< Luke 8 >

1 And it came to pass afterwards that he went through [the country] city by city, and village by village, preaching and announcing the glad tidings of the kingdom of God; and the twelve [were] with him,
ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.
2 and certain women who had been healed of wicked spirits and infirmities, Mary who was called Magdalene, from whom seven demons had gone out,
ಇದಲ್ಲದೆ ದುರಾತ್ಮಗಳಿಂದಲೂ ರೋಗಗಳಿಂದಲೂ ಬಿಡುಗಡೆ ಹೊಂದಿದ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲಿನ ಎಂದು ಕರೆಯಲಾದ ಮರಿಯಳು,
3 and Joanna, wife of Chuza, Herod's steward, and Susanna, and many others, who ministered to him of their substance.
ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.
4 And a great crowd coming together, and those who were coming to him out of each city, he spoke by parable:
ಪ್ರತಿಯೊಂದು ಪಟ್ಟಣದಿಂದ ಬಹುಜನರು ಅವರ ಬಳಿಗೆ ಒಟ್ಟಾಗಿ ಸೇರಿ ಬರಲು ಯೇಸು ಒಂದು ಸಾಮ್ಯವನ್ನು ಅವರಿಗೆ ಹೇಳಿದರು.
5 The sower went out to sow his seed; and as he sowed, some fell along the way, and it was trodden under foot, and the birds of the heaven devoured it up;
“ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುತ್ತಿರುವಾಗ, ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು; ಅವು ಕಾಲ್ತುಳಿತಕ್ಕೆ ಒಳಗಾದವು, ಆಕಾಶದ ಪಕ್ಷಿಗಳು ಅವುಗಳನ್ನು ಹೆಕ್ಕಿ ತಿಂದವು.
6 and other fell upon the rock, and having sprung up, it was dried up because it had not moisture;
ಇದಲ್ಲದೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು, ಅವು ಮೊಳೆತ ಕೂಡಲೇ ತೇವ ಇಲ್ಲದಿರುವ ಕಾರಣ ಒಣಗಿಹೋದವು.
7 and other fell in the midst of the thorns, and the thorns having sprung up with [it] choked it;
ಇನ್ನು ಕೆಲವು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆಗ ಮುಳ್ಳುಗಿಡಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
8 and other fell into the good ground, and having sprung up bore fruit a hundredfold. As he said these things he cried, He that has ears to hear, let him hear.
ಉಳಿದ ಬೀಜಗಳು ಒಳ್ಳೆಯ ನೆಲದ ಮೇಲೆ ಬಿದ್ದವು. ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.” ಇದನ್ನು ಯೇಸು ಹೇಳಿ, “ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ,” ಎಂದು ಒತ್ತಿ ಹೇಳಿದರು.
9 And his disciples asked him [saying], What may this parable be?
ಯೇಸುವಿನ ಶಿಷ್ಯರು ಅವರನ್ನು ಈ ಸಾಮ್ಯದ ಅರ್ಥ ಏನಾಗಿರಬಹುದು? ಎಂದು ಕೇಳಿದರು.
10 And he said, To you it is given to know the mysteries of the kingdom of God, but to the rest in parables, in order that seeing they may not see, and hearing they may not understand.
ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’
11 But the parable is this: The seed is the word of God.
“ಆ ಸಾಮ್ಯದ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.
12 But those by the wayside are those who hear; then comes the devil and takes away the word from their heart that they may not believe and be saved.
ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆ ಹೊಂದಿಕೊಳ್ಳದಂತೆ, ಪಿಶಾಚನು ಬಂದು ಅವರ ಹೃದಯದೊಳಗಿಂದ, ಆ ವಾಕ್ಯವನ್ನು ತೆಗೆದುಬಿಡುತ್ತಾನೆ, ಇವರೇ ಆ ಬೀಜಗಳು ಬಿದ್ದ ಪಕ್ಕದ ದಾರಿಯಾಗಿದ್ದಾರೆ.
13 But those upon the rock, those who when they hear receive the word with joy; and these have no root, who believe for a time, and in time of trial fall away.
ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.
14 But that that fell where the thorns were, these are they who having heard go away and are choked under cares and riches and pleasures of life, and bring no fruit to perfection.
ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.
15 But that in the good ground, these are they who in an honest and good heart, having heard the word keep it, and bring forth fruit with patience.
ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.
16 And no one having lighted a lamp covers it with a vessel or puts it under a couch, but sets it on a lamp-stand, that they who enter in may see the light.
“ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚುವುದಿಲ್ಲ, ಇಲ್ಲವೆ ಮಂಚದ ಕೆಳಗೆ ಇಡುವುದಿಲ್ಲ. ಆದರೆ ಮನೆಯೊಳಗೆ ಪ್ರವೇಶಿಸುವವರು ಬೆಳಕನ್ನು ಕಾಣುವಂತೆ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
17 For there is nothing hid which shall not become manifest, nor secret which shall not be known and come to light.
ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ಬೆಳಕಿಗೆ ಬಾರದೆ ಇರುವ ರಹಸ್ಯವು ಯಾವುದೂ ಇಲ್ಲ.
18 Take heed therefore how ye hear; for whosoever has, to him shall be given, and whosoever has not, even what he seems to have shall be taken from him.
ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು.
19 And his mother and his brethren came to him, and could not get to him because of the crowd.
ಯೇಸುವಿನ ತಾಯಿ ಮತ್ತು ಸಹೋದರರು ಅವರಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಅವರ ಬಳಿಗೆ ಹೋಗಲಾರದೆ ಇದ್ದರು.
20 And it was told him [saying], Thy mother and thy brethren stand without, wishing to see thee.
ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮನ್ನು ಕಾಣಬೇಕೆಂದು, ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.
21 But he answering said to them, My mother and my brethren are those who hear the word of God and do [it].
ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನ್ನ ತಾಯಿ ಮತ್ತು ನನ್ನ ಸಹೋದರರು ಆಗಿದ್ದಾರೆ,” ಎಂದು ಹೇಳಿದರು.
22 And it came to pass on one of the days, that he entered into a ship, himself and his disciples; and he said to them, Let us pass over to the other side of the lake; and they set off from shore.
ಒಂದು ದಿನ ಯೇಸು ತಮ್ಮ ಶಿಷ್ಯರಿಗೆ, “ನಾವು ಕೆರೆಯ ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು, ಆಗ ಅವರು ದೋಣಿಯನ್ನು ಹತ್ತಿ ಹೊರಟರು.
23 And as they sailed, he fell asleep; and a sudden squall of wind came down on the lake, and they were filled [with water], and were in danger;
ಆದರೆ ಅವರು ಪ್ರಯಾಣ ಮಾಡುತ್ತಿದ್ದಾಗ, ಯೇಸು ನಿದ್ರಿಸುತ್ತಿದ್ದರು. ಆಗ ಬಿರುಗಾಳಿಯು ಸರೋವರದ ಮೇಲೆ ಬೀಸಲು, ದೋಣಿಯು ನೀರಿನಿಂದ ತುಂಬಿದ್ದರಿಂದ, ಅವರು ಅಪಾಯಕ್ಕೊಳಗಾದರು.
24 and coming to [him] they woke him up, saying, Master, master, we perish. But he, rising up, rebuked the wind and the raging of the water; and they ceased, and there was a calm.
ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಗುರುವೇ, ಗುರುವೇ, ನಾವು ಮುಳುಗುತ್ತಿದ್ದೇವೆ!” ಎಂದರು. ಆಗ ಯೇಸು ಎದ್ದು ಬಿರುಗಾಳಿಯನ್ನೂ ರಭಸವಾಗಿ ಬರುತ್ತಿದ್ದ ಅಲೆಗಳನ್ನೂ ಗದರಿಸಿದರು; ಆಗ ಬಿರುಗಾಳಿಯು ನಿಂತು ಹೋಗಿ, ಎಲ್ಲಾ ಪ್ರಶಾಂತವಾಯಿತು.
25 And he said to them, Where is your faith? And, being afraid, they were astonished, saying to one another, Who then is this, that he commands even the winds and the water, and they obey him?
ಆಗ ಯೇಸು ತಮ್ಮ ಶಿಷ್ಯರಿಗೆ, “ನಿಮ್ಮ ನಂಬಿಕೆ ಎಲ್ಲಿ?” ಎಂದರು. ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು, “ಇವರು ಯಾರಿರಬಹುದು? ಗಾಳಿಗೂ ನೀರಿಗೂ ಸಹ ಅಪ್ಪಣೆ ಕೊಡುತ್ತಾರಲ್ಲಾ. ಅವು ಇವರು ಹೇಳಿದ ಹಾಗೆ ಕೇಳುತ್ತಾವಲ್ಲಾ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
26 And they arrived in the country of the Gadarenes, which is over against Galilee.
ಅವರು ಗಲಿಲಾಯಕ್ಕೆ ಎದುರಾಗಿದ್ದ, ಗೆರಸೇನರ ಸೀಮೆಗೆ ತಲುಪಿದರು.
27 And as he got out [of the ship] on the land, a certain man out of the city met him, who had demons a long time, and put on no clothes, and did not abide in a house, but in the tombs.
ಯೇಸು ದಡಕ್ಕೆ ಸೇರಿದಾಗ, ಬಹುಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆ ಯಾವ ಮನೆಯಲ್ಲಿ ಇರದೆ ಸಮಾಧಿಯ ಗುಹೆಗಳಲ್ಲಿ ವಾಸಿಸುತ್ತಿದ್ದ ಒಬ್ಬ ಮನುಷ್ಯನನ್ನು ಯೇಸು ಸಂಧಿಸಿದರು.
28 But seeing Jesus, he cried out, and fell down before him, and with a loud voice said, What have I to do with thee, Jesus Son of the Most High God? I beseech thee torment me not.
ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
29 For he had commanded the unclean spirit to go out from the man. For very often it had seized him; and he had been bound, kept with chains and fetters; and breaking the bonds he was driven by the demon into the deserts.
ಏಕೆಂದರೆ, ದೆವ್ವಕ್ಕೆ ಅವನಿಂದ ಹೊರಗೆ ಬರಬೇಕೆಂದು ಯೇಸು ಅಪ್ಪಣೆ ಕೊಟ್ಟಿದ್ದರು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿದ್ದುದರಿಂದ, ಅವನು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿತನಾದರೂ ಅವನು ಆ ಬಂಧನಗಳನ್ನು ಮುರಿದು ಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಏಕಾಂತ ಸ್ಥಳಕ್ಕೆ ಓಡಿಸಿಕೊಂಡು ಹೋಗುತ್ತಿತ್ತು.
30 And Jesus asked him saying, What is thy name? And he said, Legion: for many demons had entered into him.
ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದರು. ಅದಕ್ಕವನು, “ಸೇನೆ,” ಎಂದನು. ಏಕೆಂದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
31 And they besought him that he would not command them to go away into the bottomless pit. (Abyssos g12)
ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು. (Abyssos g12)
32 And there was there a herd of many swine feeding on the mountain, and they besought him that he would suffer them to enter into those; and he suffered them.
ಆಗ ಅಲ್ಲಿ ಬೆಟ್ಟದ ಮೇಲೆ ಹಂದಿಗಳ ಹಿಂಡು ಮೇಯುತ್ತಿದ್ದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು, ಅವರು ಅವುಗಳಿಗೆ ಅನುಮತಿ ಕೊಟ್ಟರು.
33 And the demons, going out from the man, entered into the swine, and the herd rushed down the precipice into the lake, and were choked.
ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು.
34 But they that fed [them], seeing what had happened, fled, and told [it] to the city and to the country.
ಹಂದಿಗಳನ್ನು ಮೇಯಿಸುತ್ತಿದ್ದವರು ನಡೆದದ್ದನ್ನು ಕಂಡು, ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯಪಡಿಸಿದರು,
35 And they went out to see what had happened, and came to Jesus, and found the man from whom the demons had gone out, sitting, clothed and sensible, at the feet of Jesus. And they were afraid.
ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.
36 And they also who had seen it told them how the possessed man had been healed.
ನಡೆದದ್ದನ್ನು ಕಂಡವರು, ಯಾವ ರೀತಿಯಲ್ಲಿ ದೆವ್ವಪೀಡಿತನಾಗಿದ್ದವನು ಮತ್ತೆ ಸ್ವಸ್ಥನಾದನೆಂದು ಅವರಿಗೆ ತಿಳಿಯಪಡಿಸಿದರು.
37 And all the multitude of the surrounding country of the Gadarenes asked him to depart from them, for they were possessed with great fear; and he, entering into the ship, returned.
ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.
38 But the man out of whom the demons had gone besought him that he might be with him. But he sent him away, saying,
ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ,
39 Return to thine house and relate how great things God has done for thee. And he went away through the whole city, publishing how great things Jesus had done for him.
“ನೀನು ನಿನ್ನ ಮನೆಗೆ ಹಿಂದಿರುಗಿ ಹೋಗಿ ದೇವರು ನಿನಗೆ ಎಂಥಾ ಮಹಾಕಾರ್ಯಗಳನ್ನು ಮಾಡಿದ್ದಾರೆಂಬುದನ್ನು ಹೇಳು,” ಎಂದು ಅವನನ್ನು ಕಳುಹಿಸಿಬಿಟ್ಟರು. ಅವನು ತನ್ನ ಮಾರ್ಗವಾಗಿ ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ಊರೆಲ್ಲಾ ಸಾರಿದನು.
40 And it came to pass when Jesus returned, the crowd received him gladly, for they were all expecting him.
ಯೇಸು ಹಿಂತಿರುಗಿ ಬಂದಾಗ ಅವರ ಬರುವಿಕೆಯನ್ನು ಎದುರುನೋಡುತ್ತಿದ್ದ ಜನರೆಲ್ಲರೂ ಅವರನ್ನು ಸ್ವಾಗತಿಸಿದರು.
41 And behold, a man came, whose name was Jairus, and he was [a] ruler of the synagogue, and falling at the feet of Jesus besought him to come to his house,
ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು
42 because he had an only daughter, about twelve years old, and she was dying. And as he went the crowds thronged him.
ಏಕೆಂದರೆ ಸುಮಾರು ಹನ್ನೆರಡು ವರ್ಷದ, ಅವನ ಒಬ್ಬಳೇ ಮಗಳು, ಸಾಯುವ ಹಾಗಿದ್ದಳು. ಯೇಸು ದಾರಿಯಲ್ಲಿ ಹೋಗುತ್ತಿದ್ದಾಗ, ಜನರು ಅವರನ್ನು ನೂಕಾಡುತ್ತಿದ್ದರು.
43 And a woman who had a flux of blood since twelve years, who, having spent all her living on physicians, could not be cured by any one,
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.
44 coming up behind, touched the hem of his garment, and immediately her flux of blood stopped.
ಅವಳು ಯೇಸುವಿನ ಹಿಂದೆ ಬಂದು ಅವರ ಉಡುಪಿನ ಅಂಚನ್ನು ಮುಟ್ಟಿದಳು, ಕೂಡಲೇ ಆಕೆಯ ರಕ್ತಸ್ರಾವವು ನಿಂತುಹೋಯಿತು.
45 And Jesus said, Who has touched me? But all denying, Peter and those with him said, Master, the crowds close thee in and press upon thee, and sayest thou, Who has touched me?
ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದರು. ಎಲ್ಲರೂ ನಿರಾಕರಿಸಿದರು, ಪೇತ್ರನು ಯೇಸುವಿಗೆ, “ಬೋಧಕರೇ, ಇಷ್ಟೊಂದು ಜನರು ನಿಮ್ಮನ್ನು ನೂಕುತ್ತಾ ನಿಮ್ಮನ್ನು ಒತ್ತುತ್ತಿದ್ದಾರಲ್ಲಾ” ಎಂದನು.
46 And Jesus said, Some one has touched me, for I have known that power has gone out from me.
ಆದರೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ನನ್ನಿಂದ ಗುಣಪಡಿಸುವ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು,” ಎಂದರು.
47 And the woman, seeing that she was not hid, came trembling, and falling down before him declared before all the people for what cause she had touched him, and how she was immediately healed.
ಆ ಸ್ತ್ರೀಯು, ತಾನು ಇನ್ನು ಮರೆಮಾಡಲು ಸಾಧ್ಯವಿಲ್ಲವೆಂದು ತಿಳಿದು, ನಡುಗುತ್ತಾ ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಯಾವ ಕಾರಣದಿಂದ ಆಕೆಯು ಯೇಸುವನ್ನು ಮುಟ್ಟಿದಳೆಂದೂ ಹೇಗೆ ತಾನು ಕೂಡಲೇ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಅವರಿಗೆ ತಿಳಿಯಪಡಿಸಿದಳು.
48 And he said to her, [Be of good courage, ] daughter; thy faith has healed thee; go in peace.
ಆಗ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು,” ಎಂದರು.
49 While he was yet speaking, comes some one from the ruler of the synagogue, saying to him, Thy daughter is dead; do not trouble the teacher.
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಒಬ್ಬನು ಬಂದು ಅಧಿಕಾರಿಗೆ, “ನಿನ್ನ ಮಗಳು ತೀರಿಹೋದಳು, ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದನು.
50 But Jesus, hearing it, answered him saying, Fear not: only believe, and she shall be made well.
ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, “ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು,” ಎಂದು ಹೇಳಿದರು.
51 And when he came to the house he suffered no one to go in but Peter and John and James and the father of the child and the mother.
ಯೇಸು ಯಾಯೀರನ ಮನೆಯೊಳಕ್ಕೆ ಬಂದಾಗ ಪೇತ್ರ, ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಬರಗೊಡಲಿಲ್ಲ.
52 And all were weeping and lamenting her. But he said, Do not weep, for she has not died, but sleeps.
ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಯೇಸು, “ಅಳಬೇಡಿರಿ, ಆಕೆಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ,” ಎಂದರು.
53 And they derided him, knowing that she had died.
ಆಕೆಯು ಸತ್ತಿದ್ದಾಳೆಂದು ತಿಳಿದು ಅಳುತ್ತಿದ್ದವರು ಯೇಸುವನ್ನು ಹಾಸ್ಯಮಾಡಿದರು.
54 But he, having turned them all out and taking hold of her hand, cried saying, Child, arise.
ಆದರೆ ಯೇಸು ಆಕೆಯ ಕೈಹಿಡಿದು, “ಮಗಳೇ, ಎದ್ದೇಳು!” ಎಂದು ಕರೆದರು.
55 And her spirit returned, and immediately she rose up; and he commanded [something] to eat to be given to her.
ಆಗ ಆಕೆಯ ಪ್ರಾಣವು ಹಿಂದಿರುಗಿ ಬಂತು. ಕೂಡಲೇ ಆಕೆಯು ಎದ್ದಳು. ಆಕೆಗೆ ತಿನ್ನಲು ಏನಾದರೂ ಕೊಡುವಂತೆ ಯೇಸು ಅಪ್ಪಣೆಕೊಟ್ಟರು.
56 And her parents were amazed; but he enjoined them to tell no one what had happened.
ಆಕೆಯ ತಂದೆತಾಯಿಗಳು ಬೆರಗಾದರು, ಆಗ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದರು.

< Luke 8 >