< শমূয়েলের প্রথম বই 13 >

1 শৌল ত্রিশ বছর বয়সে রাজা হন৷ দুই বছর ইস্রায়েলের উপরে রাজত্ব করার পর
ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು.
2 শৌল নিজেদের জন্য ইস্রায়েলের মধ্যে তিন হাজার জন লোক নির্বাচন করলেন; তার মধ্যে দুহাজার মিকমসে ও বৈথেল পর্বতে শৌলের সঙ্গে থাকল এবং এক হাজার বিন্যামীন প্রদেশের গিবিয়াতে যোনাথনের সঙ্গে থাকল; আর অন্য সব লোককে তিনি নিজেদের তাঁবুতে পাঠিয়ে দিলেন৷
ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.
3 পরে যোনাথন গেবাতে থাকা পলেষ্টীয়দের পাহারাদার সৈন্যদলকে আঘাত করলেন ও পলেষ্টীয়েরা তা শুনল; তখন শৌল দেশের সব জায়গায় তূরী বাজিয়ে বললেন, “ইব্রীয়েরা শুনুক৷”
ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.
4 তখন সমস্ত ইস্রায়েল এই কথা শুনল যে, শৌল পলেষ্টীয়দের সেই পাহারাদার সৈন্যদলকে আঘাত করেছেন, আর ইস্রায়েলের জন্য পলেষ্টীয়দের তীব্র ঘৃণা জন্মেছে৷ পরে লোকেরা শৌলের সঙ্গে গিলগলে যোগ দিল৷
ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.
5 পরে পলেষ্টীয়েরা ইস্রায়েলের সঙ্গে যুদ্ধ করতে এল; ত্রিশ হাজার রথ, ছয় হাজার ঘোড়াচালক ও সমুদ্রতীরের বালির মতো অগুন্তি লোক আসল; তারা এসে বৈৎ-আবনের পূর্বদিকে মিকমসে শিবির তৈরী করল৷
ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.
6 তখন ইস্রায়েলের লোকেরা নিজেদেরকে বিপদের মধ্যে দেখল, কারণ লোকেরা পীড়িত হচ্ছিল; তখন লোকেরা গুহাতে, ঝোপে, শৈলে, উঁচু জায়গায় ও গর্তে লুকাল৷
ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.
7 আর কয়েকজন ইব্রীয় যর্দ্দন পার হয়ে গাদ ও গিলিয়দ দেশে গেল৷ কিন্তু তখনও শৌল গিলগলে ছিলেন এবং তাঁর পিছনে আসা লোকেরা সবাই কাঁপতে লাগল৷
ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.
8 পরে শৌল শমূয়েলের ঠিক করা দিন অনুসারে সাত দিন অপেক্ষা করলেন; কিন্তু শমূয়েল গিলগলে এলেন না এবং লোকেরা তাঁর কাছ থেকে ছড়িয়ে পড়তে লাগল৷
ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.
9 তাতে শৌল বললেন, “এই জায়গায় আমার কাছে হোমবলি ও মঙ্গলার্থক বলি আন৷” পরে তিনি হোমবলি উত্সর্গ করলেন৷
ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.
10 ১০ হোমবলি উত্সর্গ শেষ করার সঙ্গে সঙ্গেই শমূয়েল উপস্থিত হলেন; তাতে শৌল তাঁকে অভিবাদন করার জন্য তাঁর সঙ্গে দেখা করতে গেলেন৷
೧೦ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು
11 ১১ পরে শমূয়েল বললেন, “তুমি কি করলে?” শৌল বললেন, “আমি দেখলাম, লোকেরা আমার কাছ থেকে ছড়িয়ে পড়ছে এবং নির্ধারিত দিনের র মধ্যে আপনিও আসেন নি, আর পলেষ্টীয়েরা মিকমসে জড়ো হয়েছে;
೧೧ಸಮುವೇಲನು ಅವನನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಅವನು, “ಜನರು ಚದರಿಹೋಗುವುದನ್ನೂ, ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ, ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು.
12 ১২ তাই আমি মনে মনে বললাম, ‘পলেষ্টীয়েরা এখনই আমার বিরুদ্ধে গিলগলে নেমে আসবে,’ আর আমি সদাপ্রভুর দয়া চাই নি; তাই ইচ্ছা না থাকলেও আমি হোমবলি উত্সর্গ করলাম৷”
೧೨ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.
13 ১৩ শমূয়েল শৌলকে বললেন, “তুমি বোকার মত কাজ করেছ; তোমার ঈশ্বর সদাপ্রভু তোমাকে যে আদেশ দিয়েছেন, তা মেনে চলনি; মানলে সদাপ্রভু এখন ইস্রায়েলের উপরে তোমার রাজত্ব চিরকাল স্থায়ী করতেন৷
೧೩ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.
14 ১৪ কিন্তু এখন তোমার রাজত্ব স্থির থাকবে না; সদাপ্রভু নিজের মনের মত এক জনকে বেছে নিয়ে তাকেই নিজের প্রজাদের শাসনকর্ত্তার পদে নিযুক্ত করেছেন; কারণ সদাপ্রভু তোমাকে যা আদেশ করেছিলেন, তুমি তা পালন করনি৷”
೧೪ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.
15 ১৫ পরে শমূয়েল উঠে গিলগল থেকে বিন্যামীনের গিবিয়াতে চলে গেলেন; তখন শৌল নিজের কাছের বর্তমান লোকদেরকে গণনা করলেন, তারা অনুমান ছশো জন৷
೧೫ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು.
16 ১৬ শৌল তাঁর ছেলে যোনাথন ও তাদের কাছের বর্তমান লোকেরা বিন্যামীনের গেবাতে থাকলেন এবং পলেষ্টীয়েরা মিকমসে শিবির তৈরী করে থাকলো৷
೧೬ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರು ನೂರು ಪುರುಷರಿದ್ದರು. ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.
17 ১৭ পরে পলেষ্টীয়দের শিবির থেকে তিনদল বিনাশকারী সৈন্য বেরিয়ে এল, তার একদল অফ্রার রাস্তা দিয়ে শূয়াল প্রদেশে গেল৷
೧೭ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‌ ನಾಡಿಗೂ,
18 ১৮ আর একদল বৈৎ-হোরোণের পথের দিকে ফিরল এবং আর একদল মরুপ্রান্তের দিকে সিবোয়িম উপত্যকার দিকে সীমানার পথ দিয়ে গেল৷
೧೮ಇನ್ನೊಂದು ಗುಂಪು ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.
19 ১৯ ঐ দিনের সমস্ত ইস্রায়েল দেশে কামার পাওয়া যেত না; কারণ পলেষ্টীয়েরা বলত, “যদি ইব্রীয়েরা নিজেদের জন্য তরোয়াল কি বর্শা তৈরী করে৷”
೧೯ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
20 ২০ এই জন্য নিজেদের হলমুখ বা ফাল বা কুড়ুল বা কোদাল ধার দেবার জন্য ইস্রায়েলের সব লোককে পলেষ্টীয়দের কাছে নেমে আসতে হত৷
೨೦ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.
21 ২১ সুতরাং সকলের কোদাল, (তিন ভাগের দুই ভাগ সেকল) ফাল (4 গ্রাম রৌপ্য মুদ্রা) বিদা, কুড়ুলের ধার এবং রাখালের লাঠির কাঁটা ভোঁতা ছিল;
೨೧ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು.
22 ২২ আর যুদ্ধের দিনের শৌলের ও যোনাথনের সঙ্গী লোকদের কারও হাতে তরোয়াল বা বর্শা পাওয়া গেল না, শুধুমাত্র শৌলের ও তাঁর ছেলে যোনাথনের হাতে পাওয়া গেল৷
೨೨ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.
23 ২৩ পরে পলেষ্টীয়দের পাহারাদার সৈন্যদল বেরিয়ে এসে মিকমসের গিরিপথে এল
೨೩ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.

< শমূয়েলের প্রথম বই 13 >