< Acts 5 >

1 Now a man named Ananias, along with his wife Sapphira, sold a piece of property
ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ
2 and kept back some of the proceeds, with his wife also being aware of it. He brought a portion of the proceeds and laid it at the apostles' feet.
ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
3 But Peter said, “Ananias, why has Satan filled yoʋr heart to lie to the Holy Spirit and keep back some of the proceeds of the plot of land?
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
4 While it remained unsold, did it not remain yoʋrs? And once it was sold, was it not under yoʋr control? How is it that yoʋ have put this thing in yoʋr heart? Yoʋ have not lied to men but to God.”
ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
5 When Ananias heard these words, he fell down and breathed his last breath. And great fear came upon all who heard about it.
ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.
6 Then the young men rose, wrapped up his body, carried him out, and buried him.
ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.
7 About three hours later, his wife came in, not knowing what had happened.
ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
8 Peter said to her, “Tell me if you sold the plot of land for such and such a price.” She said, “Yes, for such a price.”
ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು.
9 Peter said to her, “Why is it that you have agreed to put the Spirit of the Lord to the test? Behold, the feet of those who buried yoʋr husband are at the door, and they will carry yoʋ out.”
ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
10 At once she fell down at his feet and breathed her last breath. When the young men came in, they found her dead, so they carried her out and buried her beside her husband.
೧೦ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
11 And great fear came upon the whole church and upon all who heard these things.
೧೧ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.
12 Now many signs and wonders were taking place among the people by the hands of the apostles, and all the believers were together with one accord in Solomon's portico.
೧೨ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
13 No one else dared to join them, but the people held them in high regard.
೧೩ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.
14 Yet more and more people believed in the Lord and were added to their number, a multitude of both men and women.
೧೪ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.
15 As a result, people carried the sick out into the streets and laid them on beds and mats, so that when Peter came by at least his shadow might fall on one of them.
೧೫ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
16 A multitude from the towns all around Jerusalem also gathered together, bringing the sick and those harassed by unclean spirits, and they were all healed.
೧೬ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.
17 Then the high priest rose up, along with all who were with him (that is, the sect of the Sadducees), and they were filled with jealousy.
೧೭ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,
18 So they arrested the apostles and put them in a public jail.
೧೮ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.
19 But during the night an angel of the Lord opened the doors of the prison, brought them out, and said,
೧೯ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
20 “Go stand in the temple courts and tell the people everything about this new life.”
೨೦“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.
21 When they heard this, they entered the temple courts at dawn and began teaching. When the high priest came, along with those who were with him, they called together the Sanhedrin—that is, the entire eldership of the sons of Israel—and sent officers to the prison to have the apostles brought before them.
೨೧ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.
22 But when the officers arrived, they did not find them in the prison. So they returned and reported,
೨೨ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,
23 “We found the prison locked up in complete security and the guards standing in front of the doors, but when we opened the doors, we found no one inside.”
೨೩“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.
24 When the high priest, the captain of the temple guard, and the chief priests heard this report, they were greatly perplexed by it, wondering what might come of this.
೨೪ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.
25 Then someone came and told them, “Behold, the men you put in prison are standing in the temple courts teaching the people!”
೨೫ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.
26 So the captain went with the officers and brought the apostles without the use of force, for they were afraid the people might stone them.
೨೬ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
27 After bringing the apostles in, they had them stand before the Sanhedrin, and the high priest asked them,
೨೭ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,
28 “Did we not strictly command you not to teach in this name? Yet behold, you have filled Jerusalem with your teaching, and you are determined to bring the blood of this man upon us.”
೨೮“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.
29 But Peter and the apostles answered, “We must obey God rather than men.
೨೯ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
30 The God of our fathers raised up Jesus, whom you murdered by hanging him on a cross.
೩೦ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.
31 God exalted him to his right hand as Leader and Savior to grant repentance to Israel and remission of sins.
೩೧ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
32 Concerning these things we are his witnesses, and so is the Holy Spirit, whom God has given to those who obey him.”
೩೨ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.
33 When they heard this, they were furious and resolved to put them to death,
೩೩ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.
34 but a Pharisee named Gamaliel, a teacher of the law who was held in honor by all the people, stood up in the Sanhedrin and gave orders to put the apostles outside for a little while.
೩೪ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
35 Then he said to the Sanhedrin, “Men of Israel, give careful consideration to what you are about to do to these men.
೩೫ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.
36 For before these days Theudas rose up, declaring himself to be somebody, and a number of men, about four hundred, responded to the call to join him. He was put to death, and all his followers were scattered and came to nothing.
೩೬ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
37 After this man, Judas the Galilean rose up in the days of the census and drew away many people after him. He also perished, and all his followers were scattered.
೩೭ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
38 So I say to you now, keep away from these men and leave them alone, for if this plan or this undertaking is of men, it will be stopped;
೩೮ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
39 but if it is of God, you cannot put a stop to it. You will only find yourselves fighting against God.”
೩೯ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.
40 They were persuaded by him, and after calling in the apostles, they beat them, commanded them not to speak in the name of Jesus, and released them.
೪೦ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
41 So the apostles went out from the presence of the Sanhedrin, rejoicing that they had been considered worthy to suffer dishonor for the name of Jesus.
೪೧ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
42 And every day, in the temple courts and from house to house, they did not cease teaching and preaching the good news that Jesus is the Christ.
೪೨ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.

< Acts 5 >