< 雅歌 7 >

1 王女啊,你的脚在鞋中何其美好! 你的大腿圆润,好像美玉, 是巧匠的手做成的。
ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.
2 你的肚脐如圆杯, 不缺调和的酒; 你的腰如一堆麦子, 周围有百合花。
ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು, ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ.
3 你的两乳好像一对小鹿, 就是母鹿双生的。
ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ.
4 你的颈项如象牙台; 你的眼目像希实本、巴特·拉并门旁的水池; 你的鼻子仿佛朝大马士革的黎巴嫩塔。
ನಿನ್ನ ಕೊರಳು ದಂತದ ಗೋಪುರ, ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.
5 你的头在你身上好像迦密山; 你头上的发是紫黑色; 王的心因这下垂的发绺系住了。
ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.
6 我所爱的,你何其美好! 何其可悦,使人欢畅喜乐!
ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನೆಷ್ಟು ಸುಂದರ, ನೀನೆಷ್ಟು ಮನೋಹರ!
7 你的身量好像棕树; 你的两乳如同其上的果子,累累下垂。
ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು.
8 我说:我要上这棕树,抓住枝子。 愿你的两乳好像葡萄累累下垂, 你鼻子的气味香如苹果;
ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.
9 你的口如上好的酒。 〔新娘〕 女子说:为我的良人下咽舒畅, 流入睡觉人的嘴中。
ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.
10 我属我的良人, 他也恋慕我。
೧೦ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.
11 我的良人,来吧! 你我可以往田间去; 你我可以在村庄住宿。
೧೧ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ!
12 我们早晨起来往葡萄园去, 看看葡萄发芽开花没有, 石榴放蕊没有; 我在那里要将我的爱情给你。
೧೨ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.
13 风茄放香, 在我们的门内有各样新陈佳美的果子; 我的良人,这都是我为你存留的。
೧೩ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

< 雅歌 7 >