< বিচারকর্ত্তৃগণের বিবরণ 7 >

1 পরে যিরুব্বাল অর্থাৎ গিদিয়োন ও তাঁর সঙ্গী সব লোক ভোরবেলায় উঠে হারোদ নামক উনুইর কাছে শিবির তৈরী করলেন; তখন মিদিয়নের শিবির তাঁদের উত্তরদিকে মোরি পর্বতের কাছে উপত্যকায় ছিল।
ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.
2 পরে সদাপ্রভু গিদিয়োনকে বললেন, তোমার সঙ্গী লোকদের সংখ্যা এত বেশি যে, আমি মিদিয়নীয়দেরকে তাঁদের হাতে সমর্পণ করব না; যদি ইস্রায়েল আমার বিরুদ্ধে গর্ব করে বলে, আমি নিজের ক্ষমতায় উদ্ধার পেলাম।
ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.
3 অতএব তুমি এখন লোকদের সামনে এই কথা ঘোষণা কর, যে কেউ ভীত ও ত্রাসযুক্ত, সে ফিরে গিলিয়দ পর্বত থেকে চলে যাক। তাতে লোকদের মধ্য থেকে বাইশহাজার লোক ফিরে গেল, দশহাজার থেকে গেল।
ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
4 পরে সদাপ্রভু গিদিয়োনকে বললেন, লোক এখনও অনেক আছে; তুমি তাদেরকে নিয়ে ঐ জলের কাছে নেমে যাও; সেখানে আমি তোমার জন্য তাঁদের পরীক্ষা নেব; তাতে যার বিষয়ে তোমাকে বলি, এ তোমার সঙ্গে যাবে, সেই তোমার সাথে যাবে; এবং যার বিষয়ে তোমাকে বলি সে তোমার সঙ্গে যাবে না, সে যাবে না।
ಯೆಹೋವನು ತಿರುಗಿ ಗಿದ್ಯೋನನಿಗೆ, “ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ” ಅಂದನು.
5 পরে তিনি লোকদেরকে জলের কাছে নিয়ে গেলে সদাপ্রভু গিদিয়োনকে বললেন, যে কেউ কুকুরের মতো জিভ দিয়ে জল চেটে খায়, তাকে ও যে কেউ পান করবার জন্য হাঁটুর উপরে উপুড় হয়, তাকে পৃথক করে রাখ।
ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು.
6 তাতে সংখ্যায় তিনশো লোক মুখে অঞ্জলি তুলে জল চেটে খেল, কিন্তু অন্য সব লোক পান করবার জন্য হাঁটুর উপরে উপুড় হল।
ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.
7 তখন সদাপ্রভু গিদিয়োনকে বললেন, এই যে তিনশো লোক জল চেটে খেল, এদের মাধ্যমে আমি তোমাদেরকে উদ্ধার করব, ও মিদিয়নীয়দেরকে তোমার হাতে সমর্পণ করব; অন্য সব লোক নিজের নিজের জায়গায় চলে যাক।
ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.
8 পরে লোকেরা নিজের নিজের হাতে খাদ্য দ্রব্য ও তূরী নিল, আর তিনি ইস্রায়েলের লোকদেরকে নিজের নিজের তাঁবুতে বিদায় করে ঐ তিনশো লোককে রাখলেন; সেইদিনের মিদিয়নের শিবির তাঁর নীচের উপত্যকাতে ছিল।
ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.
9 আর সেই রাত্রিতে সদাপ্রভু তাঁকে বললেন, উঠ, তুমি নেমে শিবিরের মধ্যে যাও; কারণ আমি তোমার হাতে তা সমর্পণ করেছি।
ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.
10 ১০ আর যদি তুমি যেতে ভয় পাও, তবে তোমার চাকর ফুরাকে সঙ্গে নিয়ে নেমে শিবিরে যাও,
೧೦ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು;
11 ১১ এবং ওরা যা বলে, তা শোন তার পরে তোমার হাত শক্তিশালী হবে, তাতে তুমি ঐ শিবিরের বিরুদ্ধে নেমে যাবে। তখন তিনি নিজের চাকর ফুরাকে সঙ্গে করে শিবিরে অবস্থিত সসজ্জ লোকদেরকে নিয়ে শেষ পর্যন্ত নেমে গেলেন।
೧೧ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.
12 ১২ তখন মিদিয়নীয়, অমালেকীয় ও পূর্ব্বদেশের সব লোক পঙ্গপালের মতো উপত্যকাতে নেমে পড়েছিল এবং তাঁদের উটও সমুদ্রতীরের বালুকার মতো অসংখ্য ছিল যা গণনা করা যায় না।
೧೨ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.
13 ১৩ পরে গিদিয়োন আসলেন, আর দেখ, তাদের মধ্যে এক জন নিজের বন্ধুকে এই স্বপ্নের কথা বলল, দেখ, আমি একটা স্বপ্ন দেখেছি, আর দেখ, যেন যবের একটা রুটি মিদিয়নের শিবিরের মধ্য দিয়ে গড়িয়ে গেল এবং তাঁবুর কাছে গিয়ে আঘাত করল; তাতে তাঁবুটা উল্টে লম্বা হয়ে পড়ল।
೧೩ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು
14 ১৪ তখন তার বন্ধু বলল, ওটা আর কিছু না, ইস্রায়েলীয় যোয়াশের পুত্র গিদিয়োনের খড়গ; ঈশ্বর মিদিয়নকে ও সমস্ত শিবিরকে তার হাতে সমর্পণ করেছেন।
೧೪ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.
15 ১৫ তখন গিদিয়োন ঐ স্বপ্নের কথা ও তার অর্থ শুনে প্রার্থনা করলেন; পরে ইস্রায়েলের শিবিরে ফিরে এসে বললেন, “ওঠ, কারণ সদাপ্রভু তোমাদের হাতে মিদিয়নের শিবির সমর্পণ করেছেন।”
೧೫ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.
16 ১৬ পরে তিনি ঐ তিনশো লোককে তিনটি দলে ভাগ করে প্রত্যেকের হাতে একটা করে তূরী এবং একটা করে শূন্য ঘট, ও ঘটের মধ্যে মশাল দিলেন।
೧೬ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,
17 ১৭ তিনি তাদেরকে বললেন, তোমরা আমার দিকে দেখে আমার মত কাজ কর; দেখ, আমি শিবিরের শেষভাগে পৌঁছে যেরকম করব, তোমরাও সেরকম করবে।
೧೭“ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.
18 ১৮ আমি ও আমার সঙ্গীরা সবাই তূরী বাজালে তোমরাও সমস্ত শিবিরের চারদিকে থেকে তূরী বাজাবে, আর বলবে, “সদাপ্রভুর জন্য ও গিদিয়োনের জন্য।”
೧೮ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು.
19 ১৯ পরে মধ্যরাত্রির শুরুতে নতুন প্রহরী আসামাত্র গিদিয়োন ও তার সঙ্গী একশো লোক শিবিরের শেষে পৌছে তূরী বাজালেন এবং নিজের নিজের হাতে থাকা ঘট ভেঙে ফেললেন।
೧೯ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
20 ২০ এই ভাবে তিন দলেই তূরী বাজাল ও ঘট ভেঙে ফেলল এবং বাঁ হাতে মশাল ও ডান হাতে বাজাবার তূরী ধরে খুব জোরে বলতে লাগল, “সদাপ্রভুর ও গিদিয়োনের খড়গ।”
೨೦ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ
21 ২১ আর শিবিরের চারদিকে প্রত্যেকে নিজের নিজের জায়গায় দাঁড়িয়ে থাকল; তাতে শিবিরের সব লোক দৌড়াদৌড়ি করে চিৎকার করতে করতে পালিয়ে যেতে লাগল।
೨೧ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.
22 ২২ তখন ওরা ঐ তিনশো তূরী বাজাল, আর সদাপ্রভু শিবিরের প্রত্যেক জনের খড়গ তার বন্ধুর ও সব সৈন্যের বিরুদ্ধে চালনা করলেন; তাতে সৈন্যরা সরোরার দিকে বৈৎ-শিট্টা পর্যন্ত, টব্বতের নিকটবর্ত্তী আবেল-মহোলার সীমা পর্যন্ত পালিয়ে গেল।
೨೨ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.
23 ২৩ পরে নপ্তালি, আশের ও সমস্ত মনঃশির থেকে ইস্রায়েলীয়রা জড়ো হয়ে মিদিয়নের পিছন পিছন তাড়া করে গেল।
೨೩ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
24 ২৪ আর গিদিয়োন পাহাড়ী অঞ্চলে ইফ্রয়িম প্রদেশের সব জায়গায় দূত পাঠিয়ে এই কথা বললেন, তোমরা মিদিয়নের বিরুদ্ধে নেমে এস এবং তাদের আগে বৈৎ-বারা ও যর্দ্দন পর্যন্ত জলাশয় সব দখল কর। তাতে ইফ্রয়িমের সব লোক জড়ো হয়ে বৈৎ-বারা ও যর্দ্দন পর্যন্ত জলাশয় সব দখল করল।
೨೪ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.
25 ২৫ আর তারা ওরেব ও সেবনামে মিদিয়নের দুই অধ্যক্ষকে ধরল; আর ওরেব নামক পাথরের ওপর ওরেবকে হত্যা করল এবং সেব নামক দ্রাক্ষাকুণ্ডের কাছে সেবকে হত্যা করল এবং মিদিয়নের পিছন পিছন তাড়া করল; আর ওরেবের ও সেবের মাথা যর্দ্দনের পারে গিদিয়নের কাছে নিয়ে গেল।
೨೫ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.

< বিচারকর্ত্তৃগণের বিবরণ 7 >