< Galatians 2 >

1 Then after fourteen years I went up again to Jerusalem with Barnabas, taking Titus along also.
ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು.
2 I went up in response to a revelation and presented to them the gospel that I preach among the Gentiles, but privately to those who were held in high esteem, to make sure that I was not running or had not run in vain.
ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.
3 But not even Titus, who was with me, was compelled to be circumcised, even though he is a Greek.
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.
4 Now this matter arose because of the false brothers who were secretly brought in, who slipped in to spy on the freedom we have in Christ Jesus, so that they might enslave us.
ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.
5 But we did not yield to them in submission for even an hour, so that the truth of the gospel might be preserved for you.
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.
6 Now from those who were esteemed to be something (what sort of men they once were makes no difference to me; God does not show partiality)—those, I say, who were held in high esteem added nothing to me.
ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.
7 On the contrary, they saw that I had been entrusted with the gospel to the uncircumcised, just as Peter had been entrusted with the gospel to the circumcised.
ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.
8 For he who worked through Peter in his apostleship to the circumcised also worked through me in my apostleship to the Gentiles.
ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.
9 When James, Cephas, and John, who were esteemed as pillars of the church, recognized the grace given to me, they gave the right hand of fellowship to Barnabas and me, agreeing that we should go to the Gentiles and that they should go to the circumcised.
ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.
10 They only asked us to remember the poor, the very thing I was eager to do.
೧೦ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.
11 But when Peter came to Antioch, I opposed him to his face, because he was blameworthy.
೧೧ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.
12 For he regularly ate with the Gentiles until certain men came from James. But when they came, he drew back and separated himself because he was afraid of the circumcision faction.
೧೨ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.
13 And the rest of the Jews acted hypocritically along with him, so that even Barnabas was led astray by their hypocrisy.
೧೩ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
14 But when I saw that they were not walking uprightly in accordance with the truth of the gospel, I said to Peter in front of them all, “If yoʋ, though a Jew, live like a Gentile and not like a Jew, why do yoʋ compel the Gentiles to live like Jews?”
೧೪ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”
15 We who are Jews by nature and not Gentile sinners
೧೫ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.”
16 know that a person is not justified by works of the law but through faith in Jesus Christ. So we too have put our faith in Christ Jesus so that we may be justified by faith in Christ and not by works of the law, because no flesh will be justified by works of the law.
೧೬ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
17 But if we ourselves have also been found to be sinners while seeking to be justified in Christ, is Christ then an agent of sin? Certainly not!
೧೭ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.
18 For if I build up again the very things that I tore down, I show myself to be a transgressor.
೧೮ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.
19 For through the law I died to the law so that I might live for God.
೧೯ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.
20 I have been crucified with Christ, and it is no longer I who live, but Christ who lives in me. The life that I now live in the flesh, I live by faith in the Son of God, who loved me and gave himself up for me.
೨೦ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
21 I do not nullify the grace of God, for if righteousness comes through the law, then Christ died for nothing.
೨೧ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.

< Galatians 2 >