< Salme 100 >

1 (En Salme. Til Takofferet.) Råb af Fryd for HERREN, al jorden,
ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
2 tjener HERREN med Glæde, kom for hans Åsyn med Jubel!
ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
3 Kend, at HERREN er Gud! Han skabte os, vi er hans, hans Folk og den Hjord, han vogter.
ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
4 Gå ind i hans Porte med Takkesang, med Lovsange ind i hans Forgårde, tak ham og lov hans Navn!
ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.
5 Thi god er HERREN, hans Miskundhed varer evindelig, fra Slægt til Slægt hans Trofasthed!
ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

< Salme 100 >