< মথি 13 >

1 সেই দিন যীশু ঘর থেকে বের হয়ে গিয়ে সমুদ্রের পাড়ে বসলেন।
ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.
2 আর প্রচুর লোক তাঁর কাছে এলো, তাতে তিনি সমুদ্রের মধ্যে একটি নৌকায় উঠে বসলেন এবং সব লোক তীরে দাঁড়িয়ে রইল।
ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು.
3 তখন তিনি গল্পের মাধ্যমে তাদের অনেক কথা বলতে লাগলেন।
ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.
4 তিনি বললেন, দেখ, একজন চাষী বীজ বুনতে গেল। বোনার দিন কিছু বীজ পথের ধরে পড়ল, তাতে পাখিরা এসে সেগুলি খেয়ে ফেলল।
“ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.
5 আর কিছু বীজ পাথুরে মাটিতে পড়ল, যেখানে ঠিকমত মাটি পেল না, সেগুলি ঠিকমত মাটি না পেয়ে তাড়াতাড়ি অঙ্কুর বের হলো, কিন্তু সূর্য্য উঠলে সেগুলি পুড়ে গেল,
ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.
6 এবং তার শিকড় না থাকাতে তারা শুকিয়ে গেল।
ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.
7 আর কিছু বীজ কাঁটাবনের মধ্যে পড়ল, তাতে কাঁটাবন বেড়ে গিয়ে সেগুলি চেপে রাখলো।
ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
8 আর কিছু বীজ ভালো জমিতে পড়ল ও ফল দিতে লাগল; কিছু একশোগুন, কিছু ষাট গুন, কিছু ত্রিশ গুন।
ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.
9 যার কান আছে সে শুনুক।
ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
10 ১০ পরে শিষ্যেরা কাছে এসে তাঁকে জিজ্ঞাসা করলেন, আপনি কি জন্য গল্পের মাধ্যমে ওদের কাছে কথা বলছেন?
೧೦ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.
11 ১১ তিনি উত্তর করে বললেন, স্বর্গরাজ্যের নিগূঢ় তত্ত্ব সব তোমাদের জানতে দেওয়া হয়েছে, কিন্তু তাদের দেওয়া হয়নি।
೧೧ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.
12 ১২ কারণ যার আছে, তাকে দেওয়া যাবে, ও তার বেশি হবে; কিন্তু যার নেই, তার যা আছে, সেটাও তার কাছ থেকে নিয়ে নেওয়া হবে।
೧೨ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
13 ১৩ এই জন্য আমি তোমাদের গল্পের মাধ্যমে কথা বলছি, কারণ তারা দেখেও না দেখে এবং শুনেও শোনে না এবং বুঝেও না।
೧೩ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.
14 ১৪ আর তাদের বিষয়ে যিশাইয়ের এই ভাববাণী পূর্ণ হচ্ছে, “তোমরা কানে শুনবে, কিন্তু কোনো মতে বুঝবে না; এবং চোখে দেখবে, কিন্তু কোনো মতে জানবে না,
೧೪“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.
15 ১৫ কারণ এই লোকদের হৃদয় শক্ত হয়েছে, তারা কানেও শোনে না ও তারা চোখ বন্ধ করেছে, পাছে তারা চোখে দেখে এবং কানে শুনে, হৃদয়ে বুঝে এবং ফিরে আসে, আর আমি তাদের সুস্থ করি।”
೧೫ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.
16 ১৬ কিন্তু ধন্য তোমাদের চোখ, কারণ তা দেখে এবং তোমাদের কান, কারণ তা শোনে;
೧೬“ಆದರೆ ನೀವು ಧನ್ಯರು ಏಕೆಂದರೆನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.
17 ১৭ কারণ আমি তোমাদের সত্য বলছি, তোমরা যা যা দেখছ, তা অনেক ভাববাদী ও ধার্মিক লোক দেখতে ইচ্ছা করলেও দেখতে পায়নি এবং তোমরা যা যা শুনছ, তা তাঁরা শুনতে ইচ্ছা করলেও শুনতে পায়নি।
೧೭ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.
18 ১৮ অতএব তোমরা বীজ বোনার গল্প শোন।
೧೮“ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ.
19 ১৯ যখন কেউ সেই রাজ্যের বাক্য শুনে না বোঝে, তখন সেই শয়তান এসে তার হৃদয়ে যা বোনা হয়েছিল তা নিয়ে চলে যায়; এ সেই, যে পথের পাশে পড়ে থাকা বীজের কথা।
೧೯ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
20 ২০ আর যে পাথুরে জমির বীজ, এ সেই, যে সেই বাক্য শুনে অমনি আনন্দ সহকারে গ্রহণ করে, কিন্তু তাদের ভিতরে শিকড় নেই বলে, তারা কম দিন স্থির থাকে;
೨೦ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,
21 ২১ পরে সেই বাক্যের জন্য কষ্ট কিংবা তাড়না আসলে তখনই তারা পিছিয়ে যায়।
೨೧ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.
22 ২২ আর যে কাঁটাবনের মধ্যে বীজ, এ সেই, যে সেই বাক্য শোনে, কিন্তু সংসারের চিন্তা ভাবনা, সম্পতির মায়া ও অন্যান্য জিনিসের লোভ সেই বাক্যকে চেপে রাখে, তাতে সে ফলহীন হয়। (aiōn g165)
೨೨ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. (aiōn g165)
23 ২৩ আর যে ভালো জমির বীজ, এ সেই, যে সেই বাক্য শোনে তা বোঝে, সে বাস্তবিক ফলবান হয় এবং কিছু একশ গুন, কিছু ষাট গুন, ও কিছু ত্রিশ গুন ফল দেয়।
೨೩ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.
24 ২৪ পরে তিনি তাদের কাছে আর এক গল্প উপস্থিত করে বললেন, স্বর্গরাজ্যকে এমন এক ব্যক্তির সাথে তুলনা করা যায়, যিনি নিজের ক্ষেতে ভাল বীজ বপন করলেন।
೨೪ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.
25 ২৫ কিন্তু লোকে ঘুমিয়ে পড়লে পর তাঁর শত্রুরা এসে ঐ গমের মধ্যে শ্যামাঘাসের বীজ বপন করে চলে গেল।
೨೫ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.
26 ২৬ পরে বীজ অঙ্কুরিত হয়ে ফল দিল, তখন শ্যামাঘাসও বেড়ে উঠল।
೨೬ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು.
27 ২৭ তাতে সেই মালিকের দাসেরা এসে তাঁকে বলল, মহাশয়, আপনি কি নিজের ক্ষেতে ভাল বীজ বপন করেননি? তবে শ্যামাঘাস কোথা থেকে হল?
೨೭ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.
28 ২৮ তিনি তাদের বললেন, কোন শত্রু এটা করেছে। দাসেরা তাঁকে বলল, তবে আপনি কি এমন ইচ্ছা করেন যে, আমরা গিয়ে তা সংগ্রহ করি?
೨೮ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.
29 ২৯ তিনি বললেন, না, কি জানি, শ্যামাঘাস সংগ্রহ করবার দিনের তোমরা তার সাথে গমও উপড়িয়ে ফেলবে।
೨೯ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.
30 ৩০ ফসল কাটার দিন পর্যন্ত দুটিকেই একসঙ্গে বাড়তে দাও। পরে কাটার দিনের আমি মজুরদের বলব, তোমরা প্রথমে শ্যামাঘাস সংগ্রহ করে পোড়াবার জন্য বোঝা বেঁধে রাখ, কিন্তু গম আমার গোলায় সংগ্রহ কর।
೩೦ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.
31 ৩১ তিনি আর এক গল্প তাদের কাছে উপস্থিত করে বললেন, স্বর্গরাজ্য এমন একটি সরিষা দানার সমান, যা কোন ব্যক্তি নিয়ে নিজের ক্ষেতে বপন করল।
೩೧ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.
32 ৩২ সব বীজের মধ্যে ঐ বীজ অতি ক্ষুদ্র; কিন্তু বেড়ে উঠলে, পর তা শাক সবজির থেকে বড় হয়ে ওঠে এবং বড় বড় ডাল বের হয়, তাতে আকাশের পাখিরা এসে তার ডালে বাস করে।
೩೨ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.
33 ৩৩ তিনি তাদের আর এক গল্প বললেন, স্বর্গরাজ্য এমন খামির সমান, যা কোন স্ত্রীলোক নিয়ে অনেক ময়দার মধ্যে ঢেকে রাখল, শেষে পুরোটাই খামিতে পূর্ণ হয়ে উঠল।
೩೩ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”
34 ৩৪ এই সব কথা যীশু গল্পের মাধ্যমে লোকদেরকে বললেন, গল্প ছাড়া তাদেরকে কিছুই বলতেন না;
೩೪ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.
35 ৩৫ যেন ভাববাদীর মাধ্যমে বলা এই কথা পূর্ণ হয়, “আমি গল্প কথায় নিজের মুখ খুলব, জগতের শুরু থেকে যা যা গোপন আছে, সে সব প্রকাশ করব।”
೩೫ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
36 ৩৬ তখন তিনি সবাইকে বিদায় করে বাড়ি এলেন। আর তাঁর শিষ্যরা কাছে এসে তাঁকে বললেন, ক্ষেতের শ্যামাঘাসের গল্পটি আমাদেরকে স্পষ্ট করে বলুন।
೩೬ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
37 ৩৭ তিনি উত্তর করে বললেন, যিনি ভাল বীজ বপন করেন, তিনি মনুষ্যপুত্র।
೩೭ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.
38 ৩৮ ক্ষেত হল জগত; ভাল বীজ হল ঈশ্বরের রাজ্যের সন্তানরা; শ্যামাঘাস হল সেই শয়তানের সন্তানরা;
೩೮ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆರಾಜ್ಯದ ಮಕ್ಕಳು.
39 ৩৯ যে শত্রু তা বুনেছিল, সে দিয়াবল; কাটার দিন যুগের শেষ; এবং মজুরেরা হল স্বর্গদূত। (aiōn g165)
೩೯ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. (aiōn g165)
40 ৪০ অতএব যেমন শ্যামাঘাস সংগ্রহ করে আগুনে পুড়িয়া দেওয়া হয়, তেমনি যুগের শেষে হবে। (aiōn g165)
೪೦ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. (aiōn g165)
41 ৪১ মনুষ্যপুত্র নিজের দূতদের পাঠাবেন; তাঁরা তাঁর রাজ্য থেকে সব বাঁধাজনক বিষয় ও অধর্মীদেরকে সংগ্রহ করবেন,
೪೧ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
42 ৪২ এবং তাদের আগুনে ফেলে দেবেন; সেই জায়গায় কান্নাকাটি ও দাঁতে দাঁত ঘর্ষণ হবে।
೪೨ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು
43 ৪৩ তখন ধার্ম্মিকেরা নিজেদের পিতার রাজ্যে সুর্য্যের মত উজ্জ্বল হবে। যার কান আছে সে শুনুক।
೪೩ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.
44 ৪৪ স্বর্গরাজ্য ক্ষেতের মধ্যে গোপন এমন ভান্ডার এর সমান, যা দেখতে পেয়ে এক ব্যক্তি লুকিয়ে রাখল, পরে আনন্দের আবেগে গিয়ে সব বিক্রি করে সেই জমি কিনল।
೪೪“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
45 ৪৫ আবার স্বর্গরাজ্য এমন এক বণিকের সমান, যে ভালো ভালো মুক্তার খোঁজ করছিল,
೪೫ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
46 ৪৬ সে একটি মহামূল্য মুক্তা দেখতে পেয়ে সব বিক্রি করে তা কিনল।
೪೬ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.
47 ৪৭ আবার স্বর্গরাজ্য এমন এক টানা জালের সমান, যা সমুদ্রে ফেলে দেওয়া হলে সব রকম মাছ সংগ্রহ করল।
೪೭“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.
48 ৪৮ জালটা পরিপূর্ণ হলে লোকে পাড়ে টেনে তুলল, আর বসে বসে ভালগুলো সংগ্রহ করে পাত্রে রাখল এবং খারাপগুলো ফেলে দিল।
೪೮ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.
49 ৪৯ এই ভাবে যুগের শেষে হবে; দূতেরা এসে ধার্ম্মিকদের মধ্য থেকে খারাপদের আলাদা করবেন, (aiōn g165)
೪೯ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. (aiōn g165)
50 ৫০ এবং তাদের আগুনে ফেলে দেবেন; সেই জায়গায় কান্নাকাটি ও দাঁতে দাঁত ঘর্ষণ হবে।
೫೦ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
51 ৫১ তোমরা কি এই সব বুঝতে পেরেছ? তাঁরা বললেন হ্যাঁ।
೫೧“ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.
52 ৫২ তখন তিনি তাঁদের বললেন, এই জন্য স্বর্গরাজ্যের বিষয়ে শিক্ষিত প্রত্যেক ধর্মশিক্ষক শিষ্য হয়েছে যারা এমন মানুষ যে তারা ঘরের মালিকের সমান, যে নিজের ভান্ডার থেকে নতুন ও পুরানো জিনিস বের করে।
೫೨ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.
53 ৫৩ এই সকল গল্প শেষ করবার পর যীশু সেখান থেকে চলে গেলেন।
೫೩ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು.
54 ৫৪ আর তিনি নিজের দেশে এসে লোকদের সমাজঘরে তাদের উপদেশ দিতে লাগলেন, তাতে তারা চমৎকৃত হয়ে বলল, এর এমন জ্ঞান ও এমন অলৌকিক কাজ সব কোথা থেকে হল?
೫೪ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
55 ৫৫ একি ছুতোরের ছেলে না? এর মায়ের নাম কি মরিয়ম না? এবং যাকোব, যোষেফ, শিমোন ও যিহূদা কি এর ভাই না?
೫೫ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?
56 ৫৬ আর তার বোনেরা কি সবাই আমাদের এখানে নেই? তবে এ কোথা থেকে এই সব পেল? এই ভাবে তারা যীশুকে নিয়ে বাধা পেতে লাগল।
೫೬ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.
57 ৫৭ কিন্তু যীশু তাদের বললেন, নিজের দেশ ও জাতি ছাড়া আর কোথাও ভাববাদী অসম্মানিত হন না।
೫೭ಆದರೆ ಯೇಸುವು ಅವರಿಗೆ “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.
58 ৫৮ আর তাদের অবিশ্বাসের জন্য তিনি সেখানে প্রচুর অলৌকিক কাজ করলেন না।
೫೮ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.

< মথি 13 >