< 路加福音 13 >

1 就在这时候,有几个人向耶稣讲述了加利利人的事情,这几个人当时正在神庙献祭,但彼拉多却将他们杀死了。
ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
2 耶稣问:“这些加利利人为什么遭受如此痛苦?是因为罪孽比其他加利利人更深重吗?
ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?
3 告诉你们,并非如此。除非你们悔改,否则也将如此灭亡。
ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.
4 当年西罗亚的高塔倒塌时压死了十八个人,难道这些人的罪行比所有耶路撒冷的居民更大吗?
ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?
5 告诉你们,并非如此。除非你们悔改,否则也将如此灭亡。”
ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.
6 然后耶稣讲了一个故事:“有一个人在葡萄园里种了一棵无花果树。一天他来到无花果树那里找果子,但没有找到。
ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
7 于是他对看园人说:‘这三年来我一直在找这棵无花果树的果子,却总是找不到,把它砍了吧!不要让它白白占了空间。’
ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.
8 看园人说:‘主人,再多留它一年吧,我给它周围松松土,施施肥,
ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ.
9 如果它结果了,那就太好了。如果没有结果,再砍它也不迟。’”
ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.
10 安息日那天,耶稣在会堂向众人传道。
೧೦ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.
11 一名恶灵附体的女人已经病了十八年,后背彻底弯曲,完全直不起来。
೧೧ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.
12 耶稣看见她,便把她叫过来说:“你可以摆脱这疾病了。”
೧೨ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ
13 然后耶稣双手按在她身上,她立刻直起腰,开始赞美上帝。
೧೩ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
14 但因为今天是安息日,耶稣在这一天治病让会堂的主事很不高兴。他对民众说:“每星期有六天应当工作,你们可以在那六天求医,但安息日不行。”
೧೪ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
15 但主回答:“你这伪君子,这一天你们还是要把牛或者驴子从畜栏里放出来,牵去喝水,不是吗?
೧೫ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
16 那么这女人作为亚伯拉罕的女儿,已经被撒旦困住十八年,难道不应当在安息日解开束缚,获得自由吗?”
೧೬ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.
17 听到这番话,反对耶稣的人都感到很羞愧,民众却因他的伟大之举而欢喜。
೧೭ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
18 耶稣说:“上帝之国像什么呢?我要把它比作什么呢?
೧೮ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
19 它就像一粒芥菜种子,一个人把它种在自己的园子里,长成一棵树,天空的飞鸟会在它的枝头栖息。”
೧೯ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.
20 他又问到:“我要把上帝之国比作什么呢?
೨೦ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ?
21 它就像酵母,女人把它与三碗面粉混在一起,等着它发酵。”
೨೧ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.
22 耶稣朝着耶路撒冷的方向走去,沿途穿乡过城,教化众人。
೨೨ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.
23 有一个人问他:“主啊,是不是只有很少的人才会得到救赎?” 他对众人说:
೨೩ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು,
24 “要努力穿过这条窄门,我告诉你们,将来会有许多人想要进去,但却进不去。
೨೪ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.
25 等到房子的主人起来关上门,你们就会站在门外敲门说:‘主人啊,请开门吧!’但他的回答是:‘我不认识你们,也不知道你们从哪里来。’
೨೫ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
26 这时候你们会说:‘但我们曾与你一起吃喝,你曾在我们的街道上教导我们。’
೨೬ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.
27 他会回复:‘告诉你们吧,我不认识你们,也不知道你们从何而来。你们这些作恶之人,从我这里离开!’
೨೭ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
28 当你们看见亚伯拉罕、以撒、雅各和众先知都已置身上帝之国,你们却被赶了出去,到时候必然有人痛苦不堪。
೨೮ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
29 人们从四面八方赶来,在上帝之国坐下来用餐。
೨೯ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.
30 后来者会排在前面,先来者会排在后面。”
೩೦ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು” ಅಂದನು.
31 这时候,有几个法利赛人对耶稣说:“你应该离开这里,因为希律想要杀你。”
೩೧ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,
32 耶稣回答:“去告诉那个老狐狸,今天和明天我需要驱鬼治病,到了第三天,我就会完成来到这里的使命。
೩೨ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
33 但无论是今天、明天还是后天,我都必须前行,因为先知不能在耶路撒冷以外的地点死去。
೩೩ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.
34 耶路撒冷啊,耶路撒冷,你杀害先知,用石头把派给你的人砸死。我总是想把你的儿女召在一起,就像母鸡把小鸡聚在翅膀底下,只是你们不愿意。
೩೪ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!
35 看吧,你们的家将变成荒芜。告诉你们,从今以后,你们再也不会看到我,除非你们说:‘祝福奉主之名前来之人。’”
೩೫ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.

< 路加福音 13 >