< 1 Corinthians 11 >

1 Be ye followers of me, even as I also [am] of Christ.
ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.
2 Now I praise you, brethren, that ye remember me in all things, and keep the ordinances, as I delivered [them] to you.
ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
3 But I would have you know, that the head of every man is Christ; and the head of the woman [is] the man; and the head of Christ [is] God.
ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.
4 Every man praying or prophesying, having [his] head covered, dishonoureth his head.
ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ, ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
5 But every woman that prayeth or prophesieth with [her] head uncovered dishonoureth her head: for that is even all one as if she were shaven.
ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.
6 For if the woman be not covered, let her also be shorn: but if it be a shame for a woman to be shorn or shaven, let her be covered.
ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.
7 For a man indeed ought not to cover [his] head, forasmuch as he is the image and glory of God: but the woman is the glory of the man.
ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.
8 For the man is not of the woman; but the woman of the man.
ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.
9 Neither was the man created for the woman; but the woman for the man.
ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ, ಆದರೆ ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು.
10 For this cause ought the woman to have power on [her] head because of the angels.
೧೦ಹೀಗಿರುವುದರಿಂದ ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.
11 Nevertheless neither is the man without the woman, neither the woman without the man, in the Lord.
೧೧ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ.
12 For as the woman [is] of the man, even so [is] the man also by the woman; but all things of God.
೧೨ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ ಸಮಸ್ತವನ್ನು ಸೃಷ್ಟಿಸಿದಾತನು.
13 Judge in yourselves: is it comely that a woman pray unto God uncovered?
೧೩ನಿಮ್ಮೊಳಗೆ ನೀವೇ ಯೋಚಿಸಿ ತೀರ್ಮಾನಿಸಿಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವುದು ಯುಕ್ತವೋ
14 Doth not even nature itself teach you, that, if a man have long hair, it is a shame unto him?
೧೪ಪುರುಷನು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ,
15 But if a woman have long hair, it is a glory to her: for [her] hair is given her for a covering.
೧೫ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ?
16 But if any man seem to be contentious, we have no such custom, neither the churches of God.
೧೬ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ.
17 Now in this that I declare [unto you] I praise [you] not, that ye come together not for the better, but for the worse.
೧೭ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ.
18 For first of all, when ye come together in the church, I hear that there be divisions among you; and I partly believe it.
೧೮ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.
19 For there must be also heresies among you, that they which are approved may be made manifest among you.
೧೯ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.
20 When ye come together therefore into one place, [this] is not to eat the Lord’s supper.
೨೦ನೀವೆಲ್ಲರು ಸೇರಿಬರುವಾಗ ನೀವು ಮಾಡುವ ಭೋಜನವು ಕರ್ತನ ಭೋಜನವಲ್ಲ.
21 For in eating every one taketh before [other] his own supper: and one is hungry, and another is drunken.
೨೧ಭೋಜನ ಮಾಡುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ. ಹೀಗೆ ಒಬ್ಬನು ಹಸಿದಿರುತ್ತಾನೆ ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
22 What? have ye not houses to eat and to drink in? or despise ye the church of God, and shame them that have not? What shall I say to you? shall I praise you in this? I praise [you] not.
೨೨ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ.
23 For I have received of the Lord that which also I delivered unto you, That the Lord Jesus the [same] night in which he was betrayed took bread:
೨೩ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,
24 And when he had given thanks, he brake [it], and said, Take, eat: this is my body, which is broken for you: this do in remembrance of me.
೨೪“ಇದುನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರಹೀಗೆ ಮಾಡಿರಿ” ಅಂದನು.
25 After the same manner also [he took] the cup, when he had supped, saying, This cup is the new testament in my blood: this do ye, as oft as ye drink [it], in remembrance of me.
೨೫ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.
26 For as often as ye eat this bread, and drink this cup, ye do shew the Lord’s death till he come.
೨೬ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
27 Wherefore whosoever shall eat this bread, and drink [this] cup of the Lord, unworthily, shall be guilty of the body and blood of the Lord.
೨೭ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.
28 But let a man examine himself, and so let him eat of [that] bread, and drink of [that] cup.
೨೮ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.
29 For he that eateth and drinketh unworthily, eateth and drinketh damnation to himself, not discerning the Lord’s body.
೨೯ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.
30 For this cause many [are] weak and sickly among you, and many sleep.
೩೦ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.
31 For if we would judge ourselves, we should not be judged.
೩೧ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.
32 But when we are judged, we are chastened of the Lord, that we should not be condemned with the world.
೩೨ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.
33 Wherefore, my brethren, when ye come together to eat, tarry one for another.
೩೩ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವುದಕ್ಕೆ ಸೇರಿಬರುವಾಗ ಒಬ್ಬರು ಇನ್ನೊಬ್ಬರಿಗಾಗಿ ಕಾಯಿರಿ.
34 And if any man hunger, let him eat at home; that ye come not together unto condemnation. And the rest will I set in order when I come.
೩೪ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.

< 1 Corinthians 11 >