< مَرْقُس 3 >

ثُمَّ دَخَلَ أَيْضًا إِلَى ٱلْمَجْمَعِ، وَكَانَ هُنَاكَ رَجُلٌ يَدُهُ يَابِسَةٌ. ١ 1
ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.
فَصَارُوا يُرَاقِبُونَهُ: هَلْ يَشْفِيهِ فِي ٱلسَّبْتِ؟ لِكَيْ يَشْتَكُوا عَلَيْهِ. ٢ 2
ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.
فَقَالَ لِلرَّجُلِ ٱلَّذِي لَهُ ٱلْيَدُ ٱلْيَابِسَةُ: «قُمْ فِي ٱلْوَسْطِ!». ٣ 3
ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.
ثُمَّ قَالَ لَهُمْ: «هَلْ يَحِلُّ فِي ٱلسَّبْتِ فِعْلُ ٱلْخَيْرِ أَوْ فِعْلُ ٱلشَّرِّ؟ تَخْلِيصُ نَفْسٍ أَوْ قَتْلٌ؟». فَسَكَتُوا. ٤ 4
ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.
فَنَظَرَ حَوْلَهُ إِلَيْهِمْ بِغَضَبٍ، حَزِينًا عَلَى غِلَاظَةِ قُلُوبِهِمْ، وَقَالَ لِلرَّجُلِ: «مُدَّ يَدَكَ». فَمَدَّهَا، فَعَادَتْ يَدُهُ صَحِيحَةً كَٱلْأُخْرَى. ٥ 5
ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
فَخَرَجَ ٱلْفَرِّيسِيُّونَ لِلْوَقْتِ مَعَ ٱلْهِيرُودُسِيِّينَ وَتَشَاوَرُوا عَلَيْهِ لِكَيْ يُهْلِكُوهُ. ٦ 6
ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.
فَٱنْصَرَفَ يَسُوعُ مَعَ تَلَامِيذِهِ إِلَى ٱلْبَحْرِ، وَتَبِعَهُ جَمْعٌ كَثِيرٌ مِنَ ٱلْجَلِيلِ وَمِنَ ٱلْيَهُودِيَّةِ ٧ 7
ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.
وَمِنْ أُورُشَلِيمَ وَمِنْ أَدُومِيَّةَ وَمِنْ عَبْرِ ٱلْأُرْدُنِّ. وَٱلَّذِينَ حَوْلَ صُورَ وَصَيْدَاءَ، جَمْعٌ كَثِيرٌ، إِذْ سَمِعُوا كَمْ صَنَعَ أَتَوْا إِلَيْهِ. ٨ 8
ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
فَقَالَ لِتَلَامِيذِهِ أَنْ تُلَازِمَهُ سَفِينَةٌ صَغِيرَةٌ لِسَبَبِ ٱلْجَمْعِ، كَيْ لَا يَزْحَمُوهُ، ٩ 9
ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.
لِأَنَّهُ كَانَ قَدْ شَفَى كَثِيرِينَ، حَتَّى وَقَعَ عَلَيْهِ لِيَلْمِسَهُ كُلُّ مَنْ فِيهِ دَاءٌ. ١٠ 10
೧೦ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
وَٱلْأَرْوَاحُ ٱلنَّجِسَةُ حِينَمَا نَظَرَتْهُ خَرَّتْ لَهُ وَصَرَخَتْ قَائِلَةً: «إِنَّكَ أَنْتَ ٱبْنُ ٱللهِ!». ١١ 11
೧೧ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.
وَأَوْصَاهُمْ كَثِيرًا أَنْ لَا يُظْهِرُوهُ. ١٢ 12
೧೨ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.
ثُمَّ صَعِدَ إِلَى ٱلْجَبَلِ وَدَعَا ٱلَّذِينَ أَرَادَهُمْ فَذَهَبُوا إِلَيْهِ. ١٣ 13
೧೩ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
وَأَقَامَ ٱثْنَيْ عَشَرَ لِيَكُونُوا مَعَهُ، وَلِيُرْسِلَهُمْ لِيَكْرِزُوا، ١٤ 14
೧೪ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,
وَيَكُونَ لَهُمْ سُلْطَانٌ عَلَى شِفَاءِ ٱلْأَمْرَاضِ وَإِخْرَاجِ ٱلشَّيَاطِينِ. ١٥ 15
೧೫ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.
وَجَعَلَ لِسِمْعَانَ ٱسْمَ بُطْرُسَ. ١٦ 16
೧೬ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.
وَيَعْقُوبَ بْنَ زَبْدِي وَيُوحَنَّا أَخَا يَعْقُوبَ، وَجَعَلَ لَهُمَا ٱسْمَ بُوَانَرْجِسَ أَيِ ٱبْنَيِ ٱلرَّعْدِ. ١٧ 17
೧೭ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.
وَأَنْدَرَاوُسَ، وَفِيلُبُّسَ، وَبَرْثُولَمَاوُسَ، وَمَتَّى، وَتُومَا، وَيَعْقُوبَ بْنَ حَلْفَى، وَتَدَّاوُسَ، وَسِمْعَانَ ٱلْقَانَوِيَّ، ١٨ 18
೧೮ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,
وَيَهُوذَا ٱلْإِسْخَرْيُوطِيَّ ٱلَّذِي أَسْلَمَهُ. ثُمَّ أَتَوْا إِلَى بَيْتٍ. ١٩ 19
೧೯ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.
فَٱجْتَمَعَ أَيْضًا جَمْعٌ حَتَّى لَمْ يَقْدِرُوا وَلَا عَلَى أَكْلِ خُبْزٍ. ٢٠ 20
೨೦ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.
وَلَمَّا سَمِعَ أَقْرِبَاؤُهُ خَرَجُوا لِيُمْسِكُوهُ، لِأَنَّهُمْ قَالُوا: «إِنَّهُ مُخْتَلٌّ!». ٢١ 21
೨೧ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.
وَأَمَّا ٱلْكَتَبَةُ ٱلَّذِينَ نَزَلُوا مِنْ أُورُشَلِيمَ فَقَالُوا: «إِنَّ مَعَهُ بَعْلَزَبُولَ! وَإِنَّهُ بِرَئِيسِ ٱلشَّيَاطِينِ يُخْرِجُ ٱلشَّيَاطِينَ». ٢٢ 22
೨೨ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
فَدَعَاهُمْ وَقَالَ لَهُمْ بِأَمْثَالٍ: «كَيْفَ يَقْدِرُ شَيْطَانٌ أَنْ يُخْرِجَ شَيْطَانًا؟ ٢٣ 23
೨೩ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?
وَإِنِ ٱنْقَسَمَتْ مَمْلَكَةٌ عَلَى ذَاتِهَا لَا تَقْدِرُ تِلْكَ ٱلْمَمْلَكَةُ أَنْ تَثْبُتَ. ٢٤ 24
೨೪ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;
وَإِنِ ٱنْقَسَمَ بَيْتٌ عَلَى ذَاتِهِ لَا يَقْدِرُ ذَلِكَ ٱلْبَيْتُ أَنْ يَثْبُتَ. ٢٥ 25
೨೫ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು.
وَإِنْ قَامَ ٱلشَّيْطَانُ عَلَى ذَاتِهِ وَٱنْقَسَمَ لَا يَقْدِرُ أَنْ يَثْبُتَ، بَلْ يَكُونُ لَهُ ٱنْقِضَاءٌ. ٢٦ 26
೨೬ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು.
لَا يَسْتَطِيعُ أَحَدٌ أَنْ يَدْخُلَ بَيْتَ قَوِيٍّ وَيَنْهَبَ أَمْتِعَتَهُ، إِنْ لَمْ يَرْبِطِ ٱلْقَوِيَّ أَوَّلًا، وَحِينَئِذٍ يَنْهَبُ بَيْتَهُ. ٢٧ 27
೨೭ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.
اَلْحَقَّ أَقُولُ لَكُمْ: إِنَّ جَمِيعَ ٱلْخَطَايَا تُغْفَرُ لِبَنِي ٱلْبَشَرِ، وَٱلتَّجَادِيفَ ٱلَّتِي يُجَدِّفُونَهَا. ٢٨ 28
೨೮ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.
وَلَكِنْ مَنْ جَدَّفَ عَلَى ٱلرُّوحِ ٱلْقُدُسِ فَلَيْسَ لَهُ مَغْفِرَةٌ إِلَى ٱلْأَبَدِ، بَلْ هُوَ مُسْتَوْجِبٌ دَيْنُونَةً أَبَدِيَّةً». (aiōn g165, aiōnios g166) ٢٩ 29
೨೯ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು. (aiōn g165, aiōnios g166)
لِأَنَّهُمْ قَالُوا: «إِنَّ مَعَهُ رُوحًا نَجِسًا». ٣٠ 30
೩೦ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.
فَجَاءَتْ حِينَئِذٍ إِخْوَتُهُ وَأُمُّهُ وَوَقَفُوا خَارِجًا وَأَرْسَلُوا إِلَيْهِ يَدْعُونَهُ. ٣١ 31
೩೧ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.
وَكَانَ ٱلْجَمْعُ جَالِسًا حَوْلَهُ، فَقَالُوا لَهُ: «هُوَذَا أُمُّكَ وَإِخْوَتُكَ خَارِجًا يَطْلُبُونَكَ». ٣٢ 32
೩೨ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು.
فَأَجَابَهُمْ قَائِلًا: «مَنْ أُمِّي وَإِخْوَتِي؟». ٣٣ 33
೩೩ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,
ثُمَّ نَظَرَ حَوْلَهُ إِلَى ٱلْجَالِسِينَ وَقَالَ: «هَا أُمِّي وَإِخْوَتِي، ٣٤ 34
೩೪“ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.
لِأَنَّ مَنْ يَصْنَعُ مَشِيئَةَ ٱللهِ هُوَ أَخِي وَأُخْتِي وَأُمِّي». ٣٥ 35
೩೫ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.

< مَرْقُس 3 >