< ইফিষীয় 5 >

1 অতএব প্রিয় শিশুদের মত তোমরা ঈশ্বরের অনুকারী হও।
ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.
2 আর প্রেমে চল, যেমন খ্রীষ্টও তোমাদেরকে প্রেম করলেন এবং আমাদের জন্য ঈশ্বরের উদ্দেশ্যে, সৌরভের জন্য, উপহার ও বলিরূপে নিজেকে বলিদান দিলেন।
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
3 কিন্তু বেশ্যাগমনের ও সব প্রকার অপবিত্রতা বা লোভের নামও যেন তোমাদের মধ্যে না হয়, যেমন পবিত্রদের উপযুক্ত।
ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
4 আর খারাপ ব্যবহার এবং প্রলাপ কিম্বা ঠাট্টা তামাশা, এই সকল অশ্লীলতা ব্যবহার যেন না হয়, বরং যেন ধন্যবাদ দেওয়া হয়।
ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
5 কারণ তোমরা অবশ্যই জানো, বেশ্যাগামী কি অশুচি কি লোভী সে তো প্রতিমা পূজারী কেউই খ্রীষ্টের ও ঈশ্বরের রাজ্যে অধিকার পায় না।
ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
6 অযথা কথা দিয়ে কেউ যেন তোমাদেরকে না ভুলায়; কারণ এই সকল দোষের কারণে অবাধ্যতার সন্তানদের উপরে ঈশ্বরের ক্রোধ আসে।
ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
7 অতএব তাদের সহভাগী হয়ো না;
ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.
8 কারণ তোমরা একদিনের অন্ধকার ছিলে, কিন্তু এখন প্রভুতে আলোকিত হয়েছ; আলোর সন্তানদের মত চল
ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.
9 কারণ সব রকম মঙ্গলভাবে, ধার্ম্মিকতায় ও সত্যে আলোর ফল হয়
ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
10 ১০ প্রভুর সন্তোষজনক কি, তার পরীক্ষা কর।
೧೦ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.
11 ১১ আর অন্ধকারের ফলহীন কাজের ভাগী হয়ো না, বরং সেগুলির দোষ দেখিয়ে দাও।
೧೧ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.
12 ১২ কারণ ওরা গোপনে যে সব কাজ করে, তা উচ্চারণ করাও লজ্জার বিষয়।
೧೨ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.
13 ১৩ কিন্তু দোষ দেখিয়ে দেওয়া হলে সকলই আলোর দ্বারা প্রকাশ হয়ে পড়ে; সাধারণত যা প্রকাশ হয়ে পড়ে, তা সবই আলোকিত।
೧೩ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.
14 ১৪ এই জন্য পবিত্র শাস্ত্রে লেখা আছে, “হে ঘুমন্ত ব্যক্তি, জেগে ওঠ এবং মৃতদের ভিতর থেকে উঠ, তাতে খ্রীষ্ট তোমার উপরে আলোক উজ্জ্বল করবেন।”
೧೪ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.
15 ১৫ অতএব তোমরা ভালো করে দেখ, কিভাবে চলছ; অজ্ঞানের মতো না চলে জ্ঞানীদের মতো চল।
೧೫ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.
16 ১৬ সুযোগ কিনে নাও, কারণ এই দিন খারাপ।
೧೬ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
17 ১৭ এই কারণ বোকা হয়ো না, কিন্তু প্রভুর ইচ্ছা কি, তা বোঝো।
೧೭ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
18 ১৮ আর দ্রাক্ষারসে মাতাল হয়ো না, তাতে সর্বনাশ আছে; কিন্তু পবিত্র আত্মাতে পরিপূর্ণ হও;
೧೮ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
19 ১৯ গীত, স্তোত্র ও আত্মিক সঙ্কীর্ত্তনে একে অপরে কথা বল; নিজ নিজ হৃদয়ে প্রভুর উদ্দেশ্যে গান ও বাজনা কর;
೧೯ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
20 ২০ সবদিন সব বিষয়ের জন্য আমাদের প্রভু যীশু খ্রীষ্টের নামে পিতা ঈশ্বরের ধন্যবাদ কর;
೨೦ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
21 ২১ খ্রীষ্টের ভয়ে একজন অন্য জনের বাধ্য হও।
೨೧ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
22 ২২ নারীরা, তোমরা যেমন প্রভুর, তেমনি নিজ নিজ স্বামীর বাধ্য হও।
೨೨ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
23 ২৩ কারণ স্বামী স্ত্রীর মস্তক, যেমন খ্রীষ্টও মণ্ডলীর মস্তক; তিনি আবার দেহের উদ্ধারকর্তা;
೨೩ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
24 ২৪ কিন্তু মণ্ডলী যেমন খ্রীষ্টের বাধ্য, তেমনি নারীরা সব বিষয়ে নিজের নিজের স্বামীর বাধ্য হোক।
೨೪ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
25 ২৫ স্বামীরা, তোমরা নিজের নিজের স্ত্রীকে সেই মত ভালবাসো, যেমন খ্রীষ্টও মণ্ডলীকে ভালবাসলেন, আর তার জন্য নিজেকে দান করলেন;
೨೫ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
26 ২৬ যেন তিনি জল স্নান দ্বারা বাক্যে তাকে শুচি করে পবিত্র করেন,
೨೬ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
27 ২৭ যেন নিজে নিজের কাছে মণ্ডলীকে মহিমাময় অবস্থায় উপস্থিত করেন, যেন তার কলঙ্ক বা সঙ্কোচ বা এই রকম আর কোন কিছুই না থাকে, বরং সে যেন পবিত্র ও নিন্দা হীন হয়।
೨೭ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.
28 ২৮ এই রকম স্বামীরাও নিজ নিজ স্ত্রীকে নিজ নিজ শরীরের মত ভালবাসতে বাধ্য। নিজের স্ত্রীকে যে ভালবাসে, সে নিজেকেই ভালবাসে।
೨೮ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
29 ২৯ কেউ ত কখনও নিজ দেহের প্রতি ঘৃণা করে নি, বরং সবাই তার ভরণ পোষণ ও লালন পালন করে; যেমন খ্রীষ্টও মণ্ডলীকে করছেন;
೨೯ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.
30 ৩০ কারণ আমরা তাঁর দেহের অঙ্গ।
೩೦ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.
31 ৩১ “এই জন্য মানুষ নিজ পিতা মাতাকে ত্যাগ করে নিজ স্ত্রীতে আসক্ত হবে এবং সেই দুই জন এক দেহ হবে।”
೩೧“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.
32 ৩২ এই লুকানো সত্য মহৎ, কিন্তু আমি খ্রীষ্টের ও মণ্ডলীর উদ্দেশ্যে এটা বললাম।
೩೨ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.
33 ৩৩ তবুও তোমারও প্রত্যেকে নিজ নিজ স্ত্রীকে সেই রকম নিজের মত ভালবেস; কিন্তু স্ত্রীর উচিত যেন সে স্বামীকে ভয় করে।
೩೩ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

< ইফিষীয় 5 >