< 耶利米书 45 >

1 犹大王约西亚的儿子约雅敬第四年,尼利亚的儿子巴录将先知耶利米口中所说的话写在书上。耶利米说:
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.
2 “巴录啊,耶和华—以色列的 神说:
“ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ?
3 巴录曾说:‘哀哉!耶和华将忧愁加在我的痛苦上,我因唉哼而困乏,不得安歇。’
ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,
4 你要这样告诉他,耶和华如此说:我所建立的,我必拆毁;我所栽植的,我必拔出;在全地我都如此行。
ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
5 你为自己图谋大事吗?不要图谋!我必使灾祸临到凡有血气的。但你无论往哪里去,我必使你以自己的命为掠物。这是耶和华说的。”
ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”

< 耶利米书 45 >