< আদিপুস্তক 32 >

1 আর যাকোব নিজের পথে এগিয়ে গেলে ঈশ্বরের দূতেরা তাঁর সঙ্গে দেখা করলেন।
ಅನಂತರ ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ, ದೇವದೂತರು ಅವನ ಎದುರಿಗೆ ಬಂದರು.
2 তখন যাকোব তাঁদেরকে দেখে বললেন, “এ ঈশ্বরের সেনাদল, তাই সেই জায়গার নাম মহনয়িম রাখলেন।”
ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೈನ್ಯ,” ಎಂದು ಹೇಳಿ, ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
3 তার পর যাকোব নিজের আগে সেয়ীর দেশের ইদোম অঞ্চলে তাঁর ভাই এষৌর কাছে দূতদেরকে পাঠালেন।
ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
4 তিনি তাদেরকে এই আজ্ঞা করলেন, “তোমরা আমার প্রভু এষৌকে বলবে, আপনার দাস যাকোব আপনাকে জানালেন, আমি লাবনের কাছে বাস করছিলাম, এ পর্যন্ত থেকেছি।
ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.
5 আমার গরু, গাধা, ভেড়ার পাল ও দাস দাসী আছে, আর আমি প্রভুর অনুগ্রহ দৃষ্টি পাবার জন্য আপনাকে খবর পাঠালাম।”
ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.
6 পরে দূতেরা যাকোবের কাছে ফিরে এসে বলল, “আমরা আপনার ভাই এষৌর কাছে গিয়েছিলাম; আর তিনি চারশো লোক সঙ্গে নিয়ে আপনার সঙ্গে দেখা করতে আসছেন।”
ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.
7 তখন যাকোব খুব ভয় পেলেন ও চিন্তিত হলেন, আর যে সব লোক তাঁর সঙ্গে ছিল, তাদেরকে ও গরু ও ভেড়ার দল সমস্ত পাল ও উটদেরকে বিভক্ত করে দুটি দল করলেন,
ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
8 বললেন, “এষৌ এসে যদিও এক দলকে আক্রমণ করেন, তবুও অন্য দল অবশিষ্ট থেকে রক্ষা পাবে।”
ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ದಾಳಿಮಾಡಿದರೆ, ಉಳಿದ ಗುಂಪು ತಪ್ಪಿಸಿಕೊಂಡು ಹೋಗಬಹುದು,” ಎಂದುಕೊಂಡನು.
9 তখন যাকোব বললেন, “হে আমার বাবা অব্রাহামের ঈশ্বর ও আমার বাবা ইসহাকের ঈশ্বর, তুমি সদাপ্রভু নিজে আমাকে বলেছিলে, তোমার দেশে আত্মীয়দের কাছে ফিরে যাও, তাতে আমি তোমার মঙ্গল করব।
ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,
10 ১০ তুমি এই দাসের প্রতি যে সমস্ত চুক্তির বিশ্বস্ততা ও যে সমস্ত সত্যাচরণ করেছ, আমি তার কিছুরই যোগ্য নই; কারণ আমি আমার এই লাঠিটি নিয়ে এই যর্দ্দন পার হয়েছিলাম, এখন দুই দল হয়েছি।
ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.
11 ১১ অনুরোধ করি, আমার ভাইয়ের হাত থেকে, এষৌর হাত থেকে আমাকে রক্ষা কর, কারণ আমি তাকে ভয় করি, যদি সে এসে আমাকে, ছেলেদের সঙ্গে মাকে হত্যা করে।
ನನ್ನ ಅಣ್ಣ ಏಸಾವನ ಕೈಯಿಂದ ನನ್ನನ್ನು ತಪ್ಪಿಸಿರಿ. ಏಕೆಂದರೆ ಅವನು ಬಂದು ನನ್ನನ್ನೂ, ಮಕ್ಕಳೊಂದಿಗೆ ತಾಯಂದಿರನ್ನೂ, ದಾಳಿಮಾಡುವನು ಎಂದು ನಾನು ಅವನಿಗೆ ಭಯಪಡುತ್ತೇನೆ.
12 ১২ তুমিই তো বলেছ, আমি অবশ্য তোমার মঙ্গল করব এবং সমুদ্রতীরে অবস্থিত যে বালি তার মতো তোমার বংশ বৃদ্ধি করব, যা গোনা যায় না।”
‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.
13 ১৩ পরে যাকোব সেই জায়গায় রাত কাটালেন ও তার কাছে যা ছিল, তার কিছু নিয়ে তাঁর ভাই এষৌর জন্য এই উপহার প্রস্তুত করলেন;
ಯಾಕೋಬನು ಆ ರಾತ್ರಿ ಅಲ್ಲೇ ಕಳೆದನು. ತಾನು ತಂದದ್ದರಲ್ಲಿ ಕೆಲವನ್ನು ಅವನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
14 ১৪ দুশো ছাগী ও কুড়িটা ছাগল, দুশো ভেড়ী ও কুড়িটা ভেড়া,
ಅವು ಯಾವುವೆಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು,
15 ১৫ বাচ্চা সহ দুগ্ধবতী ত্রিশটি উট, চল্লিশটি গরু ও দশটি ষাঁড় এবং কুড়িটি গাধী ও দশটি গাধা।
ಹಾಲು ಕೊಡುವ ಮೂವತ್ತು ಒಂಟೆಗಳು, ಅವುಗಳ ಮರಿಗಳು, ನಲವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಗಂಡುಕತ್ತೆಗಳು,
16 ১৬ পরে তিনি নিজের এক এক দাসের হাতে এক এক পাল সমর্পণ করে দাসদেরকে এই আদেশ দিলেন, “তোমরা আমার আগে পার হয়ে যাও এবং মাঝে মাঝে জায়গা রেখে প্রত্যেক পাল আলাদা কর।”
ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನೂ, ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ, ಅವರಿಗೆ, “ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳ ಬಿಡಿರಿ,” ಎಂದನು.
17 ১৭ পরে তিনি প্রথম দাসকে এই আদেশ দিলেন, “আমার ভাই এষৌর সঙ্গে তোমার দেখা হলে তিনি যখন জিজ্ঞাসা করবেন, তুমি কার দাস? কোথায় যাচ্ছ? আর তোমার আগে অবস্থিত এই সব কার?”
ಅವನು ಮೊದಲನೆಯವನಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಕಡೆಯವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವ ಇವೆಲ್ಲ ಯಾರವು?’ ಎಂದು ಕೇಳಿದರೆ,
18 ১৮ তখন তুমি উত্তর করবে, “এই সব আপনার দাস যাকোবের; তিনি উপহার হিসাবে এই সব আমার প্রভু এষৌর জন্য পাঠালেন;” আর দেখুন, তিনিও আমাদের পিছনে আসছেন।
ನೀನು ಅವನಿಗೆ, ‘ಇವು ನಿನ್ನ ದಾಸನಾದ ಯಾಕೋಬನವುಗಳೇ, ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲಾದ ಕಾಣಿಕೆ, ಅವನೂ ನಮ್ಮ ಹಿಂದೆ ಇದ್ದಾನೆ,’ ಎಂದು ಅವನಿಗೆ ಹೇಳಬೇಕು,” ಎಂದು ಆಜ್ಞಾಪಿಸಿದನು.
19 ১৯ পরে তিনি দ্বিতীয় ও তৃতীয় প্রভৃতি পালের পিছনে চলা দাস সবাইকেও আদেশ দিয়ে বললেন, “এষৌর সঙ্গে দেখা হলে তোমরা এই এই ধরনের কথা বল।
ಎರಡನೆಯವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂ, “ನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
20 ২০ আরো বল, দেখুন, আপনার দাস যাকোবও আমাদের পিছনে আসছেন।” কারণ তিনি বললেন, “আমি আগে উপহার পাঠিয়ে তাঁকে শান্ত করব, পরে তাঁর সঙ্গে দেখা করব, তাতে তিনি আমার প্রতি অনুগ্রহ করলেও করতে পারেন।”
ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.
21 ২১ তাই তাঁর আগে উপহারের জিনিস পার হয়ে গেল, কিন্তু নিজে সেই রাতে দলের মধ্যে থাকলেন।
ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಅಲ್ಲಿಯೇ ತಂಗಿದನು.
22 ২২ পরে তিনি রাতে উঠে নিজের দুই স্ত্রী, দুই দাসী ও এগারো জন ছেলেকে নিয়ে যব্বোক নদীর অগভীর অংশ দিয়ে পার হলেন
ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.
23 ২৩ তিনি তাঁদেরকে নদী পার করিয়ে নিজের সব জিনিস পাড়ে পাঠিয়ে দিলেন।
ಅವನು ಅವರನ್ನು ಕರೆದುಕೊಂಡು ಹೊಳೆ ದಂಡೆಯನ್ನು ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.
24 ২৪ আর যাকোব সেখানে একা থাকলেন এবং এক পুরুষ ভোর পর্যন্ত তাঁর সঙ্গে মল্লযুদ্ধ করলেন;
ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.
25 ২৫ কিন্তু তাঁকে জয় করতে পারলেন না দেখে, তিনি যাকোবের ঊরুসন্ধিতে আঘাত করলেন। তাঁর সঙ্গে এরকম মল্লযুদ্ধ করাতে যাকোবের ঊরুসন্ধির হাড় সরে গেল।
ಆ ಮನುಷ್ಯನು ಅವನನ್ನು ಜಯಿಸದೆ ಇರುವುದನ್ನು ಕಂಡು, ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಸಂಗಡ ಹೋರಾಡುತ್ತಿರುವಾಗಲೇ ಯಾಕೋಬನ ತೊಡೆಯ ಕೀಲು ತಪ್ಪಿತು.
26 ২৬ পরে সেই পুরুষ বললেন, “আমাকে ছাড়, কারণ ভোর হল।” যাকোব বললেন, “আপনি আমাকে আশীর্বাদ না করলে আপনাকে ছাড়ব না।”
ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.
27 ২৭ আবার তিনি বললেন, “তোমার নাম কি?” তিনি উত্তর করলেন, “যাকোব।”
ಆ ಮನುಷ್ಯನು ಅವನಿಗೆ, “ನಿನ್ನ ಹೆಸರು ಏನು?” ಎಂದಾಗ. ಅವನು, “ಯಾಕೋಬ,” ಎಂದನು.
28 ২৮ তিনি বললেন, “তুমি যাকোব নামে আর আখ্যাত হবে না, কিন্তু ইস্রায়েল [ঈশ্বরের সঙ্গে যুদ্ধকারী] নামে আখ্যাত হবে; কারণ তুমি ঈশ্বরের ও মানুষদের সঙ্গে যুদ্ধ করে জয়ী হয়েছ।”
ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.
29 ২৯ তখন যাকোব জিজ্ঞাসা করে বললেন, “অনুরোধ করি, আপনার নাম কি? বলুন।” তিনি বললেন, “কি জন্য আমার নাম জিজ্ঞাসা কর?” পরে সেখানে যাকোবকে আশীর্বাদ করলেন।
ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.
30 ৩০ তখন যাকোব সেই জায়গার নাম পনূয়েল [ঈশ্বরের মুখ] রাখলেন; কারণ তিনি বললেন, “আমি ঈশ্বরকে সামনাসামনি হয়ে দেখলাম, তবুও আমার প্রাণ বাঁচল।”
ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
31 ৩১ পরে তিনি পনূয়েল পার হলে সূর্যোদয় হল। আর তিনি ঊরুতে খোঁড়াতে লাগলেন।
ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
32 ৩২ এই কারণ ইস্রায়েল-সন্তানেরা আজও ঊরুসন্ধির হাড়ের উপরের ঊরুসন্ধির শিরা খায় না, কারণ তিনি যাকোবের ঊরুসন্ধির হাড় অর্থাৎ ঊরুসন্ধির শিরা স্পর্শ করেছিলেন।
ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲರು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದವರೆಗೂ ತಿನ್ನುವುದಿಲ್ಲ.

< আদিপুস্তক 32 >