< Jeremiah 7 >

1 The woordes that came to Ieremiah from the Lord, saying,
ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
2 Stand in the gate of the Lordes house and crie this woorde there, and say, Heare the woorde of the Lord, all yee of Iudah that enter in at these gates to worship the Lord.
“ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.
3 Thus sayeth the Lord of hostes, the God of Israel, Amend your waies and your woorkes, and I will let you dwell in this place.
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.
4 Trust not in lying woordes, saying, The Temple of the Lord, the Temple of the Lord: this is the Temple of the Lord.
‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.
5 For if you amende and redresse your waies and your woorkes: if you execute iudgement betweene a man and his neighbour,
ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.
6 And oppresse not the stranger, the fatherlesse and the widow and shed no innocent blood in this place, neither walke after other gods to your destruction,
ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,
7 Then will I let you dwell in this place in the lande that I gaue vnto your fathers, for euer and euer.
ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.
8 Beholde, you trust in lying woordes, that can not profite.
ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.
9 Will you steale, murder, and commit adulterie, and sweare falsely and burne incense vnto Baal, and walke after other gods whome yee knowe not?
ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,
10 And come and stande before mee in this House, whereupon my Name is called, and saye, We are deliuered, though we haue done all these abominations?
೧೦ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?
11 Is this House become a denne of theeues, whereupon my Name is called before your eyes? Beholde, euen I see it, sayeth the Lord.
೧೧ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.
12 But go ye nowe vnto my place which was in Shilo, where I set my Name at the beginning, and beholde, what I did to it for the wickednesse of my people Israel.
೧೨“ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.
13 Therefore nowe because yee haue done all these woorkes, sayeth the Lord, (and I rose vp earely and spake vnto you: but when I spake, yee would not heare me, neither when I called, would yee answere).
೧೩ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.
14 Therefore will I do vnto this House, wherupon my Name is called, wherein also yee trust, euen vnto the place that I gaue to you and to your fathers, as I haue done vnto Shilo.
೧೪ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.
15 And I will cast you out of my sight, as I haue cast out all your brethren, euen the whole seede of Ephraim.
೧೫ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು.
16 Therfore thou shalt not pray for this people, neither lift vp crie or praier for them neither intreat me, for I will not heare thee.
೧೬“ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.
17 Seest thou not what they doe in the cities of Iudah and in the streetes of Ierusalem?
೧೭ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?
18 The children gather wood, and the fathers kindle the fire, and the women knede the dough to make cakes to the Queene of heauen and to powre out drinke offrings vnto other gods, that they may prouoke me vnto anger.
೧೮ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.
19 Doe they prouoke me to anger, sayeth the Lord, and not themselues to the confusion of their owne faces?
೧೯ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ” ಎಂದು ಯೆಹೋವನು ನುಡಿಯುತ್ತಾನೆ.
20 Therefore thus sayeth the Lord God, Beholde, mine anger and my wrath shall be powred vpon this place, vpon man and vpon beast, and vpon the tree of the fielde, and vpon the fruite of the grounde, and it shall burne and not bee quenched.
೨೦ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”
21 Thus sayth the Lord of hostes, the God of Israel, Put your burnt offerings vnto your sacrifices, and eat the flesh.
೨೧ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.
22 For I spake not vnto your fathers, nor commanded them, when I brought them out of the land of Egypt, concerning burnt offrings and sacrifices.
೨೨ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.
23 But this thing commanded I them, saying, Obey my voyce, and I will be your God, and yee shalbe my people: and walke yee in all the wayes which I haue commanded you, that it may be well vnto you.
೨೩ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
24 But they would not obey, nor incline their eare, but went after the counsels and the stubbernesse of their wicked heart, and went backewarde and not forwarde.
೨೪ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.
25 Since the day that your fathers came vp out of the lande of Egypt, vnto this day, I haue euen sent vnto you al my seruants the Prophets, rising vp earely euery day, and sending them.
೨೫“ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ.
26 Yet would they not heare me nor encline their eare, but hardened their necke and did worse then their fathers.
೨೬ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.
27 Therefore shalt thou speake al these words vnto them, but they will not heare thee: thou shalt also crie vnto them, but they will not answere thee.
೨೭“ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ.
28 But thou shalt say vnto them, This is a nation that heareth not the voice of the Lord their God, nor receiueth discipline: trueth is perished, and is cleane gone out of their mouth.
೨೮ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.
29 Cut off thine heare, O Ierusalem, and cast it away, and take vp a complaint on the hie places: for the Lord hath reiected and forsaken the generation of his wrath.
೨೯ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.
30 For the children of Iudah haue done euill in my sight, sayth the Lord: they haue set their abominations in the House, whereupon my Name is called, to pollute it.
೩೦ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.
31 And they haue built the hie place of Topheth, which is in the valley of Ben-Hinnom to burne their sonnes and their daughters in the fire, which I commanded them not, neither came it in mine heart.
೩೧ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
32 Therefore beholde, the dayes come, sayeth the Lord, that it shall no more be called Topheth, nor the valley of Ben-Hinnom, but the valley of slaughter: for they shall burie in Topheth til there be no place.
೩೨ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ‘ಸಂಹಾರದ ತಗ್ಗು’ ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
33 And ye carkeises of this people shalbe meat for the foules of the heauen and for the beastes of the earth, and none shall fraie them away.
೩೩ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.
34 Then I will cause to cease from the cities of Iudah and from the streetes of Ierusalem the voice of mirth and the voice of gladnesse, the voice of the bridegrom and the voice of the bride: for the lande shalbe desolate.
೩೪ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.

< Jeremiah 7 >