< Matthew 22 >

1 Once again Jesus spoke to them in parables, saying,
ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,
2 “The kingdom of heaven can be compared to a king who prepared a wedding feast for his son.
“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
3 He sent his servants to call those who had been invited to the wedding feast, but they would not come.
ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
4 Again he sent other servants, saying, ‘Tell those who are invited, “Behold, I have prepared my dinner, my oxen and the fattened cattle have been slaughtered, and everything is ready. Come to the wedding feast.”’
ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.
5 But they paid no attention and went away, one to his own field and another to his business.
ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;
6 The rest seized his servants, mistreated them, and killed them.
ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.
7 When the king heard about it, he was furious. So he sent his armies, who destroyed those murderers and burned down their city.
ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
8 Then he said to his servants, ‘The wedding feast is ready, but those who were invited were not worthy.
ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.
9 Go therefore to where the roads exit the city and invite to the wedding feast anyone you find.’
ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.
10 So the servants went out to the roads and gathered together all whom they found, both evil and good, and the wedding feast was filled with guests.
೧೦ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
11 “But when the king came in to see the guests, he saw a man there who was not clothed with a wedding garment.
೧೧ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,
12 So he said to him, ‘Friend, how did yoʋ come in here without a wedding garment?’ But the man was speechless.
೧೨ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
13 Then the king said to the servants, ‘Bind his feet and hands, take him away, and throw him into the outer darkness. In that place there will be weeping and gnashing of teeth.’
೧೩ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
14 For many are called, but few are chosen.”
೧೪ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.
15 Then the Pharisees went and took counsel as to how they might ensnare Jesus in what he said.
೧೫ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
16 They sent their disciples to him, along with the Herodians, saying, “Teacher, we know that yoʋ are true and teach the way of God in truth and defer to no one, for yoʋ do not show partiality.
೧೬ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
17 Tell us then, what do yoʋ think? Is it lawful to pay taxes to Caesar or not?”
೧೭ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
18 But Jesus knew their evil intent and said, “Why are you testing me, you hypocrites?
೧೮ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?
19 Show me the coin for the tax.” So they brought him a denarius.
೧೯ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.
20 Then he said to them, “Whose image and inscription is this?”
೨೦ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ
21 They said to him, “Caesar's.” So he said to them, “Then render to Caesar the things that are Caesar's, and to God the things that are God's.”
೨೧ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
22 When they heard this, they were amazed. So they left him and went away.
೨೨ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.
23 On that day some Sadducees (who say there is no resurrection) came to Jesus and asked him,
೨೩ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.
24 “Teacher, Moses said, ‘If a man dies without having children, his brother must marry the widow and raise up offspring for him.’
೨೪ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
25 Now there were seven brothers among us. The first married and died, and having no offspring, he left his wife to his brother.
೨೫ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;
26 The same thing happened to the second and to the third, down to the seventh.
೨೬ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.
27 Last of all, the woman also died.
೨೭ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು.
28 In the resurrection, therefore, which of the seven will she be the wife of? For they all had her.”
೨೮ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು.
29 Jesus answered them, “You are in error because you know neither the Scriptures nor the power of God.
೨೯ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;
30 For in the resurrection people neither marry nor are they given in marriage. Instead, they are like angels of God in heaven.
೩೦ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.
31 But as for the resurrection of the dead, have you not read what God said to you:
೩೧ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,
32 ‘I am the God of Abraham, the God of Isaac, and the God of Jacob’? He is not the God of the dead, but of the living.”
೩೨‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.
33 And when the crowds heard this, they were astonished at his teaching.
೩೩ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.
34 Now when the Pharisees heard that Jesus had silenced the Sadducees, they gathered together.
೩೪ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
35 And one of them, a lawyer, asked Jesus a question to test him:
೩೫ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,
36 “Teacher, which is the greatest commandment in the law?”
೩೬“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ
37 Jesus said to him, “‘Yoʋ shall love the Lord yoʋr God with all yoʋr heart, with all yoʋr soul, and with all yoʋr mind.’
೩೭ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
38 This is the most important and greatest commandment.
೩೮ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.
39 And a second is like it: ‘Yoʋ shall love yoʋr neighbor as yoʋrself.’
೩೯ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
40 All the Law and the Prophets hang on these two commandments.”
೪೦ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.
41 While the Pharisees were gathered together, Jesus asked them,
೪೧ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ,
42 “What do you think about the Christ? Whose son is he?” They said to him, “David's.”
೪೨“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ
43 He said to them, “How is it then that David, in the Spirit, calls him ‘Lord,’ saying,
೪೩ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?
44 ‘The Lord said to my Lord, “Sit at my right hand until I make yoʋr enemies a footstool for yoʋr feet”’?
೪೪“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.
45 If David calls him ‘Lord,’ how is he his son?”
೪೫ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.
46 No one was able to say anything in reply, nor did anyone dare to ask him questions anymore from that day forward.
೪೬ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.

< Matthew 22 >