< শমূয়েলের দ্বিতীয় বই 9 >

1 পরে দায়ূদ বললেন, “আমি যোনাথনের জন্য যার প্রতি দয়া করতে পারি, এমন কেউ কি শৌলের বংশে অবশিষ্ট আছে?”
ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,
2 সীবঃ নামে শৌলের বংশে এক দাস ছিল, তাকে দায়ূদের কাছে ডাকা হলে রাজা তাকে বললেন, “তুমি কি সীবঃ?” সে বলল, “হ্যাঁ আমিই সেই দাস৷”
ಅದಕ್ಕೆ ಅವರು ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, “ನೀನು ಚೀಬನೋ?” ಎಂದು ಕೇಳಲು ಅವನು, “ನಿನ್ನ ಸೇವಕನಾದ ನಾನು ಚೀಬನೆ” ಎಂದು ಉತ್ತರ ಕೊಟ್ಟನು.
3 রাজা বললেন, “আমি যার প্রতি ঈশ্বরের দয়া দেখাতে পারি, শৌলের বংশে এমন কেউই কি অবশিষ্ট নেই?” সীবঃ রাজাকে বলল, “যোনাথানের এক ছেলে এখনও অবশিষ্ট আছেন, তাঁর পা খোঁড়া৷”
ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು.
4 রাজা বললেন, “সে কোথায়?” সীবঃ রাজাকে বলল, “দেখুন, তিনি লো-দবারে অম্মীয়েলের ছেলে মাখীরের বাড়িতে আছেন৷”
ಅರಸನು, “ಅವನು ಎಲ್ಲಿರುತ್ತಾನೆ?” ಎಂದು ಅವನನ್ನು ಕೇಳಲು ಚೀಬನು, “ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
5 পরে দায়ূদ রাজা লো-দবারে লোক পাঠিয়ে অম্মীয়েলের ছেলে মাখীরের বাড়ি থেকে তাঁকে আনলেন৷
ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.
6 তখন শৌলের নাতি যোনাথনের ছেলে মফীবোশৎ দায়ূদের কাছে এসে উপুড় হয়ে পড়ে প্রণাম করলেন৷ তখন দায়ূদ বললেন, “মফীবোশৎ৷” তিনি উত্তর দিলেন, “দেখুন, এই আপনার দাস৷”
ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.
7 দায়ূদ তাঁকে বললেন, “ভয় করো না, আমি তোমার বাবা যোনাথনের জন্য অবশ্যই তোমার প্রতি দয়া করব, আমি তোমার দাদু শৌলের সমস্ত জমি তোমাকে ফিরিয়ে দেব, আর তুমি রোজ আমার টেবিলে আহার করবে৷”
ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.
8 তাতে তিনি প্রণাম করে বললেন, “আপনার এই দাস কে যে, আপনি আমার মত মরা কুকুরের প্রতি চোখ তুলে দেখছেন?”
ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?” ಎಂದು ಹೇಳಿದನು.
9 পরে রাজা শৌলের চাকর সীবঃকে ডেকে বললেন, “আমি তোমার মনিবের ছেলেকে শৌলের ও তাঁর সমস্ত বংশের সব কিছু দিলাম৷
ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನನಾದ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ.
10 ১০ আর তুমি, তোমার ছেলেরা ও দাসেরা তাঁর জন্য জমিতে লাঙ্গল দেবে এবং তোমার মনিবের ছেলের খাদ্যের জন্য উত্পন্ন শস্য এনে দেবে; কিন্তু তোমার মনিবের ছেলে মহীবোশৎ রোজ আমার টেবিলে আহার করবেন৷” ঐ সীবের পনেরটা ছেলে ও কুড়িটা দাস ছিল৷
೧೦ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಆಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಅಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಆದರೆ ಮೆಫೀಬೋಶೆತ್ತಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು.
11 ১১ তখন সীবঃ রাজাকে বলল, “আমার প্রভু মহারাজ নিজের দাসকে যে আদেশ করলেন, সেই অনুসারে আপনার এই দাস সব কিছুই করবে৷” আর মফীবোশৎ রাজার ছেলেদের এক জনের মত রাজার টেবিলে আহার করতে লাগলেন৷
೧೧ಚೀಬನು ಅರಸನಿಗೆ, “ಒಡೆಯನಾದ ಅರಸನ ಅಪ್ಪಣೆಯಂತೆ ನಿನ್ನ ಸೇವಕನು ನಡೆಯುವನು” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು.
12 ১২ মফীবোশতের মীখা নামে একটি ছোট ছেলে ছিল৷ আর সীবের ঘরে বাসকারী সব লোক মফীবোশতের দাস ছিল৷
೧೨ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯವರೆಲ್ಲರೂ, ಅವನ ಸೇವಕರಾದರು.
13 ১৩ মফীবোশৎ যিরূশালেমে বাস করলেন, কারণ তিনি রোজ রাজার টেবিলে আহার করতেন, তিনি দু পায়েই খোঁড়া ছিলেন৷
೧೩ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದರಿಂದ ಅವನು ಯೆರೂಸಲೇಮಿನಲ್ಲೇ ವಾಸಮಾಡಿದನು. ಅವನ ಎರಡು ಕಾಲುಗಳು ಕುಂಟಾಗಿದ್ದವು.

< শমূয়েলের দ্বিতীয় বই 9 >