< Psalms 111 >

1 Praise ye the Lord. I will prayse the Lord with my whole heart in the assemblie and Congregation of the iust.
ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.
2 The workes of the Lord are great, and ought to be sought out of al them that loue them.
ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.
3 His worke is beautifull and glorious, and his righteousnesse endureth for euer.
ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.
4 He hath made his wonderfull workes to be had in remembrance: the Lord is mercifull and full of compassion.
ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.
5 He hath giuen a portion vnto them that feare him: he wil euer be mindfull of his couenant.
ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ
6 He hath shewed to his people the power of his workes in giuing vnto them the heritage of the heathen.
ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.
7 The workes of his handes are trueth and iudgement: all his statutes are true.
ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.
8 They are stablished for euer and euer, and are done in trueth and equitie.
ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.
9 He sent redemption vnto his people: he hath commanded his couenant for euer: holy and fearefull is his Name.
ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.
10 The beginning of wisedome is the feare of the Lord: all they that obserue them, haue good vnderstanding: his praise endureth for euer.
೧೦ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

< Psalms 111 >