< প্রথম রাজাবলি 5 >

1 সোরের রাজা হীরম যখন শুনলেন যে, শলোমনকে তাঁর বাবার জায়গায় রাজপদে অভিষেক করা হয়েছে তখন তাঁর দাসদের তিনি শলোমনের কাছে পাঠালেন, কারণ দায়ূদের সঙ্গে হীরমের সব দিন ই বন্ধুত্বের সম্পর্ক ছিল।
ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.
2 শলোমন হীরমকে বলে পাঠালেন,
ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ,
3 “আমার বাবা দায়ূদের বিরুদ্ধে চারদিক থেকে যুদ্ধ হয়েছিল, তাই যতদিন সদাপ্রভু তাঁর শত্রুদের তাঁর পায়ের তলায় না আনলেন ততদিন তিনি তাঁর ঈশ্বর সদাপ্রভুর নামে কোনো উপাসনা ঘর তৈরী করতে পারেন নি। আপনি তো এই সব কথা জানেন।
“ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.
4 কিন্তু এখন আমার ঈশ্বর সদাপ্রভু সব দিক থেকেই আমাকে বিশ্রাম দিয়েছেন। এখন আমার কোনো শত্রু নেই এবং কোনো দুর্ঘটনাও ঘটেনি।
ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.
5 সেইজন্য আমি আমার ঈশ্বর সদাপ্রভুর উদ্দেশ্যে একটা উপাসনা ঘর তৈরী করতে চাই। যেমন সদাপ্রভু আমার বাবা দায়ূদকে বলেছিলেন, ‘তোমার যে ছেলেকে আমি সিংহাসনে তোমার জায়গায় বসাব সেই আমার উদ্দেশ্যে উপাসনা ঘর তৈরী করবে।’
ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,
6 কাজেই আপনি হুকুম করুন যাতে আমার জন্য লিবানোন দেশের এরস গাছ কাটা হয়। অবশ্য আমার লোকেরা আপনার লোকদের সঙ্গে থাকবে এবং আপনি যে মজুরী ঠিক করে দেবেন আমি সেই মজুরিই আপনার লোকদের দেব। আপনার তো জানা আছে যে, গাছ কাটবার জন্য সীদোনীয়দের মত পাকা লোক আমাদের মধ্যে কেউ নেই।”
ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.
7 শলোমনের কাছ থেকে এই খবর পেয়ে হীরম খুব খুশী হয়ে বললেন, “আজ সদাপ্রভুর গৌরব হোক, কারণ এই মহান জাতির উপরে রাজত্ব করবার জন্য দায়ূদকে তিনি এমন একটি জ্ঞানী ছেলে দান করেছেন।”
ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.
8 হীরম শলোমনকে এই খবর পাঠালেন, “আপনার পাঠানো খবর আমি পেয়েছি। এরস ও দেবদারু কাঠের ব্যাপারে আপনার সব ইচ্ছাই আমি পূর্ণ করব।
ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.
9 আমার লোকেরা সেগুলো লিবানোন থেকে নামিয়ে সমুদ্রে আনবে। তারপর আমি সেগুলো দিয়ে ভেলা তৈরী করে সমুদ্রে ভাসিয়ে আপনার নির্দিষ্ট করা জায়গায় পাঠিয়ে দেব। সেখানে তারা সেগুলো খুলে ফেলবে আর তখন আপনি সেগুলো নিয়ে যেতে পারবেন। আমার রাজবাড়ীর লোকদের জন্য খাবার দেওয়ার মাধ্যমে আপনি আমার ইচ্ছা পূরণ করবেন।”
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.
10 ১০ ফলে হীরম শলোমনের চাহিদামত সমস্ত এরস ও দেবদারু কাঠ দিতে লাগলেন,
೧೦ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.
11 ১১ আর শলোমন হীরমকে তাঁর রাজবাড়ীর লোকদের খাবারের জন্য তিন হাজার ছশো টন গম ও চার হাজার আটশো লিটার খাঁটি তেল দিলেন। শলোমন বছরের পর বছর তা দিতে থাকলেন।
೧೧ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.
12 ১২ সদাপ্রভু তাঁর প্রতিজ্ঞা অনুসারে শলোমনকে জ্ঞান দিলেন। হীরম ও শলোমনের মধ্যে শান্তির সম্বন্ধ ছিল এবং তাঁরা দুজনে একটা চুক্তি করলেন।
೧೨ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು.
13 ১৩ রাজা শলোমন সমস্ত ইস্রায়েল থেকে ত্রিশ হাজার লোককে কাজ করতে বাধ্য করলেন।
೧೩ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.
14 ১৪ প্রতি মাসে পালা পালা করে তাদের মধ্য থেকে তিনি দশ হাজার লোককে লেবাননে পাঠাতেন। তারা একমাস লেবাননে থাকত আর দু মাস থাকত নিজের বাড়িতে। তাদের এই কাজের দেখাশোনার ভার ছিল অদোনীরামের উপর।
೧೪ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.
15 ১৫ শলোমনের অধীনে ছিল সত্তর হাজার ভারবহনকারী লোক ও পাহাড়ে পাথর কাটবার জন্য আশি হাজার লোক।
೧೫ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.
16 ১৬ তাদের কাজের দেখাশোনা করবার জন্য তিন হাজার তিনশো কর্মচারী ছিল।
೧೬ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.
17 ১৭ উপাসনা ঘরের ভিত্তি গাঁথবার জন্য তারা রাজার আদেশে খাদ থেকে বড় বড় দামী পাথর কেটে তুলে আনত।
೧೭ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.
18 ১৮ শলোমন ও হীরমের মিস্ত্রিরা ও গিব্লীয়েরা সেই পাথরগুলো সুন্দর করে কেটে উপাসনা ঘরটি তৈরী করবার জন্য কাঠ ও পাথর তৈরী করল।
೧೮ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.

< প্রথম রাজাবলি 5 >