< Mark 16 >

1 Once the Sabbath had ended, Mary Magdalene, Mary the mother of James, and Salome bought aromatic ointments so that they could go and anoint Jesus' body.
ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು.
2 Very early Sunday morning, just at sunrise, they went to the tomb.
ವಾರದ ಮೊದಲನೆಯ ದಿನ ಮುಂಜಾನೆ ಸೂರ್ಯೋದಯವಾಗಲು ಅವರು ಸಮಾಧಿಯ ಬಳಿಗೆ ಬರುವಾಗ,
3 They were asking each other, “Who will roll away the stone for us from the entrance to the tomb?”
“ಸಮಾಧಿಯ ದ್ವಾರದಿಂದ ಆ ಬಂಡೆಯನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
4 But when they arrived and looked, they saw that the very large, heavy stone had already been rolled away.
ಏಕೆಂದರೆ ಆ ಬಂಡೆ ಬಹಳ ದೊಡ್ಡದಾಗಿತ್ತು. ಆದರೆ ಅವರು ಮತ್ತೆ ಕಂಡಾಗ ಆ ಬಂಡೆ ಉರುಳಿಸಲಾಗಿತ್ತು.
5 When they went into the tomb, they saw a young man sitting on the right, wearing a long white robe. They became very frightened.
ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.
6 “Don't be frightened,” he told them. “You are looking for Jesus the Nazarene, the one who was crucified. He is risen from the dead. He is not here.
ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.
7 Look, this is the place where they laid him to rest. Now go, and tell his disciples and Peter that he's going ahead of you to Galilee. You will see him there just as he told you.”
ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು.
8 They left and ran from the tomb, shaking and confused. They said nothing to anyone because they were too scared.
ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ ಸಮಾಧಿಯ ಬಳಿಯಿಂದ ಓಡಿಹೋದರು. ಅವರು ಹೆದರಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
9 (note: The most reliable and earliest manuscripts do not include Mark 16:9-20.) When Jesus rose from the dead on Sunday morning, he appeared first of all to Mary Magdalene, from whom he'd driven out seven demons.
(note: The most reliable and earliest manuscripts do not include Mark 16:9-20.) ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.
10 She went and told those who had been with him as they mourned and cried.
ಯೇಸುವಿನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಯೇಸುವಿನ ಬಗ್ಗೆ ಹೇಳಿದಳು.
11 When they heard that Jesus was alive and that she had seen him, they didn't believe it.
ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ, ಶಿಷ್ಯರು ನಂಬಲಿಲ್ಲ.
12 Later Jesus appeared in a different form to two other disciples who'd left to go to the countryside.
ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಯೇಸು ಅವರಿಗೆ ಬೇರೊಂದು ರೀತಿಯಲ್ಲಿ ಕಾಣಿಸಿಕೊಂಡರು.
13 They returned and told the others, but they didn't believe them either.
ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಇವರನ್ನೂ ಅವರು ನಂಬಲಿಲ್ಲ.
14 After this he appeared to the eleven disciples as they were eating. He rebuked them for their lack of trust and their stubbornness, because they had not believed those who'd seen him after he had risen.
ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.
15 Then he told them, “Go to the whole world, and announce the good news to everyone.
ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.
16 Anyone who trusts in me and is baptized will be saved, but anyone who chooses not to trust will be condemned.
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
17 The following signs will accompany those who trust in me: in my name they will drive out demons; they will speak new languages;
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.
18 they will be able to handle snakes; if they drink something poisonous they won't be harmed; they will place their hands on the sick and they will be healed.”
ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.
19 Then, the Lord Jesus, when he had finished speaking to them, was taken up into heaven where he sat down at the right hand of God.
ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.
20 The disciples went out and spread the good news everywhere, and the Lord worked with them, confirming the message through miraculous signs that accompanied it.
ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.

< Mark 16 >