< 2 Mose 38 >

1 Und er machte den Brandopferaltar von Akazienholz, fünf Ellen lang und breit, gleich viereckig, und drei Ellen hoch.
ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
2 Und machte vier Hörner, die aus ihm gingen auf seinen vier Ecken, und überzog sie mit Erz.
ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.
3 Und machte allerlei Geräte zu dem Altar: Aschentöpfe, Schaufeln, Becken, Gabeln, Kohlenpfannen, alles aus Erz.
ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.
4 Und machte am Altar ein Gitter wie ein Netz von Erz umher, von untenauf bis an die Hälfte des Altars.
ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.
5 Und goß vier Ringe an die vier Enden des ehernen Gitters für die Stangen.
ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು.
6 Dieselben machte er aus Akazienholz und überzog sie mit Erz
ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು.
7 und tat sie in die Ringe an den Seiten des Altars, daß man ihn damit trüge; und machte ihn inwendig hohl.
ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು.
8 Und machte ein Handfaß von Erz und seinen Fuß auch von Erz aus Spiegeln der Weiber, die vor der Tür der Hütte des Stifts dienten.
ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.
9 Und er machte den Vorhof: Gegen Mittag mit einem Umhang, hundert Ellen lang, von gezwirnter weißer Leinwand,
ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು.
10 mit seinen zwanzig Säulen und zwanzig Füßen von Erz, aber ihre Haken und Querstäbe von Silber;
೧೦ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
11 desgleichen gegen Mitternacht hundert Ellen mit zwanzig Säulen und zwanzig Füßen von Erz, aber ihre Haken und Querstäbe von Silber;
೧೧ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
12 gegen Abend aber fünfzig Ellen mit zehn Säulen und zehn Füßen, aber ihre Haken und Querstäbe von Silber;
೧೨ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿದ್ದವು.
13 gegen Morgen auch fünfzig Ellen;
೧೩ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.
14 fünfzehn Ellen auf einer Seite mit drei Säulen und drei Füßen,
೧೪ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.
15 und auf der andern Seite auch fünfzehn Ellen mit drei Säulen und drei Füßen, daß ihrer so viele waren an der einen Seite des Tors am Vorhofe als an der andern.
೧೫
16 Alle Umhänge des Vorhofs waren von gezwirnter weißer Leinwand
೧೬ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು;
17 und die Füße der Säulen von Erz und ihre Haken und Querstäbe von Silber, also daß ihre Köpfe überzogen waren mit Silber. Und ihre Querstäbe waren silbern an allen Säulen des Vorhofs.
೧೭ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.
18 Und das Tuch in dem Tor des Vorhofs machte er gestickt von blauem und rotem Purpur, Scharlach und gezwirnter weißer Leinwand, zwanzig Ellen lang und fünf Ellen hoch, nach dem Maß der Umhänge des Vorhofs.
೧೮ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ.
19 Dazu vier Säulen und vier Füße von Erz, und ihre Haken von Silber und ihre Köpfe und ihre Querstäbe überzogen mit Silber.
೧೯ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು.
20 Und alle Nägel der Wohnung und des Vorhofs ringsherum waren von Erz.
೨೦ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು.
21 Das ist nun die Summe zu der Wohnung des Zeugnisses, die gezählt ward, wie Mose geboten hatte, durch den Dienst der Leviten unter der Hand Ithamars, des Sohnes Aarons, des Priesters.
೨೧ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.
22 Bezaleel, der Sohn Uris, des Sohnes Hur, vom Stamme Juda, machte alles, wie der HERR dem Mose geboten hatte,
೨೨ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.
23 und mit ihm Oholiab, der Sohn Ahisamachs, vom Stamme Dan, ein Meister zu schneiden, zu wirken und zu sticken mit blauem und rotem Purpur, Scharlach und weißer Leinwand.
೨೩ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.
24 Alles Gold, das verarbeitet ist in diesem ganzen Werk des Heiligtums, das zum Webeopfer gegeben ward, ist neunundzwanzig Zentner siebenhundertunddreißig Lot nach dem Lot des Heiligtums.
೨೪ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.
25 Des Silbers aber, das von der Gemeinde kam, war hundert Zentner tausendsiebenhundertfünfzig Lot nach dem Lot des Heiligtums:
೨೫ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್.
26 so manch Haupt, so manch halbes Lot nach dem Lot des Heiligtums, von allen, die gezählt wurden von zwanzig Jahren an und darüber, sechshundertmaltausend dreitausend fünfhundertundfünfzig.
೨೬ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.
27 Aus den hundert Zentnern Silber goß man die Füße des Heiligtums und die Füße des Vorhangs, hundert Füße aus hundert Zentnern, je einen Zentner zum Fuß.
೨೭ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು.
28 Aber aus tausend siebenhundert und fünfundsiebzig Loten wurden gemacht der Säulen Haken, und ihre Köpfe überzogen und ihre Querstäbe.
೨೮ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು.
29 Das Webeopfer aber des Erzes war siebzig Zentner zweitausendvierhundert Lot.
೨೯ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು.
30 Daraus wurden gemacht die Füße in der Tür der Hütte des Stifts und der eherne Altar und das eherne Gitter daran und alle Geräte des Altars,
೩೦ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,
31 dazu die Füße des Vorhofs ringsherum und die Füße des Tores am Vorhofe, alle Nägel der Wohnung und alle Nägel des Vorhofs ringsherum.
೩೧ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.

< 2 Mose 38 >