< 2 Kings 3 >

1 Nowe Iehoram the sonne of Ahab beganne to reigne ouer Israel in Samaria, the eighteenth yeere of Iehoshaphat King of Iudah, and reigned twelue yeeres.
ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
2 And he wrought euill in the sight of the Lord, but not like his father nor like his mother: for he tooke away the image of Baal that his father had made.
ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.
3 Neuerthelesse, he cleaued vnto the sinnes of Ieroboam, the sonne of Nebat, which made Israel to sinne, and departed not therefrom.
ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
4 Then Mesha King of Moab had store of sheepe, and rendred vnto the King of Israel an hundreth thousande lambes, and an hundreth thousande rammes with the wooll.
ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
5 But when Ahab was dead, the king of Moab rebelled against the King of Israel.
ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
6 Therefore King Iehoram went out of Samaria the same season, and nombred all Israel,
ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
7 And went, and sent to Iehoshaphat King of Iudah, saying, The King of Moab hath rebelled against me: wilt thou goe with me to battell against Moab? And he answered, I will goe vp: for I am, as thou art, my people, as thy people, and mine horses as thine horses.
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.
8 Then said he, What way shall we goe vp? And he answered, The way of the wildernesse of Edom.
ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.
9 So went the King of Israel and the king of Iudah, and the King of Edom, and when they had compassed the way seuen dayes, they had no water for the hoste, nor for the cattell that followed them.
ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.
10 Therefore the King of Israel sayde, Alas, that the Lord hath called these three Kings, to giue them into the hand of Moab.
೧೦ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.
11 But Iehoshaphat saide, Is there not here a Prophet of the Lord, that we may inquire of the Lord by him? And one of the King of Israels seruants answered, and said, Here is Elisha the sonne of Shaphat, which powred water on the handes of Eliiah.
೧೧ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
12 Then Iehoshaphat saide, The worde of the Lord is with him. Therefore the King of Israel, and Iehoshaphat, and the King of Edom went downe to him.
೧೨ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
13 And Elisha sayde vnto the King of Israel, What haue I to doe with thee? get thee to the prophets of thy father and to the prophets of thy mother. And the King of Israel saide vnto him, Nay: for the Lord hath called these three Kings, to giue them into the hande of Moab.
೧೩ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.
14 Then Elisha said, As the Lord of hostes liueth, in whose sight I stande, if it were not, that I regarde the presence of Iehoshaphat the King of Iudah, I woulde not haue looked towarde thee, nor seene thee.
೧೪ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.
15 But nowe bring me a minstrel. And when the minstrel played, the hand of the Lord came vpon him.
೧೫ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
16 And he saide, Thus saith the Lord, Make this valley full of ditches.
೧೬ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.
17 For thus saith the Lord, Ye shall neither see winde nor see raine, yet the valley shalbe filled with water, that ye may drinke, both ye and your cattel, and your beastes.
೧೭‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.
18 But this is a small thing in the sight of the Lord: for he will giue Moab into your hande.
೧೮“ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
19 And ye shall smite euery strong towne and euery chiefe citie, and shall fell euery faire tree, and shall stoppe all the fountaines of water, and marre euery good fielde with stones.
೧೯ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.
20 And in the morning whe the meat offring was offred, beholde, there came water by the way of Edom: and the countrey was filled with water.
೨೦ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.
21 And when al the Moabites heard that the Kings were come vp to fight against them, they gathered all that was able to put on harnesse, and vpwarde, and stood in their border.
೨೧ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.
22 And they rose earely in the morning, when the sunne arose vpon the water, and the Moabites saw the water ouer against them, as red as blood.
೨೨ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
23 And they saide, This is blood the Kings are surely slaine, and one hath smitten another: now therefore, Moab, to the spoyle.
೨೩ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
24 And when they came to the host of Israel, the Israelites arose vp, and smote the Moabites, so that they fled before them, but they inuaded them, and smote Moab.
೨೪ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.
25 And they destroyed the cities: and on all the good field euery man cast his stone, and filled them and they stopt all the fountaines of water, and felled all the good trees: onely in Kirharaseth left they the stones thereof: howebeit they went about it with slings, and smote it.
೨೫ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.
26 And when the King of Moab saw that the battel was too sore for him, he tooke with him seuen hudreth men that drew the sword, to break through vnto the King of Edom: but they could not.
೨೬ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
27 Then he tooke his eldest sonne, that should haue reigned in his stead, and offered him for a burnt offring vpon the wall: so that Israel was sore grieued, and they departed from him, and returned to their countrey.
೨೭ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.

< 2 Kings 3 >