< ԵԲՐԱՅԵՑԻՍ 9 >

1 Արդարեւ առաջին ուխտն ալ ունէր պաշտամունքի կանոններ, նաեւ աշխարհային սրբարան մը.
ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು.
2 որովհետեւ խորան մը կառուցանուած էր: Առաջինը, որուն մէջ կային աշտանակը, սեղանը եւ առաջադրութեան հացը, Սրբութիւն կը կոչուէր:
ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.
3 Իսկ երկրորդ վարագոյրին ետեւ կար խորան մը՝ որ Սրբութիւններու սրբութիւն կը կոչուէր.
ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.
4 անոր մէջ էին ոսկիէ բուրվառը եւ ամէն կողմէ ոսկեպատ ուխտին տապանակը, որուն մէջ կային ոսկիէ սափորը՝ մանանայով լեցուն, Ահարոնի գաւազանը՝ որ ծաղկեցաւ, եւ ուխտին տախտակները:
ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.
5 Անոր վրայ ալ՝ փառքի քերովբէները, որ հովանի կ՚ընէին Քաւութեան վրայ: Այս մասին հիմա մանրամասն խօսելու կարիք չկայ:
ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.
6 Ասոնք այսպէս կառուցանուած ըլլալով, քահանաները ամէն ատեն կը մտնէին առաջին խորանը՝ պաշտամունք կատարելու:
ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.
7 Իսկ միայն քահանայապետը կը մտնէր երկրորդին մէջ, տարին մէ՛կ անգամ. բայց ո՛չ առանց արիւնի, որ կը մատուցանէր իրեն համար, նաեւ ժողովուրդին անգիտութեան մեղքերուն համար:
ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.
8 Սուրբ Հոգին սա՛ կը բացայայտէր, թէ սրբարանին ճամբան յայտնաբերուած չէր, քանի դեռ կը կենար առաջին խորանը,
ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
9 որ նախատիպար մըն էր ներկայ ատենին համար: Անոր մէջ կը մատուցանուէին ընծաներ ու զոհեր, որոնք չէին կրնար կատարեալ ընել պաշտամունք կատարողը՝ խղճմտանքին հանդէպ. հապա՝ կերակուրներով, խմելիքներով
ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
10 եւ տարբեր լուացումներով՝ միայն մարմնաւոր կանոններ էին, որոնք կը պարտադրուէին մինչեւ ուղղումի ատենը:
೧೦ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
11 Բայց երբ Քրիստոս եկաւ իբր գալիք բարիքներու Քահանայապետ, անցաւ աւելի մեծ ու կատարեալ խորանին մէջէն՝ որ անձեռակերտ է, (այսինքն՝ այս արարչութենէն չէ, )
೧೧ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,
12 եւ ի՛ր իսկ արիւնով - ո՛չ թէ նոխազներու եւ զուարակներու արիւնով - մէ՛կ անգամ ընդմիշտ մտաւ սրբարանը, յաւիտենական ազատագրութիւն ստանալով: (aiōnios g166)
೧೨ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು. (aiōnios g166)
13 Որովհետեւ եթէ ցուլերուն ու նոխազներուն արիւնը, եւ պիղծերուն վրայ սրսկուող երինջին մոխիրը, կը սրբացնէին՝ մարմինի մաքրութեան համար,
೧೩ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,
14 ա՛լ ո՜րչափ աւելի Քրիստոսի արիւնը, որ յաւիտենական Հոգիին միջոցով մատուցանեց ինքզինք Աստուծոյ՝ իբր անարատ զոհ, պիտի մաքրէ ձեր խղճմտանքը մեռած գործերէն՝ պաշտելու համար ապրող Աստուածը: (aiōnios g166)
೧೪ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ? (aiōnios g166)
15 Հետեւաբար ինք նոր ուխտին միջնորդն է, քանի որ իր մահը եղաւ առաջին ուխտին ժամանակ գործուած օրինազանցութիւններուն ազատագրութեան համար, որպէսզի կանչուածները ստանան յաւիտենական ժառանգութեան խոստումը: (aiōnios g166)
೧೫ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. (aiōnios g166)
16 Որովհետեւ հո՛ն՝ ուր կտակ մը կայ, հարկ է որ կտակարարը մեռնի:
೧೬ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.
17 Արդարեւ կտակը կը հաստատուի մահէն ետք. այլապէս ոյժ չունի՝ այնքան ատեն որ կտակարարը ողջ է:
೧೭ಮರಣ ಶಾಸನವು ವ್ಯಕ್ತಿಯ ಮರಣವಾದ ಮೇಲೆ ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಬರೆದವನು ಜೀವದಿಂದಿರುವಾಗ ಎಂದಿಗೂ ಜಾರಿಗೆ ಬರುವುದಿಲ್ಲ.
18 Հետեւաբար առաջին ուխտն ալ չէր կրնար հաստատուիլ՝՝ առանց արիւնի.
೧೮ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.
19 քանի որ երբ Մովսէս ամբողջ ժողովուրդին հաղորդեց Օրէնքին բոլոր պատուէրները, ցուլերուն եւ նոխազներուն արիւնը առաւ ու նոյնինքն Գիրքին եւ ամբողջ ժողովուրդին վրայ սրսկեց՝ ջուրով, որդան կարմիր բուրդով ու զոպայով,
೧೯ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.
20 եւ ըսաւ. «Ա՛յս է արիւնը այն ուխտին՝ որ Աստուած հրահանգեց ձեզի»:
೨೦“ಇದು ದೇವರು ನಿಮಗೋಸ್ಕರ ಆಜ್ಞಾಪಿಸಿದ ಒಡಂಬಡಿಕೆಯ ರಕ್ತವಾಗಿದೆ” ಎಂದು ಹೇಳಿದನು.
21 Ու խորանին վրայ, եւ պաշտօնին բոլոր առարկաներուն վրայ նոյնպէս սրսկեց արիւնը:
೨೧ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.
22 Օրէնքին համաձայն՝ գրեթէ ամէն բան կը մաքրուի արիւնով. եւ առանց արիւն թափելու՝ ներում չ՚ըլլար:
೨೨ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.
23 Ուրեմն հարկ էր որ երկնային բաներուն օրինակները մաքրուէին ասոնցմով, իսկ նոյնինքն երկնաւորները՝ ասոնցմէ լաւագոյն զոհերով:
೨೩ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.
24 Քանի որ Քրիստոս մտաւ ո՛չ թէ ձեռակերտ սրբարանը, որ ճշմարիտին կրկնատիպն էր, հապա նոյնինքն երկինքը, որպէսզի հիմա Աստուծոյ առջեւ երեւնայ մեզի համար.
೨೪ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.
25 ո՛չ ալ մտաւ՝ ինքզինք յաճախ իբր զոհ մատուցանելու համար, ինչպէս քահանայապետը՝ որ ամէն տարի սրբարանը կը մտնէ ուրիշին արիւնով.
೨೫ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.
26 այլապէս, պէտք էր որ յաճախ չարչարուէր՝ աշխարհի հիմնադրութենէն ի վեր: Բայց հիմա, դարերու վախճանին, մէ՛կ անգամ երեւցաւ՝ ջնջելու համար մեղքը ինքզինք զոհելով: (aiōn g165)
೨೬ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. (aiōn g165)
27 Եւ ինչպէս մարդոց վերապահուած է մէ՛կ անգամ մեռնիլ, իսկ անկէ ետք՝ դատաստանը,
೨೭ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,
28 նոյնպէս ալ Քրիստոս մէ՛կ անգամ իբր զոհ մատուցանուեցաւ՝ քաւելու համար շատերու մեղքերը, ու երկրորդ անգամ պիտի երեւնայ՝ առանց մեղքի, փրկելու համար անոնք՝ որ կը սպասեն իրեն:
೨೮ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

< ԵԲՐԱՅԵՑԻՍ 9 >