< ՄԱՐԿՈՍ 8 >

1 Այդ օրերը, բազմութիւնը յոյժ շատ ըլլալով եւ ուտելու ոչինչ ունենալով, Յիսուս իրեն կանչեց իր աշակերտները ու ըսաւ անոնց.
ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,
2 «Կը գթամ այդ բազմութեան վրայ, որովհետեւ արդէն երեք օր է՝ որ քովս են, եւ ոչինչ ունին ուտելու:
“ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.
3 Եթէ անօթի ուղարկեմ զանոնք իրենց տուները՝ պիտի պարտասին ճամբան, որովհետեւ ատոնցմէ ոմանք հեռաւոր տեղէ եկած են»:
ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ” ಎಂದು ಅವರಿಗೆ ಹೇಳಿದನು.
4 Իր աշակերտները պատասխանեցին իրեն. «Այս անապատին մէջ ուրկէ՞ կրնայ մէկը հացով կշտացնել ատոնք»:
ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.
5 Հարցուց անոնց. «Քանի՞ նկանակ ունիք»: Անոնք ըսին. «Եօթը»:
ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು.
6 Հրամայեց բազմութեան՝ որ նստի գետինին վրայ. եւ առաւ եօթը նկանակները, շնորհակալ եղաւ, կտրեց ու տուաւ աշակերտներուն, որպէսզի հրամցնեն բազմութեան. եւ հրամցուցին:
ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
7 Քանի մը մանր ձուկ ալ ունէին: Օրհնեց ու ըսաւ՝ որ զանոնք ալ հրամցնեն անոնց:
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.
8 Կերան, կշտացան, եւ աւելցած բեկորներէն եօթը զամբիւղ վերցուցին:
ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.
9 Ուտողները չորս հազարի չափ էին: Արձակեց զանոնք,
ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.
10 եւ իսկոյն նաւ մտնելով՝ աշակերտներուն հետ գնաց Դաղմանութայի կողմերը:
೧೦ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು.
11 Փարիսեցիները ելլելով՝ սկսան անոր հետ վիճաբանիլ, ու զայն փորձելով՝ կը խնդրէին իրմէ նշան մը երկինքէն:
೧೧ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
12 Ան ալ իր հոգիին մէջ հառաչելով՝ ըսաւ. «Ինչո՞ւ այս սերունդը նշան կը խնդրէ: Ճշմա՛րտապէս կը յայտարարեմ ձեզի թէ այս սերունդին նշան պիտի չտրուի»:
೧೨ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.
13 Եւ զանոնք թողուց, դարձեալ նաւ մտաւ ու գնաց ծովուն միւս եզերքը:
೧೩ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.
14 Հաց առնել մոռցած էին. բայց նաւուն մէջ իրենց հետ միայն մէկ նկանակ ունէին:
೧೪ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
15 Պատուիրեց անոնց ու ըսաւ. «Ուշադի՛ր եղէք, զգուշացէ՛ք Փարիսեցիներու խմորէն ու Հերովդէսի խմորէն»:
೧೫ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
16 Իսկ անոնք իրարու հետ կը մտածէին եւ կ՚ըսէին. «Որովհետեւ հաց չունինք»:
೧೬ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.
17 Յիսուս գիտնալով անոնց մտածումը՝ ըսաւ անոնց. «Ինչո՞ւ կը մտածէք թէ հաց չունիք. տակաւին չէ՞ք ըմբռներ ու չէ՞ք հասկնար. տակաւին ձեր սիրտը կարծրացա՞ծ է:
೧೭ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
18 Աչքեր ունիք եւ չէ՞ք տեսներ, ականջներ ունիք ու չէ՞ք լսեր, եւ չէ՞ք յիշեր:
೧೮ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?
19 Երբ հինգ նկանակները կտրեցի հինգ հազարին, բեկորներով լեցուն քանի՞ կողով վերցուցիք»: Ըսին անոր. «Տասներկու»:
೧೯ನಾನುಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.
20 «Ու երբ եօթը նկանակները կտրեցի չորս հազարին, բեկորներով լեցուն քանի՞ զամբիւղ վերցուցիք»: Անոնք ալ ըսին. «Եօթը»:
೨೦“ಮತ್ತುಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.
21 Եւ ըսաւ անոնց. «Հապա ի՞նչպէս չէք հասկնար»:
೨೧ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.
22 Երբ գնաց Բեթսայիդա՝ կոյր մը բերին անոր առջեւ, ու կ՚աղաչէին իրեն՝ որ դպչի անոր:
೨೨ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
23 Ան ալ՝ բռնելով կոյրին ձեռքէն՝ դուրս տարաւ գիւղէն, եւ թքնելով անոր աչքերուն՝ դրաւ ձեռքը անոր վրայ, ու հարցուց անոր թէ կը տեսնէ՛ բան մը:
೨೩ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
24 Ան ալ նայեցաւ եւ ըսաւ. «Կը տեսնեմ մարդիկ՝ ծառերու պէս, որ կը քալեն»:
೨೪ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು.
25 Դարձեալ դրաւ ձեռքը անոր աչքերուն վրայ ու նայիլ տուաւ անոր. եւ առողջացաւ, ու յստակօրէն կը տեսնէր բոլորը:
೨೫ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
26 Յետոյ՝ ղրկելով զայն իր տունը՝ ըսաւ. «Մի՛ մտներ գիւղը, ո՛չ ալ մէկու մը ըսէ գիւղին մէջ»:
೨೬ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.
27 Յիսուս գնաց Փիլիպպոսի Կեսարիային գիւղերը՝ իր աշակերտներուն հետ: Ճամբան հարցուց իր աշակերտներուն. «Մարդիկ ինծի համար ի՞նչ կ՚ըսեն, ո՞վ եմ»:
೨೭ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು.
28 Անոնք պատասխանեցին. «Ոմանք՝ Յովհաննէս Մկրտիչը, ուրիշներ՝ Եղիան, ուրիշներ ալ՝ մարգարէներէն մէկը»:
೨೮ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.
29 Եւ ինք ըսաւ անոնց. «Իսկ դո՛ւք ինծի համար ի՞նչ կ՚ըսէք, ո՞վ եմ»: Պետրոս պատասխանեց անոր. «Դուն Քրիստո՛սն ես»:
೨೯ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
30 Սաստիկ հրահանգեց անոնց՝ որ ո՛չ մէկուն խօսին իր մասին:
೩೦ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು.
31 Ապա սկսաւ սորվեցնել անոնց. «Պէտք է որ մարդու Որդին շատ չարչարանքներ կրէ, մերժուի երէցներէն, քահանայապետներէն եւ դպիրներէն, սպաննուի, ու երեք օրէն ետք յարութիւն առնէ»:
೩೧ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
32 Այս խօսքը ըսաւ բացորոշապէս: Ուստի Պետրոս մէկդի առաւ զինք եւ սկսաւ յանդիմանել:
೩೨ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.
33 Իսկ ինք դարձաւ, իր աշակերտներուն նայելով՝ յանդիմանեց Պետրոսը եւ ըսաւ. «Ետե՛ւս գնա, Սատանա՛յ, որովհետեւ դուն ո՛չ թէ Աստուծոյ բաները կը մտածես, հապա՝ մարդոց բաները»:
೩೩ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
34 Երբ իրեն կանչեց բազմութիւնը՝ իր աշակերտներուն հետ, ըսաւ անոնց. «Ո՛վ որ ուզէ գալ իմ ետեւէս, թող ուրանայ ինքզինք, վերցնէ իր խաչը, ու հետեւի ինծի:
೩೪ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
35 Որովհետեւ ո՛վ որ ուզէ փրկել իր անձը՝ պիտի կորսնցնէ զայն, իսկ ո՛վ որ կորսնցնէ իր անձը՝ ինծի ու աւետարանին համար, պիտի փրկէ զայն:
೩೫ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
36 Քանի որ ի՞նչ օգուտ է մարդուն՝ որ շահի ամբողջ աշխարհը, բայց կորսնցնէ իր անձը.
೩೬ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
37 կամ՝ մարդ ի՞նչ փրկանք պիտի տայ իր անձին փոխարէն:
೩೭ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?
38 Որովհետեւ ո՛վ որ ամօթ սեպէ զիս եւ իմ խօսքերս դաւանիլը՝ այս շնացող ու մեղաւոր սերունդին մէջ, մարդու Որդին ալ ամօթ պիտի սեպէ զայն դաւանիլը՝ երբ գայ իր Հօր փառքով սուրբ հրեշտակներուն հետ»:
೩೮ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

< ՄԱՐԿՈՍ 8 >