< ԱՌԱՋԻՆ ԹԵՍԱՂՈՆԻԿԵՑԻՍ 4 >

1 Ուրեմն, եղբայրնե՛ր, կը թախանձենք ձեզի ու կը յորդորենք ձեզ Տէր Յիսուսով, որպէսզի՝ ինչպէս ընդունեցիք մեզմէ թէ ի՛նչպէս պէտք է ընթանաք եւ հաճեցնէք Աստուած՝ ա՛լ աւելի ճոխանաք անոր մէջ,
ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.
2 քանի որ գիտէք թէ ի՛նչ պատուէրներ տուինք ձեզի՝ Տէր Յիսուսով:
ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.
3 Որովհետեւ Աստուծոյ կամքը՝ ձեր սրբացումն է, որ ետ կենաք պոռնկութենէ,
ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.
4 ու ձեզմէ իւրաքանչիւրը գիտնայ իր անօթին տիրանալ սրբութեամբ եւ պատիւով.
ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.
5 ո՛չ թէ ցանկութեան կիրքով, ինչպէս հեթանոսները՝ որ չեն ճանչնար Աստուած:
6 Ո՛չ մէկը թող չափազանցէ այդ բանին՝՝ մէջ ու կեղեքէ իր եղբայրը, քանի որ Տէրը վրէժխնդիր է այդ բոլորին համար, ինչպէս մենք ալ նախապէս ըսինք ձեզի եւ վկայեցինք.
ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.
7 որովհետեւ Աստուած կանչեց մեզ ո՛չ թէ անմաքրութեան, հապա՝ սրբութեան:
ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.
8 Ուստի ա՛ն որ կ՚անարգէ՝ կ՚անարգէ ո՛չ թէ մարդ մը, հապա Աստուած՝ որ իր Սուրբ Հոգին ալ տուաւ մեզի:
ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.
9 Իսկ եղբայրսիրութեան մասին պէտք չունիք որ գրեմ ձեզի, որովհետեւ դուք արդէն Աստուծմէ սորված էք սիրել զիրար,
ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
10 եւ արդարեւ ատիկա կ՚ընէք ամբողջ Մակեդոնիայի մէջ եղող բոլոր եղբայրներուն հանդէպ: Սակայն կ՚աղաչե՛նք ձեզի, եղբայրնե՛ր, որ ա՛լ աւելի ճոխանաք,
೧೦ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.
11 ու պատի՛ւ համարէք հանդարտ կենալ, ձեր գործերով զբաղիլ եւ ձեր ձեռքերով աշխատիլ, (ինչպէս պատուիրեցինք ձեզի, )
೧೧ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.
12 որպէսզի դուրսիններուն հետ վարուիք վայելչութեամբ ու ո՛չ մէկ բանի՝՝ պէտք ունենաք:
೧೨ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.
13 Եղբայրնե՛ր, չենք ուզեր որ անգէտ ըլլաք ննջեցեալներուն մասին, որպէսզի չտրտմիք ինչպէս ուրիշները՝ որ յոյս չունին:
೧೩ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.
14 Արդարեւ եթէ կը հաւատանք թէ Յիսուս մեռաւ եւ յարութիւն առաւ, նոյնպէս ալ հաւատանք թէ Աստուած պիտի բերէ Յիսուսով ննջողները՝ անոր հետ:
೧೪ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
15 Որովհետեւ սա՛ կը յայտարարենք ձեզի՝ Տէրոջ խօսքով, թէ մենք՝ մինչեւ Տէրոջ գալուստը ողջ մնացողներս՝ բնա՛ւ պիտի չկանխենք ննջեցեալները:
೧೫ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.
16 Քանի որ նոյնինքն Տէրը պիտի իջնէ երկինքէն՝ ազդարարութեան հրամանով, հրեշտակապետին ձայնով եւ Աստուծոյ փողով, ու նախ Քրիստոսով մեռածնե՛րը յարութիւն պիտի առնեն:
೧೬ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.
17 Ապա մենք, ողջ մնացողներս, անոնց հետ պիտի յափշտակուինք ամպերով՝ Տէրը դիմաւորելու օդին մէջ, եւ այդպէս Տէրոջ հետ պիտի ըլլանք յաւիտեան:
೧೭ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
18 Հետեւաբար մխիթարեցէ՛ք զիրար այս խօսքերով:
೧೮ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.

< ԱՌԱՋԻՆ ԹԵՍԱՂՈՆԻԿԵՑԻՍ 4 >