< مَرْقُس 12 >

وَٱبْتَدَأَ يَقُولُ لَهُمْ بِأَمْثَالٍ: «إِنْسَانٌ غَرَسَ كَرْمًا وَأَحَاطَهُ بِسِيَاجٍ، وَحَفَرَ حَوْضَ مَعْصَرَةٍ، وَبَنَى بُرْجًا، وَسَلَّمَهُ إِلَى كَرَّامِينَ وَسَافَرَ. ١ 1
ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.
ثُمَّ أَرْسَلَ إِلَى ٱلْكَرَّامِينَ فِي ٱلْوَقْتِ عَبْدًا لِيَأْخُذَ مِنَ ٱلْكَرَّامِينَ مِنْ ثَمَرِ ٱلْكَرْمِ، ٢ 2
ಫಲದ ಕಾಲ ಬಂದಾಗ ಅವನು ದ್ರಾಕ್ಷಿತೋಟದ ಫಲವನ್ನು ರೈತರಿಂದ ಪಡೆಯುವುದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕನನ್ನು ಕಳುಹಿಸಿದನು.
فَأَخَذُوهُ وَجَلَدُوهُ وَأَرْسَلُوهُ فَارِغًا. ٣ 3
ಆದರೆ ಅವರು ಅವನನ್ನು ಹಿಡಿದು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.
ثُمَّ أَرْسَلَ إِلَيْهِمْ أَيْضًا عَبْدًا آخَرَ، فَرَجَمُوهُ وَشَجُّوهُ وَأَرْسَلُوهُ مُهَانًا. ٤ 4
ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ತಲೆಯನ್ನು ಗಾಯಗೊಳಿಸಿ ಅವಮಾನ ಮಾಡಿ ಕಳುಹಿಸಿಬಿಟ್ಟರು.
ثُمَّ أَرْسَلَ أَيْضًا آخَرَ، فَقَتَلُوهُ. ثُمَّ آخَرِينَ كَثِيرِينَ، فَجَلَدُوا مِنْهُمْ بَعْضًا وَقَتَلُوا بَعْضًا. ٥ 5
ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದಾಗ ಅವರು ಅವನನ್ನು ಕೊಂದುಹಾಕಿದರು. ಯಜಮಾನನು ಬೇರೆ ಕೆಲವರನ್ನು ಕಳುಹಿಸಿದಾಗ ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
فَإِذْ كَانَ لَهُ أَيْضًا ٱبْنٌ وَاحِدٌ حَبِيبٌ إِلَيْهِ،أَرْسَلَهُ أَيْضًا إِلَيْهِمْ أَخِيرًا، قَائِلًا: إِنَّهُمْ يَهَابُونَ ٱبْنِي! ٦ 6
“ಕಡೆಯದಾಗಿ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನಿದ್ದನು. ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು,’ ಎಂದು ಭಾವಿಸಿ, ಅವನನ್ನು ಅವರ ಬಳಿಗೆ ಕಳುಹಿಸಿದನು.
وَلَكِنَّ أُولَئِكَ ٱلْكَرَّامِينَ قَالُوا فِيمَا بَيْنَهُمْ: هَذَا هُوَ ٱلْوَارِثُ! هَلُمُّوا نَقْتُلْهُ فَيَكُونَ لَنَا ٱلْمِيرَاثُ! ٧ 7
“ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು.
فَأَخَذُوهُ وَقَتَلُوهُ وَأَخْرَجُوهُ خَارِجَ ٱلْكَرْمِ. ٨ 8
ಅವರು ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷಿತೋಟದ ಹೊರಗೆ ಬಿಸಾಡಿದರು.
فَمَاذَا يَفْعَلُ صَاحِبُ ٱلْكَرْمِ؟ يَأْتِي وَيُهْلِكُ ٱلْكَرَّامِينَ، وَيُعْطِي ٱلْكَرْمَ إِلَى آخَرِينَ. ٩ 9
“ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು.
أَمَا قَرَأْتُمْ هَذَا ٱلْمَكْتُوبَ: ٱلْحَجَرُ ٱلَّذِي رَفَضَهُ ٱلْبَنَّاؤُونَ، هُوَ قَدْ صَارَ رَأْسَ ٱلزَّاوِيَةِ؟ ١٠ 10
ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
مِنْ قِبَلِ ٱلرَّبِّ كَانَ هَذَا، وَهُوَ عَجِيبٌ فِي أَعْيُنِنَا!». ١١ 11
ಇದು ಕರ್ತನಿಂದಲೇ ಆಯಿತು. ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ,’” ಎಂದು ಹೇಳಿದರು.
فَطَلَبُوا أَنْ يُمْسِكُوهُ، وَلَكِنَّهُمْ خَافُوا مِنَ ٱلْجَمْعِ، لِأَنَّهُمْ عَرَفُوا أَنَّهُ قَالَ ٱلْمَثَلَ عَلَيْهِمْ. فَتَرَكُوهُ وَمَضَوْا. ١٢ 12
ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.
ثُمَّ أَرْسَلُوا إِلَيْهِ قَوْمًا مِنَ ٱلْفَرِّيسِيِّينَ وَٱلْهِيرُودُسِيِّينَ لِكَيْ يَصْطَادُوهُ بِكِلْمَةٍ. ١٣ 13
ಆಮೇಲೆ ಅವರು ಯೇಸುವನ್ನು ಅವರ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಅವರ ಬಳಿಗೆ ಕಳುಹಿಸಿದರು.
فَلَمَّا جَاءُوا قَالُوا لَهُ: «يَا مُعَلِّمُ، نَعْلَمُ أَنَّكَ صَادِقٌ وَلَا تُبَالِي بِأَحَدٍ، لِأَنَّكَ لَا تَنْظُرُ إِلَى وُجُوهِ ٱلنَّاسِ، بَلْ بِٱلْحَقِّ تُعَلِّمُ طَرِيقَ ٱللهِ. أَيَجُوزُ أَنْ تُعْطَى جِزْيَةٌ لِقَيْصَرَ أَمْ لَا؟ نُعْطِي أَمْ لَا نُعْطِي؟». ١٤ 14
ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ?
فَعَلِمَ رِيَاءَهُمْ، وَقَالَ لَهُمْ: «لِمَاذَا تُجَرِّبُونَنِي؟ اِيتُونِي بِدِينَارٍ لِأَنْظُرَهُ». ١٥ 15
ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.
فَأَتَوْا بِهِ. فَقَالَ لَهُمْ: «لِمَنْ هَذِهِ ٱلصُّورَةُ وَٱلْكِتَابَةُ؟». فَقَالُوا لَهُ: «لِقَيْصَرَ». ١٦ 16
ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು,” ಎಂದು ಉತ್ತರಕೊಟ್ಟರು.
فَأَجَابَ يَسُوعُ وَقَالَ لَهُمْ: «أَعْطُوا مَا لِقَيْصَرَ لِقَيْصَرَ وَمَا لِلهِ لِلهِ». فَتَعَجَّبُوا مِنْهُ. ١٧ 17
ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು.
وَجَاءَ إِلَيْهِ قَوْمٌ مِنَ ٱلصَّدُّوقِيِّينَ، ٱلَّذِينَ يَقُولُونَ لَيْسَ قِيَامَةٌ، وَسَأَلُوهُ قَائِلِينَ: ١٨ 18
ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಯೇಸುವಿನ ಬಳಿಗೆ ಬಂದು,
«يَا مُعَلِّمُ، كَتَبَ لَنَا مُوسَى: إِنْ مَاتَ لِأَحَدٍ أَخٌ، وَتَرَكَ ٱمْرَأَةً وَلَمْ يُخَلِّفْ أَوْلَادًا، أَنْ يَأْخُذَ أَخُوهُ ٱمْرَأَتَهُ، وَيُقِيمَ نَسْلًا لِأَخِيهِ. ١٩ 19
“ಬೋಧಕರೇ, ‘ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ವಿಧವೆಯನ್ನು ಬಿಟ್ಟು ಸತ್ತರೆ, ಅವನ ಸಹೋದರನು ಅವನ ಹೆಂಡತಿಯನ್ನು ತೆಗೆದುಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು’ ಎಂದು ಮೋಶೆಯು ನಮಗೆ ಬರೆದಿರುತ್ತಾನಷ್ಟೆ.
فَكَانَ سَبْعَةُ إِخْوَةٍ. أَخَذَ ٱلْأَوَّلُ ٱمْرَأَةً وَمَاتَ، وَلَمْ يَتْرُكْ نَسْلًا. ٢٠ 20
ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.
فَأَخَذَهَا ٱلثَّانِي وَمَاتَ، وَلَمْ يَتْرُكْ هُوَ أَيْضًا نَسْلًا. وَهَكَذَا ٱلثَّالِثُ. ٢١ 21
ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು. ಅದರಂತೆಯೇ ಮೂರನೆಯವನೂ ಆದನು.
فَأَخَذَهَا ٱلسَّبْعَةُ، وَلَمْ يَتْرُكُوا نَسْلًا. وَآخِرَ ٱلْكُلِّ مَاتَتِ ٱلْمَرْأَةُ أَيْضًا. ٢٢ 22
ಹೀಗೆ ಏಳುಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವರಾಗಿ ಮೃತರಾದರು. ಕೊನೆಯಲ್ಲಿ ಆ ಸ್ತ್ರೀಯೂ ಸಹ ಮರಣಹೊಂದಿದಳು.
فَفِي ٱلْقِيَامَةِ، مَتَى قَامُوا، لِمَنْ مِنْهُمْ تَكُونُ زَوْجَةً؟ لِأَنَّهَا كَانَتْ زَوْجَةً لِلسَّبْعَةِ». ٢٣ 23
ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ,” ಎಂದು ಪ್ರಶ್ನಿಸಿದರು.
فَأَجَابَ يَسُوعُ وقَالَ لَهُمْ: «أَلَيْسَ لِهَذَا تَضِلُّونَ، إِذْ لَا تَعْرِفُونَ ٱلْكُتُبَ وَلَا قُوَّةَ ٱللهِ؟ ٢٤ 24
ಅದಕ್ಕೆ ಯೇಸು, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದಿರಲ್ಲವೇ?
لِأَنَّهُمْ مَتَى قَامُوا مِنَ ٱلْأَمْوَاتِ لَا يُزَوِّجُونَ وَلَا يُزَوَّجُونَ، بَلْ يَكُونُونَ كَمَلَائِكَةٍ فِي ٱلسَّمَاوَاتِ. ٢٥ 25
ಅವರು ಸತ್ತವರೊಳಗಿಂದ ಜೀವಂತವಾಗಿ ಎದ್ದ ಮೇಲೆ, ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
وَأَمَّا مِنْ جِهَةِ ٱلْأَمْوَاتِ إِنَّهُمْ يَقُومُونَ: أَفَمَا قَرَأْتُمْ فِي كِتَابِ مُوسَى، فِي أَمْرِ ٱلْعُلَّيْقَةِ، كَيْفَ كَلَّمَهُ ٱللهُ قَائِلًا: أَنَا إِلَهُ إِبْرَاهِيمَ وَإِلَهُ إِسْحَاقَ وَإِلَهُ يَعْقُوبَ؟ ٢٦ 26
ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
لَيْسَ هُوَ إِلَهَ أَمْوَاتٍ بَلْ إِلَهُ أَحْيَاءٍ. فَأَنْتُمْ إِذًا تَضِلُّونَ كَثِيرًا!». ٢٧ 27
ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ, ಆದ್ದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪುಮಾಡುತ್ತೀರಿ,” ಎಂದು ಹೇಳಿದರು.
فَجَاءَ وَاحِدٌ مِنَ ٱلْكَتَبَةِ وَسَمِعَهُمْ يَتَحَاوَرُونَ، فَلَمَّا رَأَى أَنَّهُ أَجَابَهُمْ حَسَنًا، سَأَلَهُ: «أَيَّةُ وَصِيَّةٍ هِيَ أَوَّلُ ٱلْكُلِّ؟». ٢٨ 28
ನಿಯಮ ಬೋಧಕರಲ್ಲಿ ಒಬ್ಬನು ಬಂದು ಅವರು ಕೂಡಿಕೊಂಡು ತರ್ಕಿಸುತ್ತಿರುವುದನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಅವರಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವುದು?” ಎಂದು ಕೇಳಿದನು.
فَأَجَابَهُ يَسُوعُ: «إِنَّ أَوَّلَ كُلِّ ٱلْوَصَايَا هِيَ: ٱسْمَعْ يَا إِسْرَائِيلُ. ٱلرَّبُّ إِلَهُنَا رَبٌّ وَاحِدٌ. ٢٩ 29
ಯೇಸು ಉತ್ತರವಾಗಿ ಅವನಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು, ‘ಇಸ್ರಾಯೇಲೇ, ಕೇಳು: ನಮ್ಮ ದೇವರಾದ ಕರ್ತ ಒಬ್ಬರೇ ಕರ್ತನಾಗಿದ್ದಾರೆ.
وَتُحِبُّ ٱلرَّبَّ إِلَهَكَ مِنْ كُلِّ قَلْبِكَ، وَمِنْ كُلِّ نَفْسِكَ، وَمِنْ كُلِّ فِكْرِكَ، وَمِنْ كُلِّ قُدْرَتِكَ. هَذِهِ هِيَ ٱلْوَصِيَّةُ ٱلْأُولَى. ٣٠ 30
ನೀನು ನಿನ್ನ ದೇವರನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು?’
وَثَانِيَةٌ مِثْلُهَا هِيَ: تُحِبُّ قَرِيبَكَ كَنَفْسِكَ. لَيْسَ وَصِيَّةٌ أُخْرَى أَعْظَمَ مِنْ هَاتَيْنِ». ٣١ 31
‘ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,’ ಎಂಬುದು ಅದರಂತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿಗಿಂತ ಹೆಚ್ಚಿನ ಆಜ್ಞೆಯು ಮತ್ತೊಂದಿಲ್ಲ,” ಎಂದು ಹೇಳಿದರು.
فَقَالَ لَهُ ٱلْكَاتِبُ: «جَيِّدًا يَامُعَلِّمُ. بِٱلْحَقِّ قُلْتَ، لِأَنَّهُ ٱللهُ وَاحِدٌ وَلَيْسَ آخَرُ سِوَاهُ. ٣٢ 32
ಅದಕ್ಕೆ ಆ ನಿಯಮ ಬೋಧಕನು ಯೇಸುವಿಗೆ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ನೀವು ಹೇಳಿದ್ದು ಸತ್ಯವೇ; ಏಕೆಂದರೆ ದೇವರು ಒಬ್ಬರೇ, ಅವರ ಹೊರತು ಬೇರೊಬ್ಬರು ಇಲ್ಲ.
وَمَحَبَّتُهُ مِنْ كُلِّ ٱلْقَلْبِ، وَمِنْ كُلِّ ٱلْفَهْمِ، وَمِنْ كُلِّ ٱلنَّفْسِ، وَمِنْ كُلِّ ٱلْقُدْرَةِ، وَمَحَبَّةُ ٱلْقَرِيبِ كَٱلنَّفْسِ، هِيَ أَفْضَلُ مِنْ جَمِيعِ ٱلْمُحْرَقَاتِ وَٱلذَّبَائِحِ». ٣٣ 33
ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.
فَلَمَّا رَآهُ يَسُوعُ أَنَّهُ أَجَابَ بِعَقْلٍ، قَالَ لَهُ: «لَسْتَ بَعِيدًا عَنْ مَلَكُوتِ ٱللهِ». وَلَمْ يَجْسُرْ أَحَدٌ بَعْدَ ذَلِكَ أَنْ يَسْأَلَهُ! ٣٤ 34
ಅವನು ವಿವೇಕದಿಂದ ಉತ್ತರ ಕೊಟ್ಟದ್ದನ್ನು ಯೇಸು ಕಂಡು ಅವನಿಗೆ, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ,” ಎಂದರು. ಅಂದಿನಿಂದ ಯೇಸುವನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
ثُمَّ أَجَابَ يَسُوعُ وَقَالَ وَهُوَ يُعَلِّمُ فِي ٱلْهَيْكَلِ: «كَيْفَ يَقُولُ ٱلْكَتَبَةُ إِنَّ ٱلْمَسِيحَ ٱبْنُ دَاوُدَ؟ ٣٥ 35
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ, “ಕ್ರಿಸ್ತನು ದಾವೀದನ ಪುತ್ರನು ಎಂದು ನಿಯಮ ಬೋಧಕರು ಹೇಳುತ್ತಿರುವುದು ಹೇಗೆ?
لِأَنَّ دَاوُدَ نَفْسَهُ قَالَ بِٱلرُّوحِ ٱلْقُدُسِ: قَالَ ٱلرَّبُّ لِرَبِّي: ٱجْلِسْ عَنْ يَمِينِي، حَتَّى أَضَعَ أَعْدَاءَكَ مَوْطِئًا لِقَدَمَيْكَ. ٣٦ 36
ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.”’
فَدَاوُدُ نَفْسُهُ يَدْعُوهُ رَبًّا. فَمِنْ أَيْنَ هُوَ ٱبْنُهُ؟». وَكَانَ ٱلْجَمْعُ ٱلْكَثِيرُ يَسْمَعُهُ بِسُرُورٍ. ٣٧ 37
ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು.
وَقَالَ لَهُمْ فِي تَعْلِيمِهِ: «تَحَرَّزُوا مِنَ ٱلْكَتَبَةِ، ٱلَّذِينَ يَرْغَبُونَ ٱلْمَشْيَ بِٱلطَّيَالِسَةِ، وَٱلتَّحِيَّاتِ فِي ٱلْأَسْوَاقِ، ٣٨ 38
ಯೇಸು ಬೋಧನೆಮಾಡುತ್ತಾ, “ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ
وَٱلْمَجَالِسَ ٱلْأُولَى فِي ٱلْمَجَامِعِ، وَٱلْمُتَّكَآتِ ٱلْأُولَى فِي ٱلْوَلَائِمِ. ٣٩ 39
ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಇಷ್ಟಪಡುತ್ತಾರೆ.
ٱلَّذِينَ يَأْكُلُونَ بُيُوتَ ٱلْأَرَامِلِ، وَلِعِلَّةٍ يُطِيلُونَ ٱلصَّلَوَاتِ. هَؤُلَاءِ يَأْخُذُونَ دَيْنُونَةً أَعْظَمَ». ٤٠ 40
ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.
وَجَلَسَ يَسُوعُ تُجَاهَ ٱلْخِزَانَةِ، وَنَظَرَ كَيْفَ يُلْقِي ٱلْجَمْعُ نُحَاسًا فِي ٱلْخِزَانَةِ. وَكَانَ أَغْنِيَاءُ كَثِيرُونَ يُلْقُونَ كَثِيرًا. ٤١ 41
ಯೇಸು ಕಾಣಿಕೆ ಪೆಟ್ಟಿಗೆಯ ಎದುರಾಗಿ ಕುಳಿತುಕೊಂಡು ಜನರು ಹೇಗೆ ಅದರಲ್ಲಿ ಹಣ ಹಾಕುತ್ತಿದ್ದಾರೆಂಬುದನ್ನು ಗಮನಿಸುತ್ತಿದ್ದರು. ಅನೇಕ ಐಶ್ವರ್ಯವಂತರು ಹೆಚ್ಚು ಹಣ ಹಾಕಿದರು.
فَجَاءَتْ أَرْمَلَةٌ فَقِيرَةٌ وَأَلْقَتْ فَلْسَيْنِ، قِيمَتُهُمَا رُبْعٌ. ٤٢ 42
ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು.
فَدَعَا تَلَامِيذَهُ وَقَالَ لَهُمُ: «ٱلْحَقَّ أَقُولُ لَكُمْ: إِنَّ هَذِهِ ٱلْأَرْمَلَةَ ٱلْفَقِيرَةَ قَدْ أَلْقَتْ أَكْثَرَ مِنْ جَمِيعِ ٱلَّذِينَ أَلْقَوْا فِي ٱلْخِزَانَةِ، ٤٣ 43
ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
لِأَنَّ ٱلْجَمِيعَ مِنْ فَضْلَتِهِمْ أَلْقَوْا، وَأَمَّا هَذِهِ فَمِنْ إِعْوَازِهَا أَلْقَتْ كُلَّ مَا عِنْدَهَا، كُلَّ مَعِيشَتِهَا». ٤٤ 44
ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದುದನ್ನು ಹಾಕಿದ್ದಾಳೆ,” ಎಂದರು.

< مَرْقُس 12 >