< Romains 3 >

1 Quel est donc l'avantage du Juif, ou quel est le profit de la Circoncision?
ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?
2 [Il est] grand en toute manière; surtout en ce que les oracles de Dieu leur ont été confiés.
ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.
3 Car qu'est-ce, si quelques-uns n'ont point cru? leur incrédulité anéantira-t-elle la fidélité de Dieu?
ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
4 Non sans doute! mais que Dieu soit véritable, et tout homme menteur; selon ce qui est écrit: afin que tu sois trouvé juste en tes paroles, et que tu aies gain de cause quand tu es jugé.
ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
5 Or si notre injustice recommande la justice de Dieu, que dirons-nous? Dieu est-il injuste quand il punit? ( je parle en homme.)
ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
6 Non sans doute! autrement, comment Dieu jugera-t-il le monde?
ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?
7 Et si la vérité de Dieu est par mon mensonge plus abondante pour sa gloire, pourquoi suis-je encore condamné comme pécheur?
ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
8 Mais plutôt, selon que nous sommes blâmés, et que quelques-uns disent que nous disons: pourquoi ne faisons-nous du mal, afin qu'il en arrive du bien? desquels la condamnation est juste.
“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
9 Quoi donc! sommes-nous plus excellents? Nullement. Car nous avons ci-devant convaincu que tous, tant Juifs que Grecs, sont assujettis au péché.
ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
10 Selon qu'il est écrit: il n'y a point de juste, non pas même un seul.
೧೦ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
11 Il n'y a personne qui ait de l'intelligence, il n'y a personne qui recherche Dieu.
೧೧ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.
12 Ils se sont tous égarés, ils se sont tous ensemble rendus inutiles: il n'y en a aucun qui fasse le bien, non pas même un seul.
೧೨ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
13 C'est un sépulcre ouvert que leur gosier; ils ont frauduleusement usé de leurs langues, il y a du venin d'aspic sous leurs lèvres.
೧೩ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.
14 Leur bouche est pleine de malédiction et d'amertume.
೧೪ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ.
15 Leurs pieds sont légers pour répandre le sang.
೧೫ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.
16 La destruction et la misère sont dans leurs voies.
೧೬ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ.
17 Et ils n'ont point connu la voie de la paix.
೧೭ಸಮಾಧಾನದ ಮಾರ್ಗವನ್ನೇ ಅರಿಯರು.
18 La crainte de Dieu n'est point devant leurs yeux.
೧೮ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.
19 Or nous savons que tout ce que la Loi dit, elle le dit à ceux qui sont sous la Loi, afin que toute bouche soit fermée, et que tout le monde soit coupable devant Dieu.
೧೯ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
20 C'est pourquoi nulle chair ne sera justifiée devant lui par les œuvres de la Loi: car par la Loi [est donnée] la connaissance du péché.
೨೦ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
21 Mais maintenant la justice de Dieu est manifestée sans la Loi, lui étant rendu témoignage par la Loi, et par les Prophètes.
೨೧ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
22 La justice, dis-je, de Dieu par la foi en Jésus-Christ, s'étend à tous et sur tous ceux qui croient;
೨೨ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
23 car il n'y a nulle différence, vu que tous ont péché, et qu'ils sont entièrement privés de la gloire de Dieu.
೨೩ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
24 Etant justifiés gratuitement par sa grâce, par la rédemption qui est en Jésus-Christ;
೨೪ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
25 Lequel Dieu a établi de tout temps pour [être une victime] de propitiation par la foi, en son sang, afin de montrer sa justice, par la rémission des péchés précédents, selon la patience de Dieu;
೨೫ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
26 Pour montrer, [dis-je], sa justice dans le temps présent, afin qu'il soit [trouvé] juste, et justifiant celui qui est de la foi de Jésus.
೨೬ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
27 Où est donc le sujet de se glorifier? Il est exclu. Par quelle Loi? [est-ce par la Loi] des œuvres? Non, mais par la Loi de la foi.
೨೭ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
28 Nous concluons donc que l'homme est justifié par la foi, sans les œuvres de la Loi.
೨೮ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ
29 [Dieu] est-il seulement le Dieu des Juifs? ne l'est-il pas aussi des Gentils? certes il l'est aussi des Gentils.
೨೯ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
30 Car il y a un seul Dieu qui justifiera par la foi la Circoncision, et le Prépuce [aussi] par la foi.
೩೦ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
31 Anéantissons-nous donc la Loi par la foi? Non sans doute! mais au contraire, nous affermissons la Loi.
೩೧ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.

< Romains 3 >