< Luc 7 >

1 Quand il eut achevé tous ces discours adressés au peuple, Jésus entra dans Capharnaüm.
ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕಪೆರ್ನೌಮಿಗೆ ಬಂದನು.
2 Or un centurion avait, malade et près de mourir, un serviteur qui lui était très cher.
ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು.
3 Ayant entendu parler de Jésus, il lui envoya quelques Anciens d'entre les Juifs, pour lui demander de venir et de guérir son serviteur.
ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು.
4 Ceux-ci, ayant abordé Jésus, le prièrent avec de grandes instances: «Il mérite, lui dirent-ils, que tu lui accordes cela,
ಅವರು ಯೇಸುವಿನ ಬಳಿಗೆ ಬಂದು, “ನಿನ್ನಿಂದ ಇಂಥ ಉಪಕಾರ ಹೊಂದುವುದಕ್ಕೆ ಅವನು ಯೋಗ್ಯನು,
5 car il aime notre nation et c'est lui qui nous a bâti la synagogue.»
ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು” ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು,
6 Jésus était parti avec eux; comme il n'était plus qu'à une o petite distance de la maison, le centurion envoya de ses amis lui dire: «Seigneur, ne prends pas tant de peine, car je ne suis pas digne que tu entres sous mon toit,
ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.
7 et c'est pour cela que je ne me suis pas moi-même jugé digne d'aller à toi. Mais donne un ordre et mon serviteur sera guéri.
ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
8 Car moi (qui ne suis pourtant qu'un subordonné) j'ai sous mes ordres des soldats, et si je dis à l'un: «Va-t'en», il s'en va; à l'autre: «Viens vient; à mon, esclave: «Fais cela», il le fait.»
ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು.
9 Jésus fut dans l'admiration de ce langage; et se tournant vers la foule qui le suivait: «Je vous le déclare, dit-il, même en Israël, je n'ai pas trouvé une foi aussi grande.»
ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.
10 De retour à la maison, les envoyés du centurion trouvèrent le serviteur en pleine santé.
೧೦ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಆಳು ಸ್ವಸ್ಥನಾಗಿರುವುದನ್ನು ಕಂಡರು.
11 Le lendemain il se dirigea vers une ville appelée Naïn; avec lui allaient un grand nombre de ses disciples et une foule considérable.
೧೧ಸ್ವಲ್ಪಕಾಲದ ನಂತರ ಆತನು ನಾಯಿನ್ ಎಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರು ಮತ್ತು ಬಹುಜನರು ಹೋದರು.
12 Comme il arrivait à la porte de la cité, il se trouva que l'on portait en terre un mort; c'était un fils unique dont la mère était veuve. Une grande quantité d'habitants de la ville étaient avec elle.
೧೨ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.
13 En la voyant, le Seigneur fut touché de compassions envers elle et lui dit: «Ne pleure point!»
೧೩ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ,
14 Puis il s'approcha et toucha le cercueil. Les porteurs s'arrêtèrent, et il dit: «Jeune homme, je te l'ordonne, lève-toi!»
೧೪ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.
15 Et le mort se dressa sur son séant et se mit à parler. Jésus le rendit à sa mère.
೧೫ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
16 La crainte les saisit tous et ils glorifiaient Dieu: «Un grand prophète, disaient-ils, a surgi parmi nous, et Dieu a visité son peuple.»
೧೬ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
17 Le bruit de ce qui s'était passé se répandit partout en Judée et dans tout le pays environnant.
೧೭ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.
18 Les disciples de Jean ayant rapporté tout cela à leur maître,
೧೮ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು,
19 celui-ci en désigna deux, et les envoya dire au Seigneur: «Es-tu celui qui doit venir, ou devons-nous en attendre un autre?»
೧೯ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.
20 S'étant donc présentés à Jésus, ces hommes lui dirent: «Jean-Baptiste nous a adressés à toi pour te dire: Es-tu celui qui doit venir ou devons-nous en attendre un autre?»
೨೦ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು.
21 Or, en cet instant même, Jésus guérissait nombre de malades, d'infirmes, de possédés; à beaucoup d'aveugles il faisait don de la vue.
೨೧ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.
22 Alors il fit aux messagers celte réponse: «Allez annoncer à Jean ce que vous avez vu et entendu: des aveugles voient, des estropiés marchent, des lépreux sont guéris, des sourds entendent, des morts ressuscitent, des pauvres entendent l'Évangiles.
೨೨ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.
23 Heureux est celui pour qui je ne serai pas une occasion de chute.»
೨೩ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು.
24 Quand les messagers furent partis, Jésus se mit à parler de Jean aux multitudes: «Au désert, qu'êtes-vous allés voir? Est-ce un roseau agité par le vent?
೨೪ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
25 Qu'êtes-vous allés voir? Est-ce un homme aux vêtements efféminés? Mais ceux qui se revêtent de riches habits et qui vivent au milieu des délices vivent dans les palais des rois.
೨೫ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.
26 Qu'êtes-vous donc allés voir? Est-ce un prophète? Oui, vous dis-je, et plus qu'un prophète.
೨೬ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ.
27 C'est celui dont il est écrit: Voici que j'envoie mon messager pour te précéder Et préparer ton chemin devant toi.
೨೭‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ.
28 «Je vous le déclare, parmi ceux que les femmes ont enfantés, nul n'est plus grand que Jean. Mais le plus petit dans le Royaume de Dieu est plus grand que lui.»
೨೮ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ.
29 «En se faisant baptiser du baptême de Jean, tout le peuple qui l'écoutait, même les publicains ont reconnu la justice de Dieu;
೨೯ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.
30 mais en ne se faisant pas baptiser par lui, les Pharisiens et les légistes ont rejeté le dessein de Dieu à leur égard.»
೩೦ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
31 «A qui donc assimilerai-je les hommes de cette génération-ci? et à qui ressemblent-ils?
೩೧ಯೇಸು ತಮ್ಮ ಬೋಧನೆಯ ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?
32 Ils ressemblent à des enfants assis sur la place publique qui se crient les uns aux autres: Nous avons joué de la flûte Et vous n'avez pas dansé; Nous avons entonné des chants lugubres Et vous n'avez pas pleuré.»
೩೨ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.
33 «Et, en effet, Jean-Baptiste est venu s'abstenant de manger du pain et de boire du vin; et vous dites: «Il est possédé d'un démon.»
೩೩ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ.
34 Le Fils de l'homme est venu mangeant et buvant comme tout le monde, et vous dites: «Voilà un amateur de bonne chère, un buveur de vin, un ami des publicains et des pécheurs.»
೩೪ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ.
35 «A la sagesse, justice est rendue par tous ses enfants.»
೩೫ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ” ಅಂದನು.
36 Un des Pharisiens le pria de venir manger chez lui. Jésus, étant donc entré dans la maison du Pharisien, se mit à table.
೩೬ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು.
37 Or, une femme de la ville qui vivait dans le péché, ayant appris qu'il était à table dans la maison de ce Pharisien, apporta un vase d'albâtre rempli de parfum.
೩೭ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು,
38 Elle se plaça derrière lui, en pleurant, et se tint à ses pieds, qu'elle arrosa d'abord de ses larmes et qu'elle essuya ensuite de ses cheveux, à ses pieds qu'elle baisa longtemps et qu'elle oignit de son parfum.
೩೮ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
39 Voyant cela, le Pharisien qui l'avait invité pensait en lui-même: «Si cet homme était prophète, il saurait qui est cette femme qui le touche; et ce qu'elle est: une pécheresse.
೩೯ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು.
40 Jésus alors s'adressant à lui: «Simon, j'ai quelque chose à te dire.» — «Parle, maître», répondit Simon.» —
೪೦ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.
41 «Un certain créancier avait deux débiteurs; le premier lui devait cinq cents deniers; et le second cinquante.
೪೧ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರುಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು.
42 Ni l'un ni l'autre n'ayant de quoi le payer, il fit à chacun d'eux remise de sa dette. Lequel des deux l'aimera le plus?»
೪೨ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ,
43 Simon fit cette réponse: «Celui, je suppose, auquel il a remis davantage.» — «Tu viens de juger en toute droiture», reprit Jésus;
೪೩ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ,
44 puis, se tournant vers la femme et parlant toujours à Simon: «Tu vois cette femme? Quand je suis entré dans ta maison tu ne m'as pas apporté d'eau pour mes pieds, mais elle, c'est avec ses larmes qu'elle les a arrosés, c'est avec ses cheveux qu'elle les a essuyés.
೪೪ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.
45 Tu ne m'as pas donné de baiser; mais elle, depuis l'instant où elle est entrée n'a cessé d'embrasser mes pieds.
೪೫ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ.
46 Sur ma tête, tu n'as pas fait d'onction d'huile; mais elle, ce sont mes pieds qu'elle a oints de parfum.
೪೬ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು.
47 A cause de cela, je te le déclare, ses nombreux péchés lui sont pardonnés, parce qu'elle a beaucoup aimé. Celui à qui on pardonne peu, aime peu.»
೪೭ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು.
48 Puis il lui dit à elle: «Tes péchés te sont pardonnés.» —
೪೮ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
49 «Qui est cet homme qui va jusqu'à pardonner des péchés?» se demandèrent entre eux les convives.
೪೯ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
50 Lui, cependant, dit à la femme: «Ta foi t'a sauvée; va en paix!»
೫೦ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.

< Luc 7 >