< 2 Saloniklilərə 3 >

1 Nəhayət, qardaşlar, bizim üçün dua edin ki, Rəbbin kəlamı aranızda olduğu kimi sürətlə yayılıb izzət qazansın,
ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,
2 pis və şər adamlardan xilas olaq. Çünki iman hamıya məxsus deyil.
ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.
3 Amma Rəbb etibarlıdır. O sizi möhkəmləndirib şər olandan qoruyacaq.
ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.
4 Biz də Rəbbə güvənərək sizdən arxayınıq ki, verdiyimiz əmrlərə əməl edirsiniz və edəcəksiniz.
ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.
5 Qoy Rəbb ürəklərinizi Allahın məhəbbətinə və Məsihin dözümünə yönəltsin.
ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
6 Ey qardaşlar, Rəbbimiz İsa Məsihin adı ilə sizə əmr veririk ki, bizdən qəbul etdiyi təlimə görə yaşamayan, avara həyat sürən hər bir bacı-qardaşdan uzaqlaşın.
ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
7 Bizlərdən necə nümunə götürmək lazım olduğunu özünüz də bilirsiniz. Çünki yanınızda olarkən avara dolanmadıq,
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
8 heç kimin çörəyini müftə yemədik. Əksinə, gecə-gündüz əmək və zəhmət çəkərək işlədik ki, heç birinizə yük olmayaq.
ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
9 Bunu ixtiyarımız çatmadığına görə deyil, sizə nümunəvi yol göstərərək bu yolla getməyiniz üçün etdik.
ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.
10 Hətta biz sizinlə olarkən sizə bu əmri verdik: kim işləmək istəmirsə, yemək də yeməsin.
೧೦ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
11 Eşitmişik ki, sizlərdən bəzisi avara həyat sürür; heç bir iş görmədikləri halda hər şeyə qarışırlar.
೧೧ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.
12 Belələrinə Rəbb İsa Məsih naminə əmr verib xəbərdarlıq edirik ki, sakitcə işləyib öz çörəklərini yesinlər.
೧೨ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
13 Sizsə, qardaşlar, yaxşılıq etməkdən yorulmayın.
೧೩ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
14 Əgər kimsə bu məktubdakı sözlərimizə qulaq asmaq istəməzsə, onu nəzərdə saxlayın və onunla əlaqəni kəsin ki, utansın.
೧೪ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
15 Yenə də onu düşmən sanmayın, bir qardaş kimi ona nəsihət verin.
೧೫ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.
16 Sülh qaynağı olan Rəbbin Özü isə sizə hər zaman və hər vəziyyətdə sülh versin! Rəbb hamınıza yar olsun!
೧೬ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
17 Mən Paul salamı sizə öz əlimlə yazıram. Bunu hər məktubumda xüsusi bir işarə kimi yazıram.
೧೭ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.
18 Rəbbimiz İsa Məsihin lütfü hamınıza yar olsun!
೧೮ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.

< 2 Saloniklilərə 3 >