< Luke 16 >

1 Jesus said to his disciples, “There was a rich man who had a steward; and this steward was maliciously accused to him of wasting his estate.
ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದು: “ಒಬ್ಬ ಐಶ್ವರ್ಯವಂತನಿದ್ದನು, ಅವನಿಗಿದ್ದ ಒಬ್ಬ ನಿರ್ವಾಹಕನು ಅವನ ಸರಕುಗಳನ್ನು ಹಾಳು ಮಾಡುತ್ತಿದ್ದಾನೆಂದು ಅವನಿಗೆ ಯಾರೋ ದೂರು ಹೇಳಿದರು.
2 So the master called him and said ‘What is this that I hear about you? Give in your accounts, for you cannot act as steward any longer.’
ಆಗ ಐಶ್ವರ್ಯವಂತನು ಆ ನಿರ್ವಾಹಕನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವುದು? ನಿನ್ನ ಲೆಕ್ಕವನ್ನು ಒಪ್ಪಿಸು. ನೀನು ಇನ್ನು ಮೇಲೆ ನಿರ್ವಾಹಕನಾಗಿರಲು ಆಗಲ್ಲ,’ ಎಂದನು.
3 ‘What am I to do,’ the steward asked himself, ‘now that my master is taking the steward’s place away from me? I have not strength to dig, and I am ashamed to beg.
“ಆಗ ಆ ನಿರ್ವಾಹಕನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ. ಅಗೆಯಲು ನನಗೆ ಶಕ್ತಿಯಿಲ್ಲ, ಭಿಕ್ಷೆ ಬೇಡಲು ನನಗೆ ನಾಚಿಕೆ.
4 I know what I will do, so that, as soon as I am turned out of my stewardship, people may welcome me into their homes.’
ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ, ನಾನು ಏನು ಮಾಡಬೇಕಾದದ್ದು ಗೊತ್ತಾಯಿತು’ ಎಂದುಕೊಂಡನು.
5 One by one he called up his master’s debtors. ‘How much do you owe my master?’ he asked of the first.
“ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲವೆಷ್ಟು?’ ಎಂದು ಕೇಳಲು,
6 ‘Four hundred and forty gallons of oil,’ answered the man. ‘Here is your agreement,’ he said; ‘sit down at once and make it two hundred and twenty.’
“‘ಅವನು, 3,000 ಲೀಟರ್ ಎಣ್ಣೆ,’ ಎಂದನು. “ಆಗ ನಿರ್ವಾಹಕನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೋ, ಬೇಗ ಕುಳಿತುಕೊಂಡು 1,500 ಲೀಟರ್ ಎಂದು ಬರೆ,’ ಎಂದು ಹೇಳಿದನು.
7 And you, the steward said to the next, ‘how much do you owe?’ ‘Seventy quarters of wheat,’ he replied. ‘Here is your agreement,’ the steward said; ‘make it fifty-six.’
“ಬಳಿಕ ಅವನು ಮತ್ತೊಬ್ಬನಿಗೆ, ‘ನೀನೆಷ್ಟು ಸಾಲ ತೀರಿಸಬೇಕು,’ ಎಂದು ಕೇಳಲು, “30 ‘ಟನ್ ಗೋಧಿ,’ ಎಂದನು. “ಆಗ ಅವನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೊಂಡು 24 ಟನ್ ಎಂದು ಬರೆ,’ ಎಂದನು.
8 His master complimented this dishonest steward on the shrewdness of his action. And indeed men of the world are shrewder in dealing with their fellow men than those who have the light. (aiōn g165)
“ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ. (aiōn g165)
9 And I say to you ‘Win friends for yourselves with your dishonest money,’ so that, when it comes to an end, there may be a welcome for you into the Eternal Home. (aiōnios g166)
ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು. (aiōnios g166)
10 The person who is trustworthy in the smallest matter is trustworthy in a great one also; and the person who is dishonest in the smallest matter is dishonest in a great one also.
“ಸ್ವಲ್ಪವಾದದ್ದರಲ್ಲಿ ನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ನಂಬಿಗಸ್ತರಾಗಿರುವರು ಮತ್ತು ಸ್ವಲ್ಪವಾದದ್ದರಲ್ಲಿ ಅಪನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ಅಪನಂಬಿಗಸ್ತರಾಗಿರುವರು.
11 So, if you have proved untrustworthy with the dishonest money, who will trust you with the true?
ಆದ್ದರಿಂದ ಲೌಕಿಕ ಸಂಪತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ, ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
12 And, if you have proved untrustworthy with what does not belong to us, who will give you what is really our own?
ಮತ್ತೊಬ್ಬರಿಗೆ ಸೇರಿದ ವಸ್ತುಗಳಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ ನಿಮ್ಮ ಪಾಲನ್ನು ನಿಮಗೆ ಯಾರು ಒಪ್ಪಿಸುವರು?
13 No servant can serve two masters, for, either they will hate one and love the other, or else they will attach themselves to one and despise the other. You cannot serve both God and money.”
“ಯಾವ ಸೇವಕನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು. ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ,” ಎಂದರು.
14 All this was said within hearing of the Pharisees, who were lovers of money, and they began to sneer at Jesus.
ಆಗ ಹಣದಾಶೆಯಿಂದ ಕೂಡಿದ ಫರಿಸಾಯರು, ಇವುಗಳನ್ನು ಕೇಳಿ ಯೇಸುವನ್ನು ಪರಿಹಾಸ್ಯ ಮಾಡಿದರು.
15 “You,” said Jesus, “are the ones who justify themselves before the world, but God can read your hearts; and what is highly esteemed among people may be an abomination in the sight of God.
ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.
16 The Law and the prophets sufficed until the time of John. Since then the good news of the kingdom of God has been told, and everybody has been forcing their way into it.
“ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ.
17 It would be easier for the heavens and the earth to disappear than for one stroke of a letter in the Law to be lost.
ನಿಯಮದ ಒಂದು ಚುಕ್ಕೆಯು ಬಿದ್ದುಹೋಗುವುದಕ್ಕಿಂತ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.
18 Everyone who divorces his wife and marries another woman is an adulterer, and the man who marries a divorced woman is an adulterer.
“ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.”
19 There was once a rich man, who dressed in purple robes and fine linen, and feasted every day in great splendor.
ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.
20 Near his gateway there had been laid a beggar named Lazarus, who was covered with sores,
ಅವನ ಬಾಗಿಲಲ್ಲಿ, ಮೈತುಂಬಾ ಹುಣ್ಣುಗಳಿದ್ದ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದಿರುತ್ತಿದ್ದನು.
21 and who longed to satisfy his hunger with what fell from the rich man’s table. Even the dogs came and licked his sores.
ಧನವಂತನ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ತಿನ್ನುವುದಕ್ಕೆ ಆ ಲಾಜರನು ಹಂಬಲಿಸುತ್ತಿದ್ದನು. ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
22 After a time the beggar died, and was taken by the angels to be with Abraham. The rich man also died and was buried.
“ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.
23 In Hades he looked up in his torment, and saw Abraham at a distance and Lazarus at his side. (Hadēs g86)
ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು. (Hadēs g86)
24 So he called out ‘Pity me, Father Abraham, and send Lazarus to dip the tip of his finger in water and cool my tongue, for I am suffering agony in this flame.’
ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.
25 ‘Child,’ answered Abraham, ‘remember that you in your lifetime received what you thought desirable, just as Lazarus received what was not desirable; but now he has his consolation here, while you are suffering agony.
“ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.
26 And not only that, but between you and us there lies a great chasm, so that those who wish to pass from here to you cannot, nor can they cross from there to us.’
ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಂತರ ಸ್ಥಾಪಿಸಿದೆ,’ ಎಂದನು.
27 ‘Then, Father,’ he said, ‘I beg you to send Lazarus to my father’s house –
“ಆಗ ಅವನು, ‘ಅಪ್ಪಾ, ಹಾಗಾದರೆ ನೀನು ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
28 For I have five brothers to warn them, so that they may not come to this place of torture also.’
ನನಗೆ ಐದು ಮಂದಿ ಸಹೋದರರಿದ್ದಾರೆ. ಅವರೂ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಲಾಜರನು ಅವರನ್ನು ಎಚ್ಚರಿಸಲಿ,’ ಎಂದನು.
29 ‘They have the writings of Moses and the prophets,’ replied Abraham; ‘let them listen to them.’
“ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.
30 ‘But, Father Abraham,’ he urged, ‘if someone from the dead were to go to them, they would repent.’
“ಆಗ ಅವನು, ‘ಹಾಗಲ್ಲ, ತಂದೆ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಜೀವಂತವಾಗಿ ಅವರ ಬಳಿಗೆ ಹೋದರೆ, ಅವರು ಪಶ್ಚಾತ್ತಾಪ ಪಡುವರು,’ ಎಂದನು.
31 ‘If they do not listen to Moses and the prophets,’ answered Abraham, ‘they will not be persuaded, even if someone were to rise from the dead.’”
“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”

< Luke 16 >