆಂದು, ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
وَيْلٌ لَكُمْ أَيُّهَا ٱلنَّامُوسِيُّونَ! لِأَنَّكُمْ أَخَذْتُمْ مِفْتَاحَ ٱلْمَعْرِفَةِ. مَا دَخَلْتُمْ أَنْتُمْ، وَٱلدَّاخِلُونَ مَنَعْتُمُوهُمْ». ٥٢ 52
“ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.
وَفِيمَا هُوَ يُكَلِّمُهُمْ بِهَذَا، ٱبْتَدَأَ ٱلْكَتَبَةُ وَٱلْفَرِّيسِيُّونَ يَحْنَقُونَ جِدًّا، وَيُصَادِرُونَهُ عَلَى أُمُورٍ كَثِيرَةٍ، ٥٣ 53
ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,
وَهُمْ يُرَاقِبُونَهُ طَالِبِينَ أَنْ يَصْطَادُوا شَيْئًا مِنْ فَمِهِ لِكَيْ يَشْتَكُوا عَلَيْهِ. ٥٤ 54
ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು.

< لُوقا 11 >