< 约书亚记 15 >

1 犹大支派按着宗族拈阄所得之地是在尽南边,到以东的交界,向南直到寻的旷野。
ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.
2 他们的南界是从盐海的尽边,就是从朝南的海汊起,
ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ
3 通到亚克拉滨坡的南边,接连到寻,上到加低斯·巴尼亚的南边,又过希斯 ,上到亚达珥,绕到甲加,
ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ,
4 接连到押们,通到埃及小河,直通到海为止。这就是他们的南界。
ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರೆ.
5 东界是从盐海南边到约旦河口。北界是从约旦河口的海汊起,
ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ
6 上到伯·曷拉,过伯·亚拉巴的北边,上到吕便之子波罕的磐石;
ಬೇತ್ ಹೊಗ್ಲಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೇನನ ಮಗನಾದ ಬೋಹನನ ಬಂಡೆ,
7 从亚割谷往北,上到底璧,直向河南亚都冥坡对面的吉甲;又接连到隐·示麦泉,直通到隐·罗结,
ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ
8 上到欣嫩子谷,贴近耶布斯的南界(耶布斯就是耶路撒冷);又上到欣嫩谷西边的山顶,就是在利乏音谷极北的边界;
ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.
9 又从山顶延到尼弗多亚的水源,通到以弗 山的城邑,又延到巴拉(巴拉就是基列·耶琳);
ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.
10 又从巴拉往西绕到西珥山,接连到耶琳山的北边(耶琳就是基撒 );又下到伯·示麦过亭纳,
೧೦ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು
11 通到以革伦北边,延到施基 ,接连到巴拉山;又通到雅比聂,直通到海为止。
೧೧ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.
12 西界就是大海和靠近大海之地。这是犹大人按着宗族所得之地四围的交界。
೧೨ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.
13 约书亚照耶和华所吩咐的,将犹大人中的一段地,就是基列·亚巴,分给耶孚尼的儿子迦勒。亚巴是亚衲族的始祖(基列·亚巴就是希伯 )。
೧೩ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.
14 迦勒就从那里赶出亚衲族的三个族长,就是示筛、亚希幔、挞买;
೧೪ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
15 又从那里上去,攻击底璧的居民。(这底璧从前名叫基列·西弗。)
೧೫ಆನಂತರ ಅವನು ಹೊರಟು ಕಿರ್ಯತಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು.
16 迦勒说:“谁能攻打基列·西弗将城夺取,我就把我女儿押撒给他为妻。”
೧೬ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.
17 迦勒兄弟基纳斯的儿子俄陀聂夺取了那城,迦勒就把女儿押撒给他为妻。
೧೭ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.
18 押撒过门的时候,劝丈夫向她父亲求一块田,押撒一下驴,迦勒问她说:“你要什么?”
೧೮ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, “ನಿನಗೇನು ಬೇಕು” ಎಂದು ಆಕೆಯನ್ನು ಕೇಳಲು
19 她说:“求你赐福给我,你既将我安置在南地,求你也给我水泉。”她父亲就把上泉下泉赐给她。
೧೯ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.
20 以下是犹大支派按着宗族所得的产业。
೨೦ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ:
21 犹大支派尽南边的城邑,与以东交界相近的,就是甲薛、以得、雅姑珥、
೨೧ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,
22 基拿、底摩拿、亚大达、
೨೨ಕೀನಾ, ದೀಮೋನ್, ಅದಾದ್,
23 基低斯、夏琐、以提楠、
೨೩ಕೆದೆಷ್, ಹಾಚೋರ್, ಇತ್ನಾನ್,
24 西弗、提链、比亚绿、
೨೪ಜೀಫ್, ಟೆಲೆಮ್, ಬೆಯಾಲೋತ್,
25 夏琐·哈大他、加略·希斯 (加略·希斯 就是夏琐)、
೨೫ಹಾಚೋರ್ ಹದತ್ತಾ, ಹಾಚೋರ್ ಎಂಬ ಕಿರ್ಯೋತ್, ಹೆಚ್ರೋನ್, ಹಾಚೋರ್,
26 亚曼、示玛、摩拉大、
೨೬ಅಮಾಮ್, ಶೆಮ, ಮೋಲಾದಾ,
27 哈萨·迦大、黑实门、伯·帕列、
೨೭ಹಚರ್ ಗದ್ದಾ, ಹೆಷ್ಮೋನ್, ಬೇತ್ಪೆಲೆಟ್,
28 哈萨·书亚、别是巴、比斯约他、
೨೮ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,
29 巴拉、以因、以森、
೨೯ಬಾಲಾ, ಇಯ್ಯೀಮ್, ಎಚೆಮ್,
30 伊勒多腊、基失、何珥玛、
೩೦ಎಲ್ಟೋಲದ್, ಕೆಸೀಲ್, ಹೊರ್ಮಾ,
31 洗革拉、麦玛拿、三撒拿、
೩೧ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,
32 利巴勿、实忻、亚因、临门,共二十九座城,还有属城的村庄。
೩೨ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು,
33 在高原有以实陶、琐拉、亚实拿、
೩೩ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ
34 撒挪亚、隐·干宁、他普亚、以楠、
೩೪ಜನೋಹ, ಏಂಗನ್ನೀಮ್,
35 耶末、亚杜兰、梭哥、亚西加、
೩೫ತಪ್ಪೂಹ, ಏನಾಮ್, ಯರ್ಮೂತ್,
36 沙拉音、亚底他音、基底拉、基底罗他音,共十四座城,还有属城的村庄。
೩೬ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
37 又有洗楠、哈大沙、麦大·迦得、
೩೭ಚೆನಾನ್, ಹದಾಷಾ, ಮಿಗ್ದಲ್ಗಾದ್,
38 底连、米斯巴、约帖、
೩೮ದಿಲಾನ್, ಮಿಚ್ಪೆ, ಯೊಕ್ತೇಲ್,
39 拉吉、波斯加、伊矶伦、
೩೯ಲಾಕೀಷ್, ಬೊಚ್ಕತ್, ಎಗ್ಲೋನ್,
40 迦本、拉幔、基提利、
೪೦ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್‌ದಾಗೋನ್, ನಾಮಾ,
41 基低罗、伯·大衮、拿玛、玛基大,共十六座城,还有属城的村庄。
೪೧ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ, ಅವುಗಳ ಗ್ರಾಮಗಳು.
42 又有立拿、以帖、亚珊、
೪೨ಲಿಬ್ನಾ, ಎತೆರ್, ಆಷಾನ್,
43 益弗他、亚实拿、尼悉、
೪೩ಇಪ್ತಾಹ,
44 基伊拉、亚革悉、玛利沙,共九座城,还有属城的村庄。
೪೪ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
45 又有以革伦和属以革伦的镇市村庄;
೪೫ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮ ಪಟ್ಟಣಗಳು.
46 从以革伦直到海,一切靠近亚实突之地,并属其地的村庄。
೪೬ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು;
47 亚实突和属亚实突的镇市村庄;迦萨和属迦萨的镇市村庄;直到埃及小河,并大海和靠近大海之地。
೪೭ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.
48 在山地有沙密、雅提珥、梭哥、
೪೮ಬೆಟ್ಟದ ಮೇಲಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,
49 大拿、基列·萨拿(基列·萨拿就是底璧)、
೪೯ದನ್ನಾ, ದೆಬೀರ್, ಎಂಬ ಕಿರ್ಯತ್ ಸನ್ನಾ,
50 亚拿伯、以实提莫、亚念、
೫೦ಅನಾಬ್, ಎಷ್ಟೆಮೋ, ಅನೀಮ್,
51 歌珊、何伦、基罗,共十一座城,还有属城的村庄。
೫೧ಗೋಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
52 又有亚拉、度玛、以珊、
೫೨ಅರಬ್, ದೂಮಾ, ಎಷಾನ್,
53 雅农、伯·他普亚、亚非加、
೫೩ಯಾನೂಮ್, ಬೇತ್ ತಪ್ಪೂಹ, ಅಫೇಕಾ,
54 宏他、基列·亚巴(基列·亚巴就是希伯 )、洗珥,共九座城,还有属城的村庄。
೫೪ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.
55 又有玛云、迦密、西弗、淤他、
೫೫ಮಾವೋನ್,
56 耶斯列、约甸、撒挪亚、
೫೬ಕರ್ಮೆಲ್, ಜೀಫ್, ಯುಟ್ಟಾ,
57 该隐、基比亚、亭纳,共十座城,还有属城的村庄。
೫೭ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
58 又有哈忽、伯·夙、基突、
೫೮ಹಲ್ಹೂಲ್, ಬೇತ್‌ಚೂರ್, ಗೆದೋರ್,
59 玛腊、伯·亚诺、伊勒提君,共六座城,还有属城的村庄。
೫೯ಮಾರಾತ್, ಬೇತನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
60 又有基列·巴力(基列·巴力就是基列·耶琳)、拉巴,共两座城,还有属城的村庄。
೬೦ಕಿರ್ಯಾತ್ಯಾರೀಮ್ ಅನಿಸಿಕೊಳ್ಳುವ ಕಿರ್ಯಾತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು.
61 在旷野有伯·亚拉巴、密丁、西迦迦、
೬೧ಅರಣ್ಯದಲ್ಲಿರುವ ಬೇತ್ ಆರಾಬಾ, ಮಿದ್ದೀನ್, ಸೆಕಾಕಾ,
62 匿珊、盐城、隐·基底,共六座城,还有属城的村庄。
೬೨ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.
63 至于住耶路撒冷的耶布斯人,犹大人不能把他们赶出去,耶布斯人却在耶路撒冷与犹大人同住,直到今日。
೬೩ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.

< 约书亚记 15 >