< 1 Samuel 16 >

1 And YHWH said unto Samuel, How long wilt thou mourn for Saul, seeing I have rejected him from reigning over Israel? fill thine horn with oil, and go, I will send thee to Jesse the Bethlehemite: for I have provided me a king among his sons.
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
2 And Samuel said, How can I go? if Saul hear it, he Will kill me. And YHWH said, Take an heifer with thee, and say, I am come to sacrifice to YHWH.
ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.
3 And call Jesse to the sacrifice, and I will shew thee what thou shalt do: and thou shalt anoint unto me him whom I name unto thee.
ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.
4 And Samuel did that which YHWH spake, and came to Bethlehem. And the elders of the town trembled at his coming, and said, Comest thou peaceably?
ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು
5 And he said, Peaceably: I am come to sacrifice unto YHWH: sanctify yourselves, and come with me to the sacrifice. And he sanctified Jesse and his sons, and called them to the sacrifice.
ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.
6 And it came to pass, when they were come, that he looked on Eliab, and said, Surely YHWH 's anointed is before him.
ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.
7 But YHWH said unto Samuel, Look not on his countenance, or on the height of his stature; because I have refused him: for YHWH seeth not as man seeth; for man looketh on the outward appearance, but YHWH looketh on the heart.
ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
8 Then Jesse called Abinadab, and made him pass before Samuel. And he said, Neither hath YHWH chosen this.
ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ” ಎಂದನು.
9 Then Jesse made Shammah to pass by. And he said, Neither hath YHWH chosen this.
ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, “ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ” ಎಂದು ಹೇಳಿದನು.
10 Again, Jesse made seven of his sons to pass before Samuel. And Samuel said unto Jesse, YHWH hath not chosen these.
೧೦ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, “ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ” ಎಂದು ನುಡಿದನು.
11 And Samuel said unto Jesse, Are here all thy children? And he said, There remaineth yet the youngest, and, behold, he keepeth the sheep. And Samuel said unto Jesse, Send and fetch him: for we will not sit down till he come hither.
೧೧ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.
12 And he sent, and brought him in. Now he was ruddy, and withal of a beautiful countenance, and goodly to look to. And YHWH said, Arise, anoint him: for this is he.
೧೨ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು
13 Then Samuel took the horn of oil, and anointed him in the midst of his brethren: and the Spirit of YHWH came upon David from that day forward. So Samuel rose up, and went to Ramah.
೧೩ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
14 But the Spirit of YHWH departed from Saul, and an evil spirit from YHWH troubled him.
೧೪ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ
15 And Saul's servants said unto him, Behold now, an evil spirit from Elohim troubleth thee.
೧೫ಅವನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ.
16 Let ourmaster now command thy servants, which are before thee, to seek out a man, who is a cunning player on an harp: and it shall come to pass, when the evil spirit from Elohim is upon thee, that he shall play with his hand, and thou shalt be well.
೧೬ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.
17 And Saul said unto his servants, Provide me now a man that can play well, and bring him to me.
೧೭ಸೌಲನು ಅವರಿಗೆ, “ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
18 Then answered one of the servants, and said, Behold, I have seen a son of Jesse the Bethlehemite, that is cunning in playing, and a mighty valiant man, and a man of war, and prudent in matters, and a comely person, and YHWH is with him.
೧೮ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.
19 Wherefore Saul sent messengers unto Jesse, and said, Send me David thy son, which is with the sheep.
೧೯ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿಸಿದನು.
20 And Jesse took an ass laden with bread, and a bottle of wine, and a kid, and sent them by David his son unto Saul.
೨೦ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.
21 And David came to Saul, and stood before him: and he loved him greatly; and he became his armourbearer.
೨೧ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.
22 And Saul sent to Jesse, saying, Let David, I pray thee, stand before me; for he hath found favour in my sight.
೨೨ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.
23 And it came to pass, when the evil spirit from Elohim was upon Saul, that David took an harp, and played with his hand: so Saul was refreshed, and was well, and the evil spirit departed from him.
೨೩ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.

< 1 Samuel 16 >