< যিরমিয়ের বই 34 >

1 সদাপ্রভুর এই বাক্য যিরমিয়ের কাছে এল। এই বাক্য এসেছিল যখন বাবিলের রাজা নবূখদনিৎসর, তাঁর সব সৈন্যদল এবং তাঁর অধীন সমস্ত রাজ্য ও জাতির লোকেরা যখন যিরূশালেম ও তার সমস্ত শহরের বিরুদ্ধে যুদ্ধ করছিল। এই বাক্য হল,
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
2 “সদাপ্রভু, ইস্রায়েলের ঈশ্বর এই কথা বলেন, ‘যিহূদার রাজা সিদিকিয়ের কাছে গিয়ে বল, সদাপ্রভু এই কথা বলেন, আমি এই শহর বাবিলের রাজার হাতে তুলে দেব, সে এটি পুড়িয়ে দেবে।
ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.
3 তুমিও তার হাত থেকে রেহাই পাবে না; তুমি নিশ্চয়ই ধরা পড়বে ও তোমার চোখ বাবিল রাজার চোখকে দেখতে পাবে; সে তোমার মুখোমুখি হয়ে তোমার সঙ্গে কথা বলবে, আর তুমি বাবিলে যাবে’।
ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.
4 সদাপ্রভুর বাক্য শোনো, হে যিহূদার রাজা সিদিকিয়! সদাপ্রভু তোমার বিষয়ে এই কথা বলেন, তুমি তরোয়ালের আঘাতে মারা যাবে না।
ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.
5 তুমি শান্তিতে মারা যাবে। তোমার পূর্বপুরুষের জন্য, তোমার আগেকার রাজাদের জন্য যেমন দাহ করা হয়েছিল, তেমনি লোকে তোমার দেহ আগুনে পোড়াবে। তারা বলবে ‘হায় মনিব!’ তারা তোমার জন্য বিলাপ করবে। এখন আমিই বলেছি।” এটা সদাপ্রভুর ঘোষণা।
ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’” ಎಂದನು.
6 পরে যিরমিয় ভাববাদী যিরূশালেমে যিহূদার রাজা সিদিকিয়কে সেই সব কথা বললেন।
ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.
7 বাবিলের রাজার সৈন্যেরা যিরূশালেম, যিহূদাতে অবশিষ্ট সমস্ত শহর, লাখীশ ও অসেকার বিরুদ্ধে যুদ্ধ করছিল, কারণ যিহূদা দেশের শহরের মধ্যে দেয়ালে ঘেরা দুটি শহর অবশিষ্ট ছিল।
ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.
8 রাজা সিদিকিয় যিরূশালেমের সমস্ত লোকদের সঙ্গে তাদের মুক্তি ঘোষণার জন্য নিয়ম স্থির করার পর সদাপ্রভুর বাক্য যিরমিয়ের কাছে এল।
ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,
9 সেটি হল, প্রত্যেকে তার নিজের ইব্রীয় দাস ও দাসীকে মুক্ত করে বিদায় দেবে; কেউ কোন যিহূদী ভাইকে দাসত্ব করবে না।
“ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.
10 ১০ আর, সমস্ত নেতা ও সমস্ত লোকেরা রাজি হয়েছিল; প্রত্যেকে তাদের দাস ও দাসীদের মুক্ত করে বিদায় দেবে এবং তাদের আর দাসত্ব করাবে না। তারা রাজি হয়ে তাদেরকে মুক্ত করে বিদায় দিল।
೧೦ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.
11 ১১ কিন্তু পরে তারা তাদের মন পরিবর্তন করল। যাদের তারা মুক্ত করেছিল, সেই দাস ও দাসীদের আবার ফিরিয়ে এনে নিজেদের দাস বানাল। তারা পুনরায় তাদের দাসত্ব করালো।
೧೧ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು.
12 ১২ এই জন্য সদাপ্রভুর বাক্য যিরমিয়ের কাছে এল এবং বলল,
೧೨ಹೀಗಿರಲು ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
13 ১৩ “সদাপ্রভু, ইস্রায়েলের ঈশ্বর এই কথা বলেন, ‘আমি নিজে তোমাদের পূর্বপুরুষদের সঙ্গে সেই দিন নিয়ম স্থির করেছিলাম, যেদিন আমি তাদের মিশর দেশ থেকে, দাসত্বের ঘর থেকে বের করে এনেছিলাম। সেটা ছিল যখন আমি বলেছিলাম,
೧೩“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ
14 ১৪ তোমার কোন ইব্রীয় ভাই যদি নিজেকে তোমার কাছে বিক্রি হয়, তবে সপ্তম বছরে তোমরা তাকে মুক্ত করে দেবে। ছয় বছর সে তোমাদের দাসত্ব করার পর তোমার কাছ থেকে তাকে যেতে দেবে। কিন্তু তোমাদের পূর্বপুরুষেরা আমার কথা শুনল না, মনোযোগও দিল না।
೧೪‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.
15 ১৫ এখন তোমরা নিজেরা অনুতাপ করেছিলে এবং আমার চোখে যা সঠিক তাই করেছিলে। তোমরা প্রত্যেকে নিজের প্রতিবেশীর মুক্তি ঘোষণা করেছিলে। যে গৃহ আমার নামে পরিচিত, সেখানে আমার সামনে তোমরা একটি চুক্তি প্রতিষ্ঠা করেছিলে।
೧೫ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.
16 ১৬ কিন্তু তোমরা আবার পিছু ফিরেছ এবং আমার নামকে অশুচি করেছ; তাদের মুক্ত করে তাদের ইচ্ছামত বিদায় দিয়েছিলে, তাদের প্রত্যেককে আবার ফিরিয়ে এনে দাস দাসী করেছ, তোমরা পুনরায় জোর দিয়ে তাদের দাস বানিয়েছ’।”
೧೬ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.
17 ১৭ তাই সদাপ্রভু এই কথা বলেন, “তোমরা প্রত্যেকে, তোমাদের ভাই ও সহ ইস্রায়েলীয়দের জন্য মুক্তি ঘোষণা করতে আমার কথা শোনো নি।” এটা সদাপ্রভুর ঘোষণা। “আমি তোমাদের বিরুদ্ধে তরোয়াল, মহামারী ও দূর্ভিক্ষের জন্য মুক্তি ঘোষণা করছি। আমি তোমাদের পৃথিবীর সমস্ত রাজ্যের কাছে ভয়ঙ্কর করে তুলব।
೧೭ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
18 ১৮ তখন যে লোকেরা আমার নিয়ম অগ্রাহ্য করেছে, যারা আমার সামনে নিয়ম করে তা পালন করে নি, দুই টুকরো করা বাছুরের মধ্যে দিয়ে হেঁটেছে, আমি তাদেরকে সমর্পণ করব;
೧೮ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.
19 ১৯ যিহূদা ও যিরূশালেমের নেতারা, নপুংসকরা, যাজকেরা ও দেশের সব লোকেরা, যারা দুই টুকরো করা বাছুরের মাঝখান দিয়ে হেঁটেছে।
೧೯ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು,
20 ২০ তাদেরকে আমি তাদের শত্রুদের হাতে ও যারা তাদের প্রাণের খোঁজ করে তাদের কাছে সমর্পণ করব। তাতে তাদের মৃতদেহ আকাশের পাখী ও ভূমির পশুদের খাবার হবে।
೨೦ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.
21 ২১ যিহূদার রাজা সিদিকিয়কে ও তার নেতাদেরকে আমি তাদের শত্রুদের হাতে ও যারা তাদের প্রাণের খোঁজ করে ও বাবিল রাজার যে সৈন্যদল তোমাদের কাছ থেকে চলে গিয়েছিল তাদের হাতে তোমাদের সমর্পণ করব।
೨೧ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.
22 ২২ দেখ, আমি তাদের একটি আদেশ দেব,” এটা সদাপ্রভুর ঘোষণা। “এবং তাদের এই শহরে ফিরিয়ে আনব। তারা এই শহরের বিরুদ্ধে যুদ্ধ করে তা দখল করবে এবং পুড়িয়ে দেবে। কারণ আমি যিহূদার সমস্ত শহরগুলিকে ধ্বংস করব, যেখানে কোনো বাসিন্দা থাকবে না।”
೨೨ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.

< যিরমিয়ের বই 34 >